IND vs BAN 3rd T20 Live Score: 297 ರನ್​​ಗಳ ಬೃಹತ್ ಟಾರ್ಗೆಟ್ ನೀಡಿದ ಭಾರತ

|

Updated on:Oct 12, 2024 | 8:54 PM

India vs Bangladesh 3rd T20I Live Score in Kannada: ಭಾರತ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಈ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಿದೆ.

IND vs BAN 3rd T20 Live Score: 297 ರನ್​​ಗಳ ಬೃಹತ್ ಟಾರ್ಗೆಟ್ ನೀಡಿದ ಭಾರತ
ಭಾರತ- ಬಾಂಗ್ಲಾದೇಶ

LIVE NEWS & UPDATES

  • 12 Oct 2024 08:44 PM (IST)

    IND vs BAN Live Score: 250 ರನ್ ದಾಟಿದ ಭಾರತ

    ಟೀಂ ಇಂಡಿಯಾ 17 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 252 ರನ್ ಗಳಿಸಿದೆ. ಇನ್ನು ಭಾರತ ತಂಡದ ಇನ್ನಿಂಗ್ಸ್‌ನಲ್ಲಿ 3 ಓವರ್‌ಗಳು ಬಾಕಿ ಉಳಿದಿವೆ.

  • 12 Oct 2024 08:35 PM (IST)

    IND vs BAN Live Score: 16 ಓವರ್‌ ಪೂರ್ಣ

    16 ಓವರ್‌ಗಳಲ್ಲಿ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿದೆ. ಹಾರ್ದಿಕ್ ಪಾಂಡ್ಯ 22 ರನ್ ಮತ್ತು ರಿಯಾನ್ ಪರಾಗ್ 8 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.

  • 12 Oct 2024 08:33 PM (IST)

    IND vs BAN Live Score: ಮೂರನೇ ವಿಕೆಟ್ ಪತನ

    ಟೀಂ ಇಂಡಿಯಾ ಮೂರನೇ ವಿಕೆಟ್ ಕೂಡ ಕಳೆದುಕೊಂಡಿದೆ. ನಾಯಕ ಸೂರ್ಯಕುಮಾರ್ ಯಾದವ್ 75 ರನ್​ಗಳ ಇನ್ನಿಂಗ್ಸ್ ಆಡಿ ಪೆವಿಲಿಯನ್​ಗೆ ಮರಳಿದ್ದಾರೆ.

  • 12 Oct 2024 08:33 PM (IST)

    IND vs BAN Live Score: 200 ರನ್ ಗಡಿ ದಾಟಿದ ಭಾರತ

    ಟೀಂ ಇಂಡಿಯಾ 14 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿದೆ. ಸೂರ್ಯಕುಮಾರ್ ಯಾದವ್ 71 ರನ್ ಹಾಗೂ ರಿಯಾನ್ ಪರಾಗ್ 1 ರನ್ ಗಳಿಸಿ ಆಡುತ್ತಿದ್ದಾರೆ.

  • 12 Oct 2024 08:29 PM (IST)

    IND vs BAN Live Score: ಸಂಜು ಔಟ್

    196 ರನ್ ಗಳಿಸುವಷ್ಟರಲ್ಲಿ ಟೀಂ ಇಂಡಿಯಾ ಎರಡನೇ ವಿಕೆಟ್ ಕಳೆದುಕೊಂಡಿತು. ಸಂಜು ಸ್ಯಾಮ್ಸನ್ 47 ಎಸೆತಗಳಲ್ಲಿ 111 ರನ್ ಗಳಿಸಿ ಔಟಾದರು. ಈ ಇನ್ನಿಂಗ್ಸ್‌ನಲ್ಲಿ ಅವರು 11 ಬೌಂಡರಿ ಮತ್ತು 8 ಸಿಕ್ಸರ್‌ಗಳನ್ನು ಬಾರಿಸಿದರು.

  • 12 Oct 2024 08:12 PM (IST)

    IND vs BAN Live Score: 40 ಎಸೆತಗಳಲ್ಲಿ ಶತಕ ಪೂರೈಸಿದ ಸಂಜು

    ಸಂಜು ಸ್ಯಾಮ್ಸನ್ 40 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಇದು ಟಿ20 ಕ್ರಿಕೆಟ್‌ನಲ್ಲಿ ಸಂಜು ಸ್ಯಾಮ್ಸನ್ ಅವರ ಮೊದಲ ಶತಕವಾಗಿದೆ.

  • 12 Oct 2024 08:12 PM (IST)

    IND vs BAN Live Score: 12 ಓವರ್‌ ಮುಕ್ತಾಯ

    12 ಓವರ್‌ಗಳ ಆಟದಲ್ಲಿ ಟೀಂ ಇಂಡಿಯಾ 1 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿದೆ. ಸಂಜು ಸ್ಯಾಮ್ಸನ್ ತಮ್ಮ ಶತಕದ ಸಮೀಪಕ್ಕೆ ಬಂದಿದ್ದಾರೆ, ಅವರು 96 ರನ್ ಗಳಿಸಿ ಆಡುತ್ತಿದ್ದಾರೆ. ಸೂರ್ಯ 65 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.

  • 12 Oct 2024 08:11 PM (IST)

    IND vs BAN Live Score: ಸೂರ್ಯ ಅರ್ಧಶತಕ

    ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಅರ್ಧಶತಕ ಪೂರೈಸಿದ್ದಾರೆ. ಸೂರ್ಯ 23 ಎಸೆತಗಳಲ್ಲಿ 50 ರನ್‌ಗಳ ಗಡಿ ಮುಟ್ಟಿದರು.

  • 12 Oct 2024 08:01 PM (IST)

    IND vs BAN Live Score: 10 ಓವರ್​ಗಳಲ್ಲಿ 150 ರನ್ ಚಚ್ಚಿದ ಭಾರತ

    10 ಓವರ್‌ಗಳಲ್ಲಿ ಟೀಂ ಇಂಡಿಯಾದ ಮೊತ್ತ 1 ವಿಕೆಟ್ ನಷ್ಟಕ್ಕೆ 152 ರನ್ ಆಗಿದೆ. ಸಂಜು ಸ್ಯಾಮ್ಸನ್ 92 ರನ್ ಹಾಗೂ ಸೂರ್ಯ 48 ರನ್ ಗಳಿಸಿ ಆಡುತ್ತಿದ್ದಾರೆ.

  • 12 Oct 2024 07:57 PM (IST)

    IND vs BAN Live Score: ಭಾರತದ 100 ರನ್ ಪೂರ್ಣ

    ಈ ಪಂದ್ಯದಲ್ಲಿ ಟೀಂ ಇಂಡಿಯಾ ದೊಡ್ಡ ಮೊತ್ತದತ್ತ ಸಾಗುತ್ತಿದೆ. ಭಾರತ ತಂಡ ಕೇವಲ 7.1 ಓವರ್‌ಗಳಲ್ಲಿ 100 ರನ್‌ಗಳ ಗಡಿ ಮುಟ್ಟಿದೆ. ಇದು ಅಂತಾರಾಷ್ಟ್ರೀಯ ಟಿ20ಯಲ್ಲಿ ಭಾರತದ ವೇಗದ ಶತಕವಾಗಿದೆ.

  • 12 Oct 2024 07:40 PM (IST)

    IND vs BAN Live Score: ಸಂಜು ಸ್ಫೋಟಕ ಅರ್ಧಶತಕ

    ಸಂಜು ಸ್ಯಾಮ್ಸನ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಸಂಜು ತಮ್ಮ ಇನ್ನಿಂಗ್ಸ್‌ನಲ್ಲಿ ಇದುವರೆಗೆ 8 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

  • 12 Oct 2024 07:36 PM (IST)

    IND vs BAN Live Score: ಭಾರತದ ಅರ್ಧಶತಕ ಪೂರ್ಣ

    5 ಓವರ್‌ಗಳಲ್ಲಿ ಟೀಂ ಇಂಡಿಯಾ 1 ವಿಕೆಟ್ ನಷ್ಟಕ್ಕೆ 63 ರನ್ ಗಳಿಸಿದೆ. ಸಂಜು ಸ್ಯಾಮ್ಸನ್ ಮತ್ತು ಸೂರ್ಯಕುಮಾರ್ ಯಾದವ್ ನಡುವೆ ಉತ್ತಮ ಜೊತೆಯಾಟ ನಡೆಯುತ್ತಿದೆ.

  • 12 Oct 2024 07:36 PM (IST)

    IND vs BAN Live Score: 4 ಓವರ್‌ ಮುಕ್ತಾಯ

    ಟೀಂ ಇಂಡಿಯಾ 4 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 47 ರನ್ ಗಳಿಸಿದೆ. ಸಂಜು ಸ್ಯಾಮ್ಸನ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. 31 ರನ್ ಗಳಿಸಿ ಆಡುತ್ತಿದ್ದಾರೆ. ಅದೇ ವೇಳೆ ಸೂರ್ಯಕುಮಾರ್ ಯಾದವ್ 11 ರನ್ ಗಳಿಸಿ ಆಸರೆಯಾಗಿದ್ದಾರೆ.

  • 12 Oct 2024 07:20 PM (IST)

    IND vs BAN Live Score: ಅಭಿಷೇಕ್ ಔಟ್

    ಮೂರನೇ ಟಿ20 ಪಂದ್ಯದಲ್ಲಿ ಭಾರತದ ಮೊದಲ ವಿಕೆಟ್ ಪತನವಾಗಿದೆ. 4 ರನ್​ಗಳಿಗೆ ಅಭಿಷೇಕ್ ಶರ್ಮಾ ಇನ್ನಿಂಗ್ಸ್ ಮುಗಿದಿದೆ. ಟೀಂ ಇಂಡಿಯಾ ಸ್ಕೋರ್ 2.1 ಓವರ್‌ಗಳಲ್ಲಿ 23 ರನ್ ಆಗಿದೆ. ಸಂಜು ಕ್ರೀಸ್‌ನಲ್ಲಿದ್ದಾರೆ.

  • 12 Oct 2024 07:11 PM (IST)

    IND vs BAN Live Score: ವೇಗದ ಆರಂಭ

    ಟೀಂ ಇಂಡಿಯಾ ಮೊದಲ ಎರಡು ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 23 ರನ್ ಗಳಿಸಿದೆ. ಅಭಿಷೇಕ್ ಶರ್ಮಾ 4 ರನ್ ಹಾಗೂ ಸಂಜು ಸ್ಯಾಮ್ಸನ್ 19 ರನ್ ಗಳಿಸಿ ಆಡುತ್ತಿದ್ದಾರೆ.

  • 12 Oct 2024 06:44 PM (IST)

    IND vs BAN Live Score: ಭಾರತ ತಂಡ

    ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ನಿತೀಶ್ ರೆಡ್ಡಿ, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಮಯಾಂಕ್ ಯಾದವ್.

  • 12 Oct 2024 06:43 PM (IST)

    IND vs BAN Live Score: ಬಾಂಗ್ಲಾದೇಶ ತಂಡ

    ಪರ್ವೇಜ್ ಹೊಸೈನ್ ಎಮನ್, ಲಿಟನ್ ದಾಸ್ (ವಿಕೆಟ್ ಕೀಪರ್), ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತಂಜೀದ್ ಹಸನ್, ತೌಹೀದ್ ಹೃದಯೋಯ್, ಮಹ್ಮುದುಲ್ಲಾ, ಮಹೇದಿ ಹಸನ್, ತಸ್ಕಿನ್ ಅಹ್ಮದ್, ರಿಶಾದ್ ಹೊಸೈನ್, ಮುಸ್ತಫಿಜುರ್ ರಹಮಾನ್, ತೈಜುರ್ ರಹಮಾನ್. ಸಾಕಿಬ್

  • 12 Oct 2024 06:31 PM (IST)

    IND vs BAN Live Score: ಟಾಸ್ ಗೆದ್ದ ಟೀಂ ಇಂಡಿಯಾ

    ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

  • 12 Oct 2024 06:12 PM (IST)

    IND vs BAN Live Score: ಹೈದರಾಬಾದ್‌ನಲ್ಲಿ ಟಿ20 ಸರಣಿಯ ಕೊನೆಯ ಪಂದ್ಯ

    ಭಾರತ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

  • ಭಾರತ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಈ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಿದೆ. ಇದೀಗ ಭಾರತ ತಂಡದ ಆಟಗಾರರು ಕ್ಲೀನ್ ಸ್ವೀಪ್ ಮೇಲೆ ಕಣ್ಣಿಟ್ಟಿದ್ದಾರೆ. ಟಿ20 ಸರಣಿಗೂ ಮುನ್ನ ನಡೆದ ಟೆಸ್ಟ್ ಸರಣಿಯಲ್ಲಿಯೂ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಸಾಧನೆ ಮಾಡಿತ್ತು.

    Published On - Oct 12,2024 6:10 PM

    Follow us
    ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
    ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
    ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
    ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
    ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
    ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
    ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
    ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
    ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
    ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
    ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
    ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
    ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
    ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
    ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
    ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
    ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
    ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
    ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
    ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ