IND vs BAN 2nd Test Match Live Streaming: ಸರಣಿ ಗೆಲುವ ತವಕದಲ್ಲಿ ಭಾರತ; ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಪಂದ್ಯ ಆರಂಭ?

IND vs BAN 2nd Test Match Live Streaming: ಗುರುವಾರದಿಂದ ಢಾಕಾದಲ್ಲಿ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯವನ್ನೂ ಗೆಲ್ಲುವುದರೊಂದಿಗೆ ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಇದೆ.

IND vs BAN 2nd Test Match Live Streaming: ಸರಣಿ ಗೆಲುವ ತವಕದಲ್ಲಿ ಭಾರತ; ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಪಂದ್ಯ ಆರಂಭ?
ind vs ban
Follow us
TV9 Web
| Updated By: Digi Tech Desk

Updated on:Dec 21, 2022 | 8:18 PM

ಬಾಂಗ್ಲಾದೇಶದ ಎದುರು ಏಕದಿನ ಸರಣಿಯನ್ನು ಸೋತಿದ್ದ ಭಾರತ ತಂಡ (India Vs Bangladesh) ಇದೀಗ ಟೆಸ್ಟ್ ಸರಣಿಯನ್ನು ಗೆಲ್ಲುವ ಇರಾದೆಯೊಂದಿಗೆ ಎರಡನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿದೆ. ಎರಡು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಭಾರತ ತಂಡ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಹೀಗಾಗಿ ಗುರುವಾರದಿಂದ ಢಾಕಾದಲ್ಲಿ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯವನ್ನೂ ಗೆಲ್ಲುವುದರೊಂದಿಗೆ ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ (Team India) ಇದೆ. ಆದರೆ ಉಭಯ ತಂಡಗಳಲ್ಲೂ ಆಟಗಾರರ ಗಾಯದ ಸರಣಿ ಹೆಚ್ಚಿದೆ. ಇಂಜುರಿಯಿಂದ ನಾಯಕ ರೋಹಿತ್ (Rohit Sharma) ಹಾಗೂ ನವದೀಪ್ ಸೈನಿ (Navdeep Saini) ಟೀಂ ಇಂಡಿಯಾದಿಂದ ಹೊರಬಿದ್ದಿದ್ದಾರೆ. ಆದರೆ, ಇದಕ್ಕೆ ತದ್ವಿರುದ್ದವಾಗಿ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಜುರಿಯಿಂದಾಗಿ ಬೌಲಿಂಗ್ ಮಾಡದ ತಂಡದ ನಾಯಕ ಶಕೀಬ್ ಅಲ್ ಹಸನ್ ಎರಡನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಬೌಲಿಂಗ್ ಮಾಡಲು ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ವರದಿಯಾಗಿದೆ.

ಬಾಂಗ್ಲಾದೇಶದ ಕೋಚ್ ಅಲನ್ ಡೊನಾಲ್ಡ್ ಈ ಬಗ್ಗೆ ಮಾಹಿತಿ ನೀಡಿದ್ದು, “ಶಕೀಬ್ ಈಗ ಚೇತರಿಸಿಕೊಂಡಿದ್ದಾರೆ. ಅವರು ಎರಡನೇ ಟೆಸ್ಟ್ ಪಂದ್ಯದಲ್ಲಿ ಬೌಲಿಂಗ್ ಮಾಡಲಿದ್ದಾರೆ. ಹಾಗೆಯೇ ಎರಡನೇ ಟೆಸ್ಟ್‌ನಲ್ಲಿ ವೇಗದ ಬೌಲರ್ ತಸ್ಕಿನ್ ಅಹ್ಮದ್ ಆಡಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

IND vs BAN: 2ನೇ ಟೆಸ್ಟ್​ಗೂ ಮುನ್ನ ಟೀಂ ಇಂಡಿಯಾಕ್ಕೆ ಬಿಗ್ ಶಾಕ್; ನಾಯಕ ರಾಹುಲ್​ಗೆ ಇಂಜುರಿ..!

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಹೀಗಿದೆ

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಡಿಸೆಂಬರ್ 22 ಬುಧವಾರದಿಂದ ಡಿಸೆಂಬರ್ 26 ರವರೆಗೆ ನಡೆಯಲಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಢಾಕಾದ ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಬೆಳಗ್ಗೆ 9 ಗಂಟೆಗೆ ಆರಂಭವಾಗಲಿದ್ದು, ಟಾಸ್ 8:30ಕ್ಕೆ ನಡೆಯಲಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯವನ್ನು ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೋಡಬಹುದು.

ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ನೋಡಬಹುದು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:41 pm, Wed, 21 December 22

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು