ಏಷ್ಯಾಕಪ್ನಲ್ಲಿಂದು ಭಾರತ-ಬಾಂಗ್ಲಾದೇಶ ಮುಖಾಮುಖಿ: ರೋಹಿತ್ ಪಡೆಯಲ್ಲಿ ದೊಡ್ಡ ಬದಲಾವಣೆ
India vs Bangladesh, Asia Cup Super 4: ಇಂದು ಏಷ್ಯಾಕಪ್ ಸೂಪರ್-4 ನ ಕೊನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಉಭಯ ತಂಡಗಳಿಗೆ ಇಂದು ಔಪಚಾರಿಕ ಪಂದ್ಯವಷ್ಟೆ. ಹೀಗಾಗಿ ಟೀಮ್ ಇಂಡಿಯಾ ದೊಡ್ಡ ಬದಲಾವಣೆಯೊಂದಿಗೆ ಕಣಕ್ಕಿಳಿಯುವುದು ಖಚಿತ.
ಏಷ್ಯಾಕಪ್ 2023 ಟೂರ್ನಿ (Asia Cup 2023) ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಈಗಾಗಲೇ ಫೈನಲ್ ಪಂದ್ಯ ಭಾರತ ಹಾಗೂ ಶ್ರೀಲಂಕಾ ನಡುವೆ ಎಂಬುದು ತೀರ್ಮಾನವಾಗಿದೆ. ಗುರುವಾರ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ 2 ವಿಕೆಟ್ಗಳ ರೋಚಕ ಜಯ ಸಾಧಿಸಿ ಫೈನಲ್ಗೆ ಲಗ್ಗೆಯಿಟ್ಟಿತು. ಇದರ ನಡುವೆ ಇಂದು ಏಷ್ಯಾಕಪ್ ಸೂಪರ್-4 ನ ಕೊನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ.
ಉಭಯ ತಂಡಗಳಿಗೆ ಇಂದು ಔಪಚಾರಿಕ ಪಂದ್ಯವಷ್ಟೆ. ಹೀಗಾಗಿ ಟೀಮ್ ಇಂಡಿಯಾ ದೊಡ್ಡ ಬದಲಾವಣೆಯೊಂದಿಗೆ ಕಣಕ್ಕಿಳಿಯುವುದು ಖಚಿತ. ಪ್ರಮುಖ ಹಿರಿಯ ಆಟಗಾರರು ವಿಶ್ರಾಂತಿ ಪಡೆದುಕೊಳ್ಳುವ ಸಾಧ್ಯತೆ ಇದೆ. ಮುಖ್ಯವಾಗಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್ ಇಂದಿನ ಪಂದ್ಯದಿಂದ ಹೊರಗುಳಿಯಬಹುದು. ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಮೊಹಮ್ಮದ್ ಶಮಿ ಅಥವಾ ಪ್ರಸಿದ್ಧ್ ಕೃಷ್ಟ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಫೈನಲ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಕೆಲ ಪ್ಲೇಯರ್ಸ್ ರೆಸ್ಟ್ ತೆಗೆದುಕೊಳ್ಳಲಿದ್ದಾರೆ.
Asia cup 2023 PAK vs SL Live Score: ರೋಚಕ ಜಯದೊಂದಿಗೆ ಫೈನಲ್ಗೆ ಪ್ರವೇಶಿಸಿದ ಶ್ರೀಲಂಕಾ
ಇತ್ತ ಟೂರ್ನಿಯಿಂದ ಹೊರಬಿದ್ದಿರುವ ಬಾಂಗ್ಲಾ ಈ ಬಾರಿ ಉತ್ತಮ ಪ್ರದರ್ಶನ ತೋರಲಿಲ್ಲ. ನಾಯಕ ಶಕೀಬ್ ಅಲ್ ಹಸನ್ ಸಂಪೂರ್ಣವಾಗಿ ಫಾರ್ಮ್ ಕಳೆದುಕೊಂಡಿದ್ದಾರೆ. ಲಿಟ್ಟನ್ ದಾಸ್, ಮೆಹಿದಿ ಹಸನ್ ಮಿರಾಜ್, ಮುಶ್ಫಿಕರ್ ರಹೀಮ್ ಕೂಡ ತಂಡಕ್ಕೆ ಕಾಣಿಕೆ ನೀಡುತ್ತಿಲ್ಲ. ತೌಹಿದ್ ಹೃದಯೋಯ್ ಮಾತ್ರ ಕಳೆದ ಲಂಕಾ ವಿರುದ್ಧ 82 ರನ್ ಸಿಡಿಸಿದ್ದರು. ಬೌಲಿಂಗ್ನಲ್ಲಿ ಬಾಂಗ್ಲಾ ಪರ ತಸ್ಕಿನ್ ಅಹ್ಮದ್, ಹಸನ್ ಮಹಮೂದ್ ಮತ್ತು ಶೊರಿಫುಲ್ ಇಸ್ಲಾಂ ಮಾರಕವಾಗಿ ಪರಿಣಮಿಸಿದ್ದಾರೆ.
ಪ್ರೇಮದಾಸ ಸ್ಟೇಡಿಯಂ ಪಿಚ್:
ಭಾರತ-ಬಾಂಗ್ಲಾ ಪಂದ್ಯ ನಡೆಯಲಿರುವ ಆರ್. ಪ್ರೇಮದಾಸ ಸ್ಟೇಡಿಯಂನ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ಅನುಕೂಲಕರವಾಗಿದೆ. ಪಂದ್ಯ ಸಾಗಿದಂತೆ ಟ್ರ್ಯಾಕ್ ನಿಧಾನವಾಗುತ್ತದೆ, ಆಗ ಬ್ಯಾಟರ್‌ಗಳಿಗೆ ರನ್ ಗಳಿಸಲು ಕಷ್ಟವಾಗುತ್ತದೆ. ಮತ್ತೊಂದೆಡೆ, ವೇಗದ ಬೌಲರ್‌ಗಳು ಕೂಡ ಈ ಮೈದಾನದಲ್ಲಿ ಯಶಸ್ಸು ಸಾಧಿಸುತ್ತಾರೆ. ಪಂದ್ಯದ ಮಧ್ಯದಲ್ಲಿ ಬ್ಯಾಟರ್‌ಗಳಿಗೆ ಈ ಪಿಚ್ ಹೆಚ್ಚು ಸಹಾಯ ಮಾಡಲಿದೆ. ಈ ಮೈದಾನದಲ್ಲಿ ಟೀಮ್ ಇಂಡಿಯಾ ಉತ್ತಮ ದಾಖಲೆಯನ್ನು ಹೊಂದಿದೆ, ತನ್ನ ಕೊನೆಯ 10 ಪಂದ್ಯಗಳಲ್ಲಿ 9 ಅನ್ನು ಗೆದ್ದಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.
ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಅನಾಮುಲ್ ಹಕ್ ಬಿಜೋಯ್, ಲಿಟ್ಟನ್ ದಾಸ್, ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್ ಧ್ರುಬೋ, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಮುಸ್ತಾಫಿಜುರ್ ರಹಮಾನ್, ಶೊರಿಫುಲ್ ಇಸ್ಲಾಂ, ಶಾಕ್ ಮಹ್ಮದ್ ಇಸ್ಲಾಂ, ನಾಸ್, ನಯಿಮ್ ಶೇಖ್, ಶಮೀಮ್ ಹೊಸೈನ್, ತಂಝೀದ್ ಹಸನ್ ತಮೀಮ್, ತಂಝಿಮ್ ಹಸನ್ ಸಾಕಿಬ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ