Sign In

By signing in or creating an account, you agree with Associated Broadcasting Company's Terms & Conditions and Privacy Policy.

INDvs BAN: ನಾಯಕ ಸೇರಿದಂತೆ ಮೂವರು ತಂಡದಿಂದ ಔಟ್! ಕೊನೆಯ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ

INDvs BAN: ಮೂರನೇ ಏಕದಿನ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯರಾಗಿರುವುದರಿಂದ ತಂಡದ ನಾಯಕತ್ವವನ್ನು ಕೆಎಲ್ ರಾಹುಲ್​ಗೆ ವಹಿಸಿದ್ದು, ಭಾರತವನ್ನು ಕ್ಲೀನ್ ಸ್ವೀಪ್​ನಿಂದ ಪಾರು ಮಾಡುವುದು ಅವರ ಮುಂದಿರುವ ದೊಡ್ಡ ಸವಾಲಾಗಿದೆ.

INDvs BAN: ನಾಯಕ ಸೇರಿದಂತೆ ಮೂವರು ತಂಡದಿಂದ ಔಟ್! ಕೊನೆಯ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ
IND vs BAN
Follow us
TV9 Web
| Updated By: ಪೃಥ್ವಿಶಂಕರ

Updated on:Dec 09, 2022 | 2:37 PM

ಭಾರತ ಮತ್ತು ಬಾಂಗ್ಲಾದೇಶ (India vs Bangladesh) ನಡುವೆ 3 ಪಂದ್ಯಗಳ ಏಕದಿನ ಸರಣಿಯ ಕೊನೆಯ ಏಕದಿನ ಪಂದ್ಯ ಶನಿವಾರ ನಡೆಯಲಿದೆ. ಆರಂಭಿಕ ಎರಡೂ ಪಂದ್ಯಗಳನ್ನು ಗೆದ್ದು ಟ್ರೋಫಿಯನ್ನು ವಶಪಡಿಸಿಕೊಂಡಿರುವ ಬಾಂಗ್ಲಾದೇಶ, ಟೀಂ ಇಂಡಿಯಾಕ್ಕೆ ವೈಟ್​ ವಾಶ್ ಆಘಾತ ನೀಡಲು ಪ್ರಯತ್ನಿಸುತ್ತಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ವಿಶೇಷವಾಗಿ ಏನ್ನನ್ನೂ ಸಾಧಿಸಲು ಸಾಧ್ಯವಾಗದಿದ್ದರೂ, ತಂಡದ ಮೂವರು ಆಟಗಾರರು ಇಂಜುರಿಗೊಂಡು ದೇಶಕ್ಕೆ ವಾಪಸ್ಸಾಗಿದ್ದಾರೆ. ಹೀಗಾಗಿ ಕೊನೆಯ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಹೊಸ ಮುಖಗಳು ಕಾಣಿಸಿಕೊಳ್ಳಲಿದ್ದು, ಈ ಔಪಚಾರಿಕ ಪಂದ್ಯಕ್ಕೆ ಟೀಂ ಇಂಡಿಯಾದ (Team India) ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದು ಎಲ್ಲರಲ್ಲೂ ಕುತೂಹಲ ಹೆಚ್ಚಿಸಿದೆ. ಈಗಾಗಲೇ ಸರಣಿ ಸೋತಿರುವ ಟೀಂ ಇಂಡಿಯಾ ಅಂತಿಮ ಪಂದ್ಯವನ್ನು ಗೆದ್ದು, ಮುಜುಗರ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದರಿಂದ ತಂಡದಲ್ಲಿ ಯಾವ ಆಟಗಾರನಿಗೆ ಅವಕಾಶ ನೀಡಲಿದೆ ಎಂಬದು ಪ್ರಶ್ನೆಯಾಗಿದೆ.

ಬಾಂಗ್ಲಾದೇಶ ವಿರುದ್ಧದ ಈ ಏಕದಿನ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ ಸೇರಿದಂತೆ 3 ಭಾರತೀಯ ಆಟಗಾರರು ಗಾಯಗೊಂಡಿದ್ದರು. ಇಂತಹ ಪರಿಸ್ಥಿತಿಯಲ್ಲಿ ಮೂರನೇ ಏಕದಿನ ಪಂದ್ಯದಲ್ಲಿ ತಂಡದಲ್ಲಿ ಸಾಕಷ್ಟು ಬದಲಾವಣೆಗಳು ಕಾಣಲಿವೆ. ಅಲ್ಲದೆ ಇದಕ್ಕೆ ಪೂರಕವೆಂಬಂತೆ ಈ ಪಂದ್ಯಕ್ಕೂ ಮುನ್ನ ಕುಲದೀಪ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

3 ಭಾರತೀಯ ಆಟಗಾರರಿಗೆ ಇಂಜುರಿ

ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ನಾಯಕ ರೋಹಿತ್ ಗಾಯಗೊಂಡಿದ್ದರು. ಇದರ ನಂತರ ಕೊನೆಯ ಹಂತದಲ್ಲಿ ಬ್ಯಾಟಿಂಗ್​ಗೆ ಬಂದಿದ್ದ ರೋಹಿತ್ ಅಜೇಯ ಅರ್ಧಶತಕ ಬಾರಿಸಿದರಾದರೂ ತಂಡವನ್ನು ಗೆಲುವಿನ ದಡ ಸೇರಿಸಲು ಆಗಲಿಲ್ಲ. ಈಗ ಇಂಜುರಿಗೊಂಡಿರುವ ರೋಹಿತ್ ಕೊನೆಯ ಪಂದ್ಯಕ್ಕೆ ಅಲಭ್ಯರಾಗಿದ್ದು, ಈಗಾಗಲೇ ಅವರು ಚಿಕಿತ್ಸೆಗಾಗಿ ಮುಂಬೈ ತಲುಪಿದ್ದಾರೆ ಎಂಬುದು ಸುದ್ದಿ. ಈ ಪಂದ್ಯದಲ್ಲಿ ದೀಪಕ್ ಚಾಹರ್ ಕೂಡ ಗಾಯಗೊಂಡಿದ್ದರಿಂದ ಅವರೂ ಕೂಡ ತಂಡದಿಂದ ಹೊರಗುಳಿದಿದ್ದಾರೆ. ಈ ಇಬ್ಬರಲ್ಲದೆ ಮೊದಲ ಏಕದಿನ ಪಂದ್ಯದಲ್ಲಿ ಇಂಜುರಿಗೆ ತುತ್ತಾಗಿದ್ದ ಯುವ ವೇಗಿಕುಲದೀಪ್ ಸೇನ್ ಕೂಡ ಸರಣಿಯಿಂದ ಹೊರಗುಳಿದಿದ್ದಾರೆ.

ಆಯ್ಕೆ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗನ ಆಯ್ಕೆ ಖಚಿತ; ರೋಹಿತ್- ದ್ರಾವಿಡ್​​ಗೆ ನಡುಕ ಶುರು..!

ಕೆಎಲ್ ರಾಹುಲ್​ಗೆ ನಾಯಕತ್ವ

ಮೂರನೇ ಏಕದಿನ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯರಾಗಿರುವುದರಿಂದ ತಂಡದ ನಾಯಕತ್ವವನ್ನು ಕೆಎಲ್ ರಾಹುಲ್​ಗೆ ವಹಿಸಿದ್ದು, ಭಾರತವನ್ನು ಕ್ಲೀನ್ ಸ್ವೀಪ್​ನಿಂದ ಪಾರು ಮಾಡುವುದು ಅವರ ಮುಂದಿರುವ ದೊಡ್ಡ ಸವಾಲಾಗಿದೆ. ರೋಹಿತ್ ನಿರ್ಗಮನದಿಂದಾಗಿ ಭಾರತದ ಅಗ್ರ ಕ್ರಮಾಂಕ ನಲುಗಿದೆ. ಕಳೆದ ಪಂದ್ಯದಲ್ಲಿ, ವಿರಾಟ್ ಕೊಹ್ಲಿ ಶಿಖರ್ ಧವನ್ ಅವರೊಂದಿಗೆ ಓಪನಿಂಗ್ ಮಾಡಿದ್ದರು. ಆದರೆ ಈ ಇಬ್ಬರೂ ಓಪನರ್​ಗಳು ಬಂದಷ್ಟೇ ವೇಗವಾಗಿ ಪೆವಿಲಿಯನ್​ಗೆ ವಾಪಸ್ಸಾಗಿದ್ದರು. ಇಂತಹ ಪರಿಸ್ಥಿತಿಯಲ್ಲಿ ರಾಹುಲ್ ಮೂರನೇ ಏಕದಿನ ಪಂದ್ಯದಲ್ಲಿ ಓಪನಿಂಗ್ ಮಾಡುವ ಸಾಧ್ಯತೆಗಳಿವೆ. ಅಲ್ಲದೆ ರೋಹಿತ್ ಬದಲಿಗೆ ರಾಹುಲ್ ತ್ರಿಪಾಠಿ ಅಥವಾ ರಜತ್ ಪಾಟಿದಾರ್ ಅವರಿಗೆ ಬೇರೆ ಯಾವುದೇ ಅಗ್ರ ಕ್ರಮಾಂಕದಲ್ಲಿ ಅವಕಾಶ ನೀಡಬಹುದು. ರಾಹುಲ್ ತ್ರಿಪಾಠಿ ಕೂಡ ಓಪನಿಂಗ್ ಮಾಡುವ ಸಾಮಥ್ರ್ಯ ಹೊಂದಿದ್ದು, ಅವರು ಕೂಡ ಓಪನಿಂಗ್ ಆಯ್ಕೆಗೆ ಲಭ್ಯರಾಗಲಿದ್ದಾರೆ. ಮತ್ತೊಂದೆಡೆ, ಮೂರನೇ ಪಂದ್ಯಕ್ಕೆ ತಂಡಕ್ಕೆ ಸೇರ್ಪಡೆಗೊಂಡಿರುವ ಕುಲ್ದೀಪ್​ಗೆ ಸ್ಪಿನ್ ಕೋಟಾದಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ.

ಭಾರತದ ಸಂಭಾವ್ಯ ಪ್ಲೇಯಿಂಗ್ XI

ಕೆಎಲ್ ರಾಹುಲ್, ರಾಹುಲ್ ತ್ರಿಪಾಠಿ / ರಜತ್ ಪಾಟಿದಾರ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Fri, 9 December 22

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ