AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಸೂಪರ್ 4 ಸುತ್ತಿನಲ್ಲಿ ಭಾರತ- ಬಾಂಗ್ಲಾ ಮುಖಾಮುಖಿ; ಯಾರಿಗೆ ಮೊದಲ ಸೋಲು?

India vs Bangladesh Asia Cup 2025: ಭಾರತ ತಂಡವು ಏಷ್ಯಾಕಪ್ 2025 ರಲ್ಲಿ ಅಜೇಯವಾಗಿ ನಾಲ್ಕು ಪಂದ್ಯಗಳನ್ನು ಗೆದ್ದಿದೆ. ಸೂಪರ್ 4 ರ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಇದು ಟಿ20 ಕ್ರಿಕೆಟ್‌ನಲ್ಲಿ ಎರಡೂ ತಂಡಗಳ ಮೊದಲ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಫೈನಲ್ ಸುತ್ತಿಗೆ ಟಿಕೆಟ್ ಸಿಗಲಿದೆ.

Asia Cup 2025: ಸೂಪರ್ 4 ಸುತ್ತಿನಲ್ಲಿ ಭಾರತ- ಬಾಂಗ್ಲಾ ಮುಖಾಮುಖಿ; ಯಾರಿಗೆ ಮೊದಲ ಸೋಲು?
India Vs Bangladesh
ಪೃಥ್ವಿಶಂಕರ
|

Updated on: Sep 23, 2025 | 6:45 PM

Share

ಭಾರತ ತಂಡವು ಏಷ್ಯಾಕಪ್ 2025 ರಲ್ಲಿ (Asia Cup 2025) ತನ್ನ ಅಜೇಯ ಓಟವನ್ನು ಮುಂದುವರೆಸಿದ್ದು, ಟೂರ್ನಿಯಲ್ಲಿ ಇಲ್ಲಿಯವರೆಗೆ ಆಡಿರುವ ನಾಲ್ಕಕ್ಕೇ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇದೀಗ ಸೂಪರ್ 4 ಸುತ್ತಿನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಲು ಸಜ್ಜಾಗಿದೆ. ಈ ಏಷ್ಯಾಕಪ್​ನಲ್ಲಿ ಉಭಯ ತಂಡಗಳ ಮೊದಲ ಮುಖಾಮುಖಿಯಾಗಿದ್ದು,ಈ ಪಂದ್ಯದಲ್ಲಿ ಯಾವುದೇ ತಂಡ ಸೋತರೂ ಅದು ಸೂಪರ್ 4 ಸುತ್ತಿನಲ್ಲಿ ಅದರ ಮೊದಲ ಸೋಲಾಗಲಿದೆ. ಭಾರತ ತನ್ನ ಮೊದಲ ಸೂಪರ್ 4 ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿದರೆ, ಬಾಂಗ್ಲಾದೇಶ ಶ್ರೀಲಂಕಾವನ್ನು ಸೋಲಿಸಿತ್ತು.

ಭಾರತ-ಬಾಂಗ್ಲಾ ಟಿ20 ಅಂಕಿಅಂಶಗಳು

ಟಿ20 ಮಾದರಿಯ ಕ್ರಿಕೆಟ್‌ನಲ್ಲಿ ಎರಡೂ ದೇಶಗಳ ಅಂಕಿಅಂಶಗಳನ್ನು ನೋಡಿದರೆ, ಭಾರತ ಬಾಂಗ್ಲಾದೇಶಕ್ಕಿಂತ ಬಹಳ ಮುಂದಿದೆ ಎಂದು ತೋರುತ್ತದೆ. ಎರಡೂ ದೇಶಗಳು ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 17 ಬಾರಿ ಮುಖಾಮುಖಿಯಾಗಿವೆ, ಅದರಲ್ಲಿ ಭಾರತ 16 ಬಾರಿ ಗೆದ್ದಿದೆ. ಉಭಯ ತಂಡಗಳು 2009 ರಲ್ಲಿ ಮೊದಲ ಬಾರಿಗೆ ಟಿ20 ಯಲ್ಲಿ ಮುಖಾಮುಖಿಯಾಗಿದ್ದವು. ಅಂದಿನಿಂದ ಬಾಂಗ್ಲಾದೇಶ ಕೇವಲ ಒಂದು ಟಿ20 ಪಂದ್ಯವನ್ನು ಮಾತ್ರ ಗೆದ್ದಿದೆ.

Asia cup 2025: ಟಿ20 ಏಷ್ಯಾಕಪ್ ಸೂಪರ್ ಸುತ್ತಿನಲ್ಲಿ ಭಾರತ ಗೆದ್ದಿದ್ದಕ್ಕಿಂತ ಸೋತಿದ್ದೇ ಹೆಚ್ಚು?

ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಯಾವ ದಿನ ನಡೆಯಲಿದೆ?

2025 ರ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯವು ಸೆಪ್ಟೆಂಬರ್ 24, ಬುಧವಾರ ನಡೆಯಲಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸೂಪರ್ ಫೋರ್ ಪಂದ್ಯ ರಾತ್ರಿ 8:00 ಗಂಟೆಗೆ ಆರಂಭವಾಗಲಿದೆ. ಟಾಸ್ ಅರ್ಧ ಗಂಟೆ ಮೊದಲು, ಸಂಜೆ 7:30 ಕ್ಕೆ ನಡೆಯಲಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಯುಎಇಯ ಯಾವ ಮೈದಾನದಲ್ಲಿ ನಡೆಯಲಿದೆ?

2025 ರ ಚಾಂಪಿಯನ್ಸ್ ಟ್ರೋಫಿಯಂತೆ ಭಾರತ-ಬಾಂಗ್ಲಾದೇಶ ಪಂದ್ಯವೂ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ-ಬಾಂಗ್ಲಾದೇಶ ಪಂದ್ಯವನ್ನು ಯಾವ ಟಿವಿ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ?

ನೀವು ಈ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸಲು ಬಯಸಿದರೆ, ಪಂದ್ಯಾವಳಿಯ ಅಧಿಕೃತ ಪ್ರಸಾರಕರಾದ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್ 1, 2, 3 ಮತ್ತು 5 ರಲ್ಲಿ ನೀವು ಅದನ್ನು ವೀಕ್ಷಿಸಬಹುದು.

ಭಾರತ- ಬಾಂಗ್ಲಾದೇಶ ಪಂದ್ಯವನ್ನು ಯಾವ ವೇದಿಕೆಯಲ್ಲಿ ಆನ್‌ಲೈನ್‌ನಲ್ಲಿ ಸ್ಟ್ರೀಮ್ ಮಾಡಲಾಗುತ್ತದೆ?

ಬುಧವಾರ ನಡೆಯಲಿರುವ ಈ ಪಂದ್ಯದ ಆನ್‌ಲೈನ್ ಸ್ಟ್ರೀಮಿಂಗ್ ಅನ್ನು ಸೋನಿ ಲಿವ್ ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ