IND vs BAN 2nd test Live Streaming: ಭಾರತ- ಬಾಂಗ್ಲಾ ನಡುವಿನ 2ನೇ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ ನಡೆಯಲ್ಲಿದೆ?

|

Updated on: Sep 22, 2024 | 6:45 PM

India vs Bangladesh 2nd test Cricket Match Live Streaming: ಎರಡನೇ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಟೀಂ ಇಂಡಿಯಾವನ್ನು ಸಹ ಪ್ರಕಟಿಸಲಾಗಿದೆ. ಇನ್ನು ಈ ಪಂದ್ಯ ಯಾವಾಗ? ಎಲ್ಲಿ ನಡೆಯಲ್ಲಿದೆ? ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ ಎಂಬಿತ್ಯಾದಿ ವಿವರ ಇಲ್ಲಿದೆ.

IND vs BAN 2nd test Live Streaming: ಭಾರತ- ಬಾಂಗ್ಲಾ ನಡುವಿನ 2ನೇ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ ನಡೆಯಲ್ಲಿದೆ?
ಭಾರತ- ಬಾಂಗ್ಲಾದೇಶ
Follow us on

ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಅದ್ಭುತ ಜಯ ಸಾಧಿಸುವ ಮೂಲಕ ಆತಿಥೇಯ ಭಾರತ ತಂಡವು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಚೆನ್ನೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ತಂಡದ ಬಹುತೇಕ ಎಲ್ಲ ಆಟಗಾರರು ಉತ್ತಮ ಪ್ರದರ್ಶನ ನೀಡಿದರು. ಇದೀಗ ಎರಡನೇ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಟೀಂ ಇಂಡಿಯಾವನ್ನು ಸಹ ಪ್ರಕಟಿಸಲಾಗಿದೆ. ಇನ್ನು ಈ ಪಂದ್ಯ ಯಾವಾಗ? ಎಲ್ಲಿ ನಡೆಯಲ್ಲಿದೆ? ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ ಎಂಬಿತ್ಯಾದಿ ವಿವರ ಇಲ್ಲಿದೆ.

ಪಂದ್ಯದ ಬಗ್ಗೆ ಪೂರ್ಣ ವಿವರ

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27 ರಿಂದ ಆರಂಭವಾಗಲಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಯಾವಾಗ ಆರಂಭವಾಗುತ್ತದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27 ರಂದು ಬೆಳಿಗ್ಗೆ 9.30 ಕ್ಕೆ ಆರಂಭವಾಗಲಿದೆ. ಬೆಳಗ್ಗೆ 9 ಗಂಟೆಗೆ ಟಾಸ್ ನಡೆಯಲಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯವನ್ನು ಯಾವ OTT ನಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಬಾಂಗ್ಲಾದೇಶ ಟೆಸ್ಟ್ ಪಂದ್ಯವನ್ನು ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ಜಿಯೋ ಸಿನಿಮಾ ವೆಬ್‌ಸೈಟ್‌ನಲ್ಲಿ ಲೈವ್ ಆಗಿ ವೀಕ್ಷಿಸಬಹುದು. ಲೈವ್ ಸ್ಟ್ರೀಮಿಂಗ್ ಉಚಿತವಾಗಿರುತ್ತದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯವನ್ನು ಯಾವ ಚಾನಲ್‌ನಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯವನ್ನು ಸ್ಪೋರ್ಟ್ಸ್ 18-1ಎಸ್‌ಡಿ, ಸ್ಪೋರ್ಟ್ಸ್ 18-1 ಎಚ್‌ಡಿ, ಸ್ಪೋರ್ಟ್ಸ್ 18-2 ಹಿಂದಿ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು

ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ ಮತ್ತು ಯಶ್ ದಯಾಳ್.

ಟೆಸ್ಟ್ ಸರಣಿಗೆ ಬಾಂಗ್ಲಾದೇಶ ತಂಡ: ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಜಾಕಿರ್ ಹಸನ್, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಾದ್ಮನ್ ಇಸ್ಲಾಂ, ಶಕೀಬ್ ಅಲ್ ಹಸನ್, ಮೆಹದಿ ಹಸನ್ ಮಿರಾಜ್, ಝಾಕರ್ ಅಲಿ ಅನಿಕ್, ತಸ್ಕಿನ್ ಅಹ್ಮದ್, ಲಿಟನ್ ದಾಸ್, ಹಸನ್ ಮಹಮೂದ್, ತೈಜುಲ್ ಇಸ್ಲಾಂ, ಮಹ್ಮುದುಲ್ ಹಸನ್ ಜಾಯ್, ನಹಿದ್ ರಾಣಾ, ಖಾಲಿದ್ ಅಹ್ಮದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ