Champions Trophy 2025: ನಾಳೆಯೇ ಕಣಕ್ಕಿಳಿಯಲಿದೆ ಭಾರತ; ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?
Champions Trophy 2025: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ. ಫೆಬ್ರವರಿ 20 ರಂದು ದುಬೈನಲ್ಲಿ ನಡೆಯುವ ಈ ನಿರ್ಣಾಯಕ ಪಂದ್ಯದಲ್ಲಿ ಭಾರತದ ಗೆಲುವು ಅತ್ಯಂತ ಮುಖ್ಯ. ಇಂಗ್ಲೆಂಡ್ ವಿರುದ್ಧದ ಸರಣಿ ಗೆಲುವಿನಿಂದ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಜ್ಜಾಗಿದೆ.

ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲು ಸಿದ್ಧವಾಗಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಲಿದೆ. ಎ ಗುಂಪಿನಲ್ಲಿ ಟೀಂ ಇಂಡಿಯಾ ಗ್ರೂಪ್ ಹಂತದಲ್ಲಿ ಒಟ್ಟು 3 ಪಂದ್ಯಗಳನ್ನು ಆಡಲಿದೆ. ಆದ್ದರಿಂದ, ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋತರೂ ಅಪಾಯ ಕಟ್ಟಿಟ್ಟ ಬುತ್ತಿ. ಹೀಗಾಗಿ ಪ್ರತಿಯೊಂದು ಪಂದ್ಯವು ರೋಹಿತ್ ಪಡೆಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಆದಾಗ್ಯೂ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿರುವುದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಹೀಗಾಗಿ ಆತ್ಮವಿಶ್ವಾಸದೊಂದಿಗೆ ರೋಹಿತ್ ಪಡೆ ಕಣಕ್ಕಿಳಿದು ಗೆಲುವಿನೊಂದಿಗೆ ಟೂರ್ನಿಯನ್ನು ಆರಂಭಿಸಬೇಕಾಗಿದೆ.
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಯಾವಾಗ ನಡೆಯಲ್ಲಿದೆ?
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಫೆಬ್ರವರಿ 20 ರ ಗುರುವಾರದಂದು ನಡೆಯಲ್ಲಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಎಲ್ಲಿ ನಡೆಯಲ್ಲಿದೆ?
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯಕ್ಕೆ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲ್ಲಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಎಷ್ಟು ಗಂಟೆಗೆ ಆರಂಭ?
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಆರಂಭವಾಗಲಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ಟಿವಿಯಲ್ಲಿ ನೇರಪ್ರಸಾರ ವೀಕ್ಷಿಸಬಹುದು.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯವನ್ನು ಭಾರತದಲ್ಲಿ ಜಿಯೋಹಾಟ್‌ಸ್ಟಾರ್ ಮೊಬೈಲ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.
ಬಾಂಗ್ಲಾದೇಶ ತಂಡ: ನಜ್ಮುಲ್ ಹೊಸೈನ್ ಶಾಂಟೋ (ನಾಯಕ), ಮುಷ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹೀದ್ ಹೃದಯ, ಸೌಮ್ಯ ಸರ್ಕಾರ್, ತಂಜಿದ್ ಹಸನ್, ಮಹ್ಮದುಲ್ಲಾ, ಜಾಕರ್ ಅಲಿ, ಮೆಹದಿ ಹಸನ್ ಮಿರಾಜ್, ರಿಷದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಪರ್ವೇಜ್ ಹೊಸೈನ್, ನಸುಮ್ ಅಹ್ಮದ್, ತಂಜಿಮ್ ಹಸನ್, ನಹಿದ್ ರಾಣಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:51 pm, Wed, 19 February 25