
2025ರ ಟಿ20 ಏಷ್ಯಾಕಪ್ನ (Asia Cup 2025) ಸೂಪರ್ 4 ಸುತ್ತಿನಲ್ಲಿ ಟೀಂ ಇಂಡಿಯಾ ಇಂದು ಬಾಂಗ್ಲಾದೇಶ ತಂಡವನ್ನು (India vs Bangladesh) ಎದುರಿಸಿದೆ. ಈ ಪಂದ್ಯವನ್ನು ಟೀಂ ಇಂಡಿಯಾ ಗೆದ್ದರೆ ನೇರವಾಗಿ ಫೈನಲ್ಗೇರಲಿದೆ. ಇತ್ತ ಬಾಂಗ್ಲಾದೇಶ ಗೆದ್ದರೆ ಅದರ ಫೈನಲ್ ಆಸೆ ಜೀವಂತವಾಗಿರಲಿದೆ. ಈ ಪಂದ್ಯವನ್ನು ಭಾರತ ಸೋತರೂ ಅದಕ್ಕೆ ಫೈನಲ್ಗೇರಲು ಮತ್ತೊಂದು ಅವಕಾಶ ಸಿಗಲಿದೆ. ಈ ಸುತ್ತಿನ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿದ್ದರೆ, ಇತ್ತ ಬಾಂಗ್ಲಾದೇಶ, ಶ್ರೀಲಂಕಾವನ್ನು ಮಣಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಯಾವ ತಂಡ ಸೋತರೂ ಅದಕ್ಕೆ ಈ ಸುತ್ತಿನಲ್ಲಿ ಮೊದಲ ಸೋಲಾಗಲಿದೆ.
ಪಂದ್ಯ ಆರಂಭಕ್ಕೂ ಮುನ್ನ ಬಾಂಗ್ಲಾದೇಶ ತಂಡಕ್ಕೆ ಆಘಾತ ಎದುರಾಗಿದ್ದು, ಗಾಯದ ಕಾರಣದಿಂದಾಗಿ ಬಾಂಗ್ಲಾದೇಶ ನಾಯಕ ಲಿಟನ್ ದಾಸ್ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಸ್ಥಾನದಲ್ಲಿ ಜಾಕಿರ್ ಅಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ನಾಲ್ಕು ಬದಲಾವಣೆಗಳನ್ನು ಮಾಡಲಾಗಿದೆ ಎಂದು ಜಾಕಿರ್ ದೃಢಪಡಿಸಿದ್ದಾರೆ. ಇತ್ತ ಭಾರತ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಅಂದರೆ ಪಾಕಿಸ್ತಾನದ ವಿರುದ್ಧ ಆಡಿದ್ದ ತಂಡವೇ ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿಯುತ್ತಿದೆ.
ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು ಕೇವಲ ಎರಡು ಪಂದ್ಯಗಳನ್ನು ಗೆದ್ದಿವೆ. ಈ ಪಂದ್ಯಾವಳಿಯಲ್ಲಿ ಐದು ತಂಡಗಳು ಚೇಸಿಂಗ್‌ನಲ್ಲಿ ಗೆದ್ದಿವೆ. ಆದಾಗ್ಯೂ, ಭಾರತ-ಬಾಂಗ್ಲಾದೇಶ ಪಂದ್ಯಕ್ಕಾಗಿ ಬಳಸಲಾಗುತ್ತಿರುವ ಪಿಚ್ ತಾಜಾವಾಗಿದೆ. ಅಲ್ಲಿ ಈ ಮೊದಲು ಒಂದೇ ಒಂದು ಪಂದ್ಯವನ್ನು ಆಡಿಲ್ಲ. ಇದಲ್ಲದೆ, ದುಬೈನಲ್ಲಿನ ಹವಾಮಾನವು ಇತರ ದಿನಗಳಿಗಿಂತ ಹೆಚ್ಚು ತಂಪಾಗಿರುತ್ತದೆ, ಇದು ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಪ್ರಯೋಜನವನ್ನು ನೀಡುತ್ತದೆ. ಹೀಗಾಗಿ ಬಾಂಗ್ಲಾದೇಶ, ಟೀಂ ಇಂಡಿಯಾ ವಿರುದ್ಧ ಯಾವ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.
Asia cup 2025 IND vs BAN Live Score: ಟಾಸ್ ಗೆದ್ದ ಬಾಂಗ್ಲಾದೇಶ
ಭಾರತದ ತಂಡ: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ
ಬಾಂಗ್ಲಾದೇಶ ತಂಡ: ಸೈಫ್ ಹಸನ್, ತಂಝಿದ್ ಹಸನ್ ತಮೀಮ್, ಪರ್ವೇಜ್ ಹೊಸೈನ್ ಎಮಾನ್, ತೌಹಿದ್ ಹೃದಯ್, ಶಮೀಮ್ ಹೊಸೈನ್, ಜಾಕಿರ್ ಅಲಿ, ಮೊಹಮ್ಮದ್ ಸೈಫುದ್ದೀನ್, ರಿಶಾದ್ ಹೊಸೈನ್, ತಂಝಿಮ್ ಹಸನ್ ಸಾಕಿಬ್, ನಸುಮ್ ಅಹ್ಮದ್ ಮತ್ತು ಮುಸ್ತಾಫಿಜುರ್ ರೆಹಮಾನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:57 pm, Wed, 24 September 25