AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಭಾರತ- ಬಾಂಗ್ಲಾ ಪಂದ್ಯಕ್ಕೆ ಮಳೆ ಅಡ್ಡಿ; ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ

Champions Trophy 2025: ಫೆಬ್ರವರಿ 20 ರಂದು ದುಬೈನಲ್ಲಿ ನಡೆಯುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯದ ಮೇಲೆ ಮಳೆಯ ಭೀತಿ ಎದುರಾಗಿದೆ. ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಪಿಚ್ ವರದಿಯ ಪ್ರಕಾರ, ಪಿಚ್ ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳಿಗೆ ಸಮಾನವಾಗಿ ಸಹಾಯಕವಾಗಿದೆ. ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋಸಿನಿಮಾ ಮೂಲಕ ನೇರಪ್ರಸಾರ ವೀಕ್ಷಿಸಬಹುದು.

IND vs BAN: ಭಾರತ- ಬಾಂಗ್ಲಾ ಪಂದ್ಯಕ್ಕೆ ಮಳೆ ಅಡ್ಡಿ; ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ
ದುಬೈ ಪಿಚ್
Follow us
ಪೃಥ್ವಿಶಂಕರ
|

Updated on: Feb 19, 2025 | 10:17 PM

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ತಮ್ಮ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಫೆಬ್ರವರಿ 20 ರಂದು ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗೆಲುವಿಗಾಗಿ ಪರಸ್ಪರ ಕಾದಾಡಲಿವೆ. ಆದರೆ ಅದಕ್ಕೂ ಮುನ್ನ ಹವಾಮಾನ ಇಲಾಖೆ ನೀಡಿರುವ ವರದಿ ಟೀಂ ಇಂಡಿಯಾ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ವರದಿಯ ಪ್ರಕಾರ ಪಂದ್ಯದ ದಿನ ಮಳೆ ಬರುವ ನಿರೀಕ್ಷೆಯಿದೆ. ಹೆಚ್ಚಿನ ಸಮಯ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯೂ ಇದೆ. ಹವಾಮಾನ ವೈಪರೀತ್ಯದಿಂದಾಗಿ ಭಾರತ ತಂಡವು ಮೊದಲ ಪಂದ್ಯದಲ್ಲೇ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆಗಳಿದ್ದು, ಇದರಿಂದಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ತಂಡದ ಮುಂದಿನ ಹಾದಿಯೂ ಕಷ್ಟಕರವಾಗಬಹುದು.

ಮಳೆಯಾಗುವ ಸಾಧ್ಯತೆ

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದ ದಿನವಾದ ಫೆಬ್ರವರಿ 20 ರಂದು ಅಂದರೆ ನಾಳೆ ದುಬೈನಲ್ಲಿ ಮಳೆಯಾಗಬಹುದು ಎಂದು ಹೇಳಲಾಗುತ್ತಿದೆ. ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಹಗಲಿನಲ್ಲಿ ತಾಪಮಾನವು ಕ್ರಮೇಣ ಹೆಚ್ಚಾಗುತ್ತಿದ್ದರೆ, ರಾತ್ರಿಯ ಹೊತ್ತಿಗೆ ಅದು ಸಾಕಷ್ಟು ಆರ್ದ್ರವಾಗಬಹುದು. ಮಳೆಯಿಂದಾಗಿ ಟೀಮ್ ಇಂಡಿಯಾ ತೊಂದರೆ ಎದುರಿಸಬೇಕಾಗಬಹುದು. ಈ ಪರಿಸ್ಥಿತಿಯಲ್ಲಿ ರೋಹಿತ್ ತನ್ನ ತಂತ್ರಗಳನ್ನು ಸಹ ಬದಲಾಯಿಸಬೇಕಾಗುತ್ತದೆ. ಹಾಗೆಯೇ ಈ ಪಂದ್ಯದಲ್ಲಿ ಟಾಸ್ ಕೂಡ ಪ್ರಮುಖ ಪಾತ್ರ ವಹಿಸುತ್ತದೆ.

ಪಿಚ್‌ ವರದಿ ಇಲ್ಲಿದೆ

ದುಬೈನ ಪಿಚ್ ಬೌಲರ್‌ಗಳು ಮತ್ತು ಬ್ಯಾಟ್ಸ್‌ಮನ್‌ಗಳಿಗಿಬ್ಬರಿಗೂ ಸಮಾನವಾಗಿ ನೆರವಾಗಲಿದೆ. ಇತ್ತೀಚೆಗೆ ILT20 2025 ರ 15 ಪಂದ್ಯಗಳನ್ನು ಇಲ್ಲಿ ಆಡಲಾಗಿದೆ. ಆದರೆ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯವನ್ನು ಈ ಪಂದ್ಯಗಳು ನಡೆದ ಪಿಚ್‌ಗಳಲ್ಲಿ ಆಡಲಾಗುವುದಿಲ್ಲ. ಟೀಂ ಇಂಡಿಯಾದ ಪಂದ್ಯಗಳಿಗಾಗಿ ಎರಡು ಪಿಚ್‌ಗಳನ್ನು ನಿರ್ಮಿಸಲಾಗಿದೆ. ಹೊಸ ಪಿಚ್‌ನಲ್ಲಿ ಪಂದ್ಯ ನಡೆದರೆ, ಬ್ಯಾಟ್ಸ್‌ಮನ್‌ಗಳು ಮತ್ತು ಬೌಲರ್‌ಗಳಿಗೆ ಸಮಾನ ಸಹಾಯ ಸಿಗುತ್ತದೆ ಎಂದು ಪಿಟಿಐ ಮೂಲಗಳು ತಿಳಿಸಿವೆ. ಆರಂಭದಲ್ಲಿ, ವೇಗಿಗಳು ಪಿಚ್‌ನಲ್ಲಿ ಪ್ರಮುಖ ಪಾತ್ರ ವಹಿಸಬಹುದು. ಆದರೆ ಸಮಯ ಕಳೆದಂತೆ, ಸ್ಪಿನ್ನರ್‌ಗಳು ಮೇಲುಗೈ ಸಾಧಿಸಬಹುದು ಎಂದು ವರದಿಯಾಗಿದೆ.

ಭಾರತ-ಬಾಂಗ್ಲಾದೇಶ ಪಂದ್ಯವನ್ನು ನೀವು ಎಲ್ಲಿ ನೇರಪ್ರಸಾರ ವೀಕ್ಷಿಸಬಹುದು?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಟಾಸ್ ನಡೆಯಲಿದೆ. ಪಂದ್ಯ ಮಧ್ಯಾಹ್ನ 2:30ಕ್ಕೆ ಆರಂಭವಾಗಲಿದೆ. ಭಾರತದಲ್ಲಿ, ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ನೆಟ್‌ವರ್ಕ್ 18 ಚಾನೆಲ್‌ಗಳಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಹಾಗೆಯೇ ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.

ಬಾಂಗ್ಲಾದೇಶ ತಂಡ: ನಜ್ಮುಲ್ ಹೊಸೈನ್ ಶಾಂಟೋ (ನಾಯಕ), ಮುಷ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹೀದ್ ಹೃದಯ, ಸೌಮ್ಯ ಸರ್ಕಾರ್, ತಂಜಿದ್ ಹಸನ್, ಮಹ್ಮದುಲ್ಲಾ, ಜಾಕರ್ ಅಲಿ, ಮೆಹದಿ ಹಸನ್ ಮಿರಾಜ್, ರಿಷದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಪರ್ವೇಜ್ ಹೊಸೈನ್, ನಸುಮ್ ಅಹ್ಮದ್, ತಂಜಿಮ್ ಹಸನ್, ನಹಿದ್ ರಾಣಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?