India vs Bangladesh: ಭಾರತ ವಿರುದ್ದದ ಏಕದಿನ ಸರಣಿಗೆ ಬಲಿಷ್ಠ ಬಾಂಗ್ಲಾದೇಶ ತಂಡ ಪ್ರಕಟ: ಮೊದಲ ಪಂದ್ಯ ಯಾವಾಗ?

| Updated By: Vinay Bhat

Updated on: Nov 25, 2022 | 9:22 AM

Bangladesh Squad For India ODI Series: ಬಾಂಗ್ಲಾ ಕ್ರಿಕೆಟ್ ಬೋರ್ಡ್ ಭಾರತ ವಿರುದ್ಧದ ಏಕದಿನ ಸರಣಿಗೆ 16 ಸದಸ್ಯರ ಬಾಂಗ್ಲಾದೇಶ ತಂಡವನ್ನು ಪ್ರಕಟ ಮಾಡಿದೆ. ತಮಿಮ್ ಇಖ್ಬಾಲ್ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

India vs Bangladesh: ಭಾರತ ವಿರುದ್ದದ ಏಕದಿನ ಸರಣಿಗೆ ಬಲಿಷ್ಠ ಬಾಂಗ್ಲಾದೇಶ ತಂಡ ಪ್ರಕಟ: ಮೊದಲ ಪಂದ್ಯ ಯಾವಾಗ?
Bangladesh Squad
Follow us on

ಭಾರತ ಕ್ರಿಕೆಟ್ ತಂಡ ಸದ್ಯ ನ್ಯೂಜಿಲೆಂಡ್ (India vs New Zealand) ನಾಡಲ್ಲಿ ಬೀಡುಬಿಟ್ಟಿದ್ದು ಟಿ20 ಬಳಿಕ ಏಕದಿನ ಸರಣಿನ್ನು ಆಡುತ್ತಿದೆ. ಇಂದು ಆಕ್ಲೆಂಡ್​ನಲ್ಲಿ ಮೊದಲ ಒಡಿಐ ಪಂದ್ಯ ಆಡುತ್ತಿದೆ. ಇದಾದ ಬಳಿಕ ಟೀಮ್ ಇಂಡಿಯಾ ಬಾಂಗ್ಲಾದೇಶ (India vs Bangladesh) ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಏಕದಿನ ಮತ್ತು ಟೆಸ್ಟ್​ ಸರಣಿಯಲ್ಲಿ ಕಣಕ್ಕಿಳಿಯಲಿದೆ. ಈಗಾಗಲೇ ಬಾಂಗ್ಲಾ ವಿರುದ್ಧದ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಮ್ ಇಂಡಿಯಾವನ್ನು ಹೆಸರಿಸಿದೆ. ಇದರ ಬೆನ್ನಲ್ಲೇ ಇದೀಗ ಬಾಂಗ್ಲಾ ಕ್ರಿಕೆಟ್ ಬೋರ್ಡ್ ಏಕದಿನ ಸರಣಿಗೆ 16 ಸದಸ್ಯರ ಬಾಂಗ್ಲಾದೇಶ ತಂಡವನ್ನು ಪ್ರಕಟ ಮಾಡಿದೆ. ತಮಿಮ್ ಇಖ್ಬಾಲ್ (Tamim Iqbal) ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಮೂಲಕ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್ ಬಳಿಕ ತಮಿಮ್ ಕ್ಯಾಪ್ಟನ್ ಸ್ಥಾನಕ್ಕೆ ಮರಳಿದ್ದಾರೆ.

ಭಾರತ ವಿರುದ್ಧದ ಈ ಏಕದಿನ ಸರಣಿ ಮೂಲಕ ಮೊಹಮ್ಮದುಲ್ಲ ರಿಯಾದ್ ಮತ್ತು ಮುಷ್ಫೀಕುರ್ ರಹೀಮ್ ರಾಷ್ಟ್ರೀಯ ತಂಡಕ್ಕೆ ಕಮ್​ಬ್ಯಾಕ್ ಮಾಡಲಿದ್ದಾರೆ. ಅನಾಮುಲ್ ಹಖ್ ಬಿಜೋಯ್ ಕೂಡ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಭರ್ಜರಿ ಫಾರ್ಮ್​ನಲ್ಲಿದ್ದು ಕಳೆದ ಮೂರು ಏಕದಿನ ಪಂದ್ಯಗಳಲ್ಲಿ ಎರಡು ಅರ್ಧಶತಕ ಸಿಡಿಸಿದ್ದಾರೆ. ಮೊಸದ್ದಿಕ್ ಹುಸೈನ್, ತೈಜುಲ್ ಇಸ್ಲಾಂ ಮತ್ತು ಶೋರಿಫುಲ್ ಇಸ್ಲಾಂ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇವರ ಬದಲಿಗೆ ಶಕಿಬ್ ಅಲ್ ಹಸನ್, ಯಾಸಿರ್ ಅಲಿ ಮತ್ತು ಹುಸೈನ್ ಚೌಧರಿ ಅವಕಾಶ ಪಡೆದುಕೊಂಡಿದ್ದಾರೆ.

ಬಾಂಗ್ಲಾದೇಶ ತಂಡ: ತಮೀಮ್ ಇಕ್ಬಾಲ್ (ನಾಯಕ), ಲಿಟನ್ ದಾಸ್, ಅನಾಮುಲ್ ಹಕ್ ಬಿಜೋಯ್, ಶಕಿಬ್ ಅಲ್ ಹಸನ್, ಮುಷ್ಫೀಕುರ್ ರಹೀಮ್, ಅಫೀಫ್ ಹುಸೇನ್, ಯಾಸಿರ್ ಅಲಿ, ಮೆಹಿದಿ ಹಸನ್ ಮಿರಾಜ್, ಮುಸ್ತಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಎಬಾಡೋತ್ ಹುಸೇನ್, ನಸ್ಮದ್, ನಸ್ಮದ್, ನಸ್ಮದ್ ಶಾಂತೋ, ನೂರುಲ್ ಹಸನ್ ಸೋಹನ್.

ಇದನ್ನೂ ಓದಿ
IND Playing XI NZ 1st ODI: ಧವನ್-ಗಿಲ್ ಭರ್ಜರಿ ಆರಂಭ: ಭಾರತದ ಪ್ಲೇಯಿಂಗ್ XI ಇಲ್ಲಿದೆ
IND vs NZ, 1st ODI Highlights: ಬೌಲಿಂಗ್ ವೈಫಲ್ಯ; ಮೊದಲ ಏಕದಿನ ಪಂದ್ಯ ಗೆದ್ದ ಕಿವೀಸ್
Rohit Sharma: ಫಿಟ್​ನೆಸ್​ಗಾಗಿ ಕಸರತ್ತು ಆರಂಭಿಸಿದ ರೋಹಿತ್ ಶರ್ಮಾ
IPL 2023: CSK ತಂಡ ಕೈಬಿಟ್ಟ ಬೆನ್ನಲ್ಲೇ ಅಬ್ಬರಿಸಿದ ಚೆನ್ನೈ ಆಟಗಾರರು..!

ಭಾರತ ತಂಡ ಹೇಗಿದೆ?:

ಬಾಂಗ್ಲಾ ಸರಣಿಗೆ ರೋಹಿತ್ ಶರ್ಮಾ ತಂಡಕ್ಕೆ ಮರಳಿದ್ದು ಕೆಎಲ್. ರಾಹುಲ್, ವಿರಾಟ್ ಕೊಹ್ಲಿ ಕೂಡ ಸ್ಥಾನ ಪಡೆದುಕೊಂಡಿದ್ದಾರೆ. ಶಿಖರ್ ಧವನ್ ಕೂಡ ಇದ್ದಾರೆ. ಆಲ್‌ರೌಂಡರ್ ಜಡೇಜ ಅವರಿಗೆ ಕೆಲವು ತಿಂಗಳುಗಳ ಹಿಂದೆ ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅವರಿನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ಬಿಸಿಸಿಐ ಹೇಳಿದ್ದು ಈ ಕಾರಣಕ್ಕಾಗಿ ಜಡೇಜಾರನ್ನು ಆಯ್ಕೆಗೆ ಪರಿಗಣಿಸಿಲ್ಲವಂತೆ. ಉಳಿದಂತೆ ರಜತ್ ಪಟಿದಾರ್, ರಾಹುಲ್ ತ್ರಿಪಾಠಿ, ಕುಲ್ದೀಪ್ ಸೇನ್ ಹೊಸ ಮುಖಗಳಾಗಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ ಡಿಸೆಂಬರ್ 4ಕ್ಕೆ ಶುರುವಾಗಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್‌ ಕೀಪರ್), ಇಶಾನ್ ಕಿಶನ್, ಶಹ್ಬಾಜ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಕುಲದೀಪ್ ಸೇನ್.

Published On - 8:09 am, Fri, 25 November 22