AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಭಾರತ- ಬಾಂಗ್ಲಾ ನಡುವಿನ 3ನೇ ಟಿ20 ಪಂದ್ಯ ಯಾವಾಗ? ಉಚಿತವಾಗಿ ವೀಕ್ಷಿಸುವುದು ಹೇಗೆ?

IND vs BAN 3rd T20 Live Streaming Details: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ ತಂಡ ಮೊದಲ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

IND vs BAN: ಭಾರತ- ಬಾಂಗ್ಲಾ ನಡುವಿನ 3ನೇ ಟಿ20 ಪಂದ್ಯ ಯಾವಾಗ? ಉಚಿತವಾಗಿ ವೀಕ್ಷಿಸುವುದು ಹೇಗೆ?
ಭಾರತ- ಬಾಂಗ್ಲಾದೇಶ
ಪೃಥ್ವಿಶಂಕರ
|

Updated on: Oct 11, 2024 | 9:05 PM

Share

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ ತಂಡ ಮೊದಲ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೊದಲೆರಡು ಟಿ-20 ಪಂದ್ಯಗಳಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳು ಮೈದಾನದಲ್ಲಿ ಸುನಾಮಿ ಎಬ್ಬಿಸಿದರೆ, ಬೌಲರ್‌ಗಳು ಎದುರಾಳಿ ತಂಡದ ಬ್ಯಾಟ್ಸ್‌ಮನ್‌ಗಳಿಗೆ ತೊಂದರೆ ನೀಡಲು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಹೀಗಾಗಿಯೇ ಎರಡೂ ಪಂದ್ಯಗಳಲ್ಲಿ ಸೂರ್ಯ ಪಡೆ ಏಕಪಕ್ಷೀಯ ಗೆಲುವು ಸಾಧಿಸಿತ್ತು. ಇದೀಗ ಮೂರನೇ ಟಿ20 ಪಂದ್ಯದಲ್ಲಿಯೂ ಟೀಂ ಇಂಡಿಯಾದಿಂದ ಇದೇ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ. ಇನ್ನು ಈ ಪಂದ್ಯವನ್ನು ಎಲ್ಲಿ ಮತ್ತು ಯಾವಾಗ, ಉಚಿತವಾಗಿ ವೀಕ್ಷಿಸಬಹುದು .ಹೇಗೆ ಎಂಬುದರ ಬಗ್ಗೆ ಪೂರ್ಣ ವಿವರ ಇಲ್ಲಿದೆ,

ನೇರಪ್ರಸಾರದ ವಿವರ ಹೀಗಿದೆ

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಟಿ20 ಪಂದ್ಯ ಯಾವಾಗ ನಡೆಯಲ್ಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಟಿ20 ಪಂದ್ಯ ಅಕ್ಟೋಬರ್ 12 ರಂದು ನಡೆಯಲ್ಲಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಟಿ20 ಪಂದ್ಯ ಎಲ್ಲಿ ನಡೆಯಲ್ಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಟಿ20 ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲ್ಲಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬೇಕು?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ಸರಣಿಯ ಮೂರನೇ ಪಂದ್ಯವನ್ನು ಸ್ಪೋರ್ಟ್ಸ್ 18 ಚಾನೆಲ್‌ಗಳಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಇದಲ್ಲದೆ, ಈ ಪಂದ್ಯವನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಟಿ20 ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಟಿ20 ಪಂದ್ಯವನ್ನು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಸಂಪೂರ್ಣವಾಗಿ ಉಚಿತವಾಗಿ ವೀಕ್ಷಿಸಬಹುದು.

ಉಭಯ ತಂಡಗಳು

ಬಾಂಗ್ಲಾದೇಶ ತಂಡ: ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತಂಝಿದ್ ಹಸನ್ ತಮೀಮ್, ಪರ್ವೇಜ್ ಹೊಸೈನ್ ಎಮನ್, ತೌಹಿದ್ ಹೃದಯ್, ಮಹ್ಮುದುಲ್ಲಾ, ಲಿಟ್ಟನ್ ಕುಮರ್ ದಾಸ್, ಜೇಕರ್ ಅಲಿ ಅನಿಕ್, ಮೆಹಿದಿ ಹಸನ್ ಮಿರಾಜ್, ಶಾಕ್ ಮಹೆದಿಸ್ ಹಸನ್, ರಿಶಾಫ್ ಹಸನ್, ರಿಶಾಫ್ ಹಸನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ತಂಜಿಮ್ ಹಸನ್ ಸಾಕಿಬ್, ರಕಿಬುಲ್ ಹಸನ್

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ