AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಅರ್ಷದೀಪ್ ಇನ್, ಬುಮ್ರಾ ಔಟ್..? ಬಾಂಗ್ಲಾ ವಿರುದ್ಧ ಹೇಗಿರಲಿದೆ ಪ್ಲೇಯಿಂಗ್ 11?

India vs Bangladesh Playing XI: ಸೆಪ್ಟೆಂಬರ್ 24 ರಂದು ನಡೆಯುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸೂಪರ್ 4 ಪಂದ್ಯಕ್ಕಾಗಿ ಭಾರತ ತಂಡದ ಸಂಭಾವ್ಯ ಆಡುವ XI ಬಗ್ಗೆ ಚರ್ಚಿಸಲಾಗಿದೆ. ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ, ಇದರಿಂದ ಅರ್ಷದೀಪ್ ಸಿಂಗ್ ಅವರಿಗೆ ಅವಕಾಶ ದೊರೆಯಬಹುದು. ಬುಮ್ರಾ ಅವರ ದುಬಾರಿ ಬೌಲಿಂಗ್ ಮತ್ತು ವಿಕೆಟ್ ಪಡೆಯದಿರುವುದು ಇದಕ್ಕೆ ಕಾರಣ. ಉಳಿದ ತಂಡದಲ್ಲಿ ಹೆಚ್ಚಿನ ಬದಲಾವಣೆಗಳನ್ನು ನಿರೀಕ್ಷಿಸಲಾಗುತ್ತಿಲ್ಲ.

Asia Cup 2025: ಅರ್ಷದೀಪ್ ಇನ್, ಬುಮ್ರಾ ಔಟ್..? ಬಾಂಗ್ಲಾ ವಿರುದ್ಧ ಹೇಗಿರಲಿದೆ ಪ್ಲೇಯಿಂಗ್ 11?
Team India
ಪೃಥ್ವಿಶಂಕರ
|

Updated on: Sep 23, 2025 | 10:24 PM

Share

ಸೆಪ್ಟೆಂಬರ್ 24 ರಂದು ಭಾರತ ಮತ್ತು ಬಾಂಗ್ಲಾದೇಶ ನಡುವೆ ಸೂಪರ್ 4 ಸುತ್ತಿನ ಎರಡನೇ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ 11 ಹೇಗಿರಲಿದೆ? ತಂಡದಲ್ಲಿ ಯಾವುದೇ ಬದಲಾವಣೆಗಳಾಗುತ್ತವೆಯೇ ? ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಭಾರತ ತಂಡದ ಪ್ಲೇಯಿಂಗ್ 11 ಬಗ್ಗೆ ಯಾವುದೇ ಸುದ್ದಿ ಹೊರಬಿದ್ದಿಲ್ಲವಾದರೂ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಬಹುದು ಎಂದು ವರದಿಯಾಗಿದೆ. ಏಕೆಂದರೆ ಟೀಂ ಇಂಡಿಯಾ ಸೆಪ್ಟೆಂಬರ್ 24, ಸೆಪ್ಟೆಂಬರ್ 26 ರಂದು ಸೂಪರ್ 4 ಸುತ್ತಿವ ಪಂದ್ಯಗಳನ್ನು ಆಡಬೇಕು. ಆ ನಂತರ ಸೆಪ್ಟೆಂಬರ್ 28 ರಂದು ಫೈನಲ್ ಪಂದ್ಯವನ್ನು ಆಡಬೇಕು. ಇದರರ್ಥ ಟೀಂ ಇಂಡಿಯಾ ಆರು ದಿನಗಳಲ್ಲಿ ಮೂರು ಪಂದ್ಯಗಳನ್ನು ಆಡಬೇಕಾಗಿರುವುದರಿಂದ ಬುಮ್ರಾಗೆ ವಿಶ್ರಾಂತಿ ನೀಡಬಹುದು. ಇದಕ್ಕೆ ಪೂರಕವಾಗಿ ಜಸ್ಪ್ರೀತ್ ಬುಮ್ರಾ ಪಾಕಿಸ್ತಾನದ ವಿರುದ್ಧ ತುಂಬಾ ದುಬಾರಿಯಾಗಿದ್ದರು. ಅಲ್ಲದೆ ವಿಕೆಟ್ ಕೂಡ ಪಡೆಯಲಿಲ್ಲ, ಆದ್ದರಿಂದ ಅವರಿಗೆ ವಿಶ್ರಾಂತಿ ನೀಡಬಹುದು.

ಬುಮ್ರಾ ಆಡದಿದ್ದರೆ, ಅರ್ಷ್‌ದೀಪ್​ಗೆ ಅವಕಾಶ?

ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶ ವಿರುದ್ಧ ಆಡದಿದ್ದರೆ , ಅರ್ಷ್‌ದೀಪ್ ಸಿಂಗ್​ಗೆ ಅವಕಾಶ ಸಿಗುವುದು ಖಚಿತ. ಈ ಟೂರ್ನಿಯಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿದ್ದ ಅರ್ಷ್‌ದೀಪ್ ಓಮನ್ ವಿರುದ್ಧ ಒಂದು ವಿಕೆಟ್ ಕೂಡ ಪಡೆದಿದ್ದರು. ಈಗ ಅವರಿಗೆ ಬಾಂಗ್ಲಾದೇಶ ವಿರುದ್ಧ ಅವಕಾಶ ಸಿಗುತ್ತದೆಯೇ ಎಂದು ಕಾದು ನೋಡಬೇಕಾಗಿದೆ. ಇದಕ್ಕೆ ಪೂರಕವಾಗಿ ಬಾಂಗ್ಲಾ ತಂಡದ ವಿರುದ್ಧದ ಕಳೆದ ಟಿ20 ಸರಣಿಯಲ್ಲಿ ಅವರು ಎರಡು ಪಂದ್ಯಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ಹೀಗಾಗಿ ಅವರಿಗೆ ಅವಕಾಶ ಸಿಕ್ಕರೂ ಸಿಗಬಹುದು. ಉಳಿದಂತೆ ಬುಮ್ರಾಗೆ ವಿಶ್ರಾಂತಿ ನೀಡಿರುವುದನ್ನು ಹೊರತುಪಡಿಸಿ, ತಂಡದಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ.

ಬಾಂಗ್ಲಾ ವಿರುದ್ಧ ಟೀಂ ಇಂಡಿಯಾ ದಾಖಲೆ

ಬಾಂಗ್ಲಾದೇಶ ವಿರುದ್ಧ ಭಾರತ ಅದ್ಭುತ ದಾಖಲೆಯನ್ನು ಹೊಂದಿದೆ. ಎರಡೂ ತಂಡಗಳು 17 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಭಾರತ 16 ಪಂದ್ಯಗಳನ್ನು ಗೆದ್ದಿದ್ದರೆ, ಬಾಂಗ್ಲಾದೇಶ ಕೇವಲ ಒಂದು ಪಂದ್ಯವನ್ನು ಗೆದ್ದಿದೆ.

ಭಾರತದ ಸಂಭಾವ್ಯ ಆಡುವ XI: ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಶಿವಂ ದುಬೆ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ಅರ್ಷದೀಪ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ