IND vs BAN: ಪ್ರತಿಭಟನೆಯ ಭಯ; ಭಾರತ- ಬಾಂಗ್ಲಾ ನಡುವಿನ 3ನೇ ಏಕದಿನ ಪಂದ್ಯ ಸ್ಥಳಾಂತರ..!
IND vs BAN: ಬಾಂಗ್ಲಾದೇಶ ಮತ್ತು ಭಾರತ ನಡುವಿನ ಏಕದಿನ ಸರಣಿಯ ಎಲ್ಲಾ ಮೂರು ಪಂದ್ಯಗಳು ಢಾಕಾದಲ್ಲಿ ನಡೆಯಬೇಕಿತ್ತು. ಆದರೆ ಈಗ ಕೊನೆಯ ಪಂದ್ಯ ಚಿತ್ತಗಾಂಗ್‌ನಲ್ಲಿ ನಡೆಯಲಿದೆ.
ಸದ್ಯ ಭಾರತ ತಂಡ ನ್ಯೂಜಿಲೆಂಡ್ ಪ್ರವಾಸದಲ್ಲಿದ್ದು, ಈಗಾಗಲೇ ಟಿ20 ಸರಣಿ ಗೆದ್ದಿರುವ ಟೀಂ ಇಂಡಿಯಾ ಇದೀಗ ಶುಕ್ರವಾರದಿಂದ ಏಕದಿನ ಸರಣಿಯನ್ನು ಆಡಬೇಕಿದೆ. ಈ ಪ್ರವಾಸದ ನಂತರ ಮುಂದಿನ ತಿಂಗಳು ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಏಕದಿನ ಮತ್ತು ಟೆಸ್ಟ್ ಸರಣಿಯನ್ನು ಆಡಬೇಕಿದೆ. ಬಾಂಗ್ಲಾದೇಶ ಪ್ರವಾಸಕ್ಕೂ ಮುನ್ನವೇ ದೊಡ್ಡ ಸುದ್ದಿಯೊಂದು ಮುನ್ನೆಲೆಗೆ ಬಂದಿದೆ. ವಾಸ್ತವವಾಗಿ , ಭಾರತ ಮತ್ತು ಬಾಂಗ್ಲಾದೇಶ ( India and Bangladesh ) ನಡುವಿನ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ದೊಡ್ಡ ಬದಲಾವಣೆಯಾಗಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಏಕದಿನ ಪಂದ್ಯ ಢಾಕಾದಲ್ಲಿ ನಡೆಯಬೇಕಿತ್ತು ಆದರೆ ಈಗ ಈ ಪಂದ್ಯ ಚಿತ್ತಗಾಂಗ್‌ನಲ್ಲಿ ನಡೆಯಲಿದೆ. ಭಾರತ ತಂಡ ಡಿಸೆಂಬರ್ 4 ರಿಂದ ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿಯನ್ನು ಆಡಬೇಕಿದೆ. ಮೂರನೇ ಏಕದಿನ ಪಂದ್ಯ ಡಿಸೆಂಬರ್ 10 ರಂದು ಢಾಕಾದಲ್ಲಿ ನಡೆಯಬೇಕಿತ್ತು. ಆದರೆ ಬಾಂಗ್ಲಾದೇಶದ ನ್ಯಾಶನಲಿಸ್ಟ್ ಪಾರ್ಟಿ ಅದೇ ದಿನ ಪ್ರತಿಭಟನೆ ನಡೆಸುವ ತಯಾರಿ ಮಾಡಿಕೊಂಡಿದ್ದು, ಅದೇ ದಿನ ರ್ಯಾಲಿಯನ್ನು ಸಹ ಆಯೋಜಿಸಲಿದೆ. ಹೀಗಾಗಿ ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಪಂದ್ಯದ ಸ್ಥಳವನ್ನು ಬದಲಾಯಿಸಿದೆ.
ಇದನ್ನೂ ಓದಿ: India vs New Zealand: ಏಕದಿನ ಟ್ರೋಫಿ ಅನಾವರಣಗೊಳಿಸಿದ ಧವನ್-ವಿಲಿಯಮ್ಸನ್: ಮೊದಲ ಪಂದ್ಯ ಯಾವಾಗ?
ಮೊದಲ ಮೂರು ಏಕದಿನ ಪಂದ್ಯಗಳು ಢಾಕಾದಲ್ಲಿ ನಡೆಯಬೇಕಿತ್ತು.
ಬಾಂಗ್ಲಾದೇಶ ಮತ್ತು ಭಾರತ ನಡುವಿನ ಏಕದಿನ ಸರಣಿಯ ಎಲ್ಲಾ ಮೂರು ಪಂದ್ಯಗಳು ಢಾಕಾದಲ್ಲಿ ನಡೆಯಬೇಕಿತ್ತು. ಆದರೆ ಈಗ ಕೊನೆಯ ಪಂದ್ಯ ಚಿತ್ತಗಾಂಗ್‌ನಲ್ಲಿ ನಡೆಯಲಿದೆ. ಇದಲ್ಲದೇ ಈ ಮೈದಾನದಲ್ಲಿ ಟೆಸ್ಟ್ ಪಂದ್ಯವನ್ನೂ ಆಯೋಜಿಸಲಾಗುವುದು. ಸರಣಿಯ ಎರಡನೇ ಟೆಸ್ಟ್ ಪಂದ್ಯ ಢಾಕಾದಲ್ಲಿ ನಡೆಯಲಿದೆ. ಡಿಸೆಂಬರ್ 14 ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ.
ಏಕದಿನ ಸರಣಿಗಾಗಿ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಶಾಬಾಜ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಕುಲದೀಪ್ ಸೇನ್.
ಟೆಸ್ಟ್ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ರವೀಂದ್ರ ಜಡೇಜಾ (ಆಡುವುದು ಅನುಮಾನ), ರವಿಚಂದ್ರನ್ ಅಶ್ವಿನ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:58 am, Thu, 24 November 22