IND vs BAN: ನಾಲ್ಕನೇ ದಿನದಾಟದಲ್ಲಿ ಶುರುವಾದ ಭಾರತ-ಬಾಂಗ್ಲಾ ಪಂದ್ಯ

India vs Bangladesh,: India vs Bangladesh 2nd Test: ಕಾನ್ಪುರದಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿರುವ ಬಾಂಗ್ಲಾದೇಶ್ ತಂಡವು ಬ್ಯಾಟಿಂಗ್ ಮುಂದುವರೆಸಿದೆ.

IND vs BAN: ನಾಲ್ಕನೇ ದಿನದಾಟದಲ್ಲಿ ಶುರುವಾದ ಭಾರತ-ಬಾಂಗ್ಲಾ ಪಂದ್ಯ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 30, 2024 | 9:35 AM

ಕಾನ್ಪುರದ ಗ್ರೀನ್ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಶುರುವಾಗಿದೆ. ಶುಕ್ರವಾರ ಆರಂಭವಾಗಿದ್ದ ಈ ಪಂದ್ಯದ ಎರಡು ದಿನದಾಟಗಳು ಸಂಪೂರ್ಣ ಮಳೆಗೆ ಅಹುತಿಯಾಗಿತ್ತು. ಇದೀಗ ನಾಲ್ಕನೇ ದಿನದಾಟದೊಂದಿಗೆ ಪಂದ್ಯವು ಮುಂದುವರೆದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ತಂಡವು 35 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 107 ರನ್ ಕಲೆಹಾಕಿತು. ಈ ವೇಳೆ ಕಾರ್ಮೋಡ ಆವರಿಸಿದ್ದರಿಂದ ಮೊದಲ ದಿನದಾಟವನ್ನು ಸ್ಥಗಿತಗೊಳಿಸಲಾಗಿತ್ತು.

ಇನ್ನು 2ನೇ ದಿನದಾಟವು ಸಂಪೂರ್ಣವಾಗಿ ಮಳೆಗೆ ಅಹುತಿಯಾಗಿತ್ತು. ಭಾನುವಾರ ನಡೆಯಬೇಕಿದ್ದ ಮೂರನೇ ದಿನದಾಟವು ಒದ್ದೆ ಮೈದಾನದ ಕಾರಣದಿಂದ ರದ್ದುಗೊಳಿಸಲಾಯಿತು. ಇದೀಗ ಪಂದ್ಯವು ನಾಲ್ಕನೇ ದಿನದಾಟಕ್ಕೆ ಕಾಲಿಟ್ಟಿದ್ದು, ಹೀಗಾಗಿ ಈ ಮ್ಯಾಚ್​ ಡ್ರಾನಲ್ಲಿ ಅಂತ್ಯಗೊಳ್ಳುವ ಸಾಧ್ಯತೆ ಹೆಚ್ಚಿದೆ.

ಟೀಮ್ ಇಂಡಿಯಾಗೆ ಟ್ರೋಫಿ:

ಕಾನ್ಪುರ್ ಟೆಸ್ಟ್ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೆ ಟೀಮ್ ಇಂಡಿಯಾ ಸರಣಿ ಜಯಿಸಲಿದೆ. ಏಕೆಂದರೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 280 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಹೀಗಾಗಿ ದ್ವಿತೀಯ ಟೆಸ್ಟ್ ಪಂದ್ಯವು ಡ್ರಾ ಆದರೆ ಭಾರತ ತಂಡವು 1-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಳ್ಳಲಿದೆ.

ಹೀಗಾಗಿ ಗ್ರೀನ್ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಫಲಿತಾಂಶವು ಭಾರತ ತಂಡದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿಲ್ಲ. ಇದಾಗ್ಯೂ ಈ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಸುಗಮಗೊಳಿಸಬಹುದಿತ್ತು. ಆದರೀಗ 2 ದಿನದಾಟಗಳು ಮಳೆಗೆ ಅಹುತಿಯಾಗಿರುವ ಕಾರಣ ಈ ಪಂದ್ಯವು ಡ್ರಾ ನಲ್ಲಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಿದೆ.

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025 ರಲ್ಲಿ ಎಷ್ಟು ಪಂದ್ಯಗಳನ್ನಾಡಲಾಗುತ್ತದೆ? ಇಲ್ಲಿದೆ ಮಾಹಿತಿ

ಬಾಂಗ್ಲಾದೇಶ್ ಪ್ಲೇಯಿಂಗ್​ 11: ಶಾದ್ಮಾನ್ ಇಸ್ಲಾಂ, ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ಮೆಹದಿ ಹಸನ್ ಮಿರಾಝ್, ತೈಜುಲ್ ಇಸ್ಲಾಂ, ಹಸನ್ ಮಹಮೂದ್, ಖಾಲಿದ್ ಅಹ್ಮದ್.

Published On - 9:34 am, Mon, 30 September 24