
ಸೆಪ್ಟೆಂಬರ್ 24 ರಂದು ಭಾರತ ಮತ್ತು ಬಾಂಗ್ಲಾದೇಶ ನಡುವೆ ಸೂಪರ್ 4 ಸುತ್ತಿನ ಎರಡನೇ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ 11 ಹೇಗಿರಲಿದೆ? ತಂಡದಲ್ಲಿ ಯಾವುದೇ ಬದಲಾವಣೆಗಳಾಗುತ್ತವೆಯೇ ? ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಭಾರತ ತಂಡದ ಪ್ಲೇಯಿಂಗ್ 11 ಬಗ್ಗೆ ಯಾವುದೇ ಸುದ್ದಿ ಹೊರಬಿದ್ದಿಲ್ಲವಾದರೂ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಬಹುದು ಎಂದು ವರದಿಯಾಗಿದೆ. ಏಕೆಂದರೆ ಟೀಂ ಇಂಡಿಯಾ ಸೆಪ್ಟೆಂಬರ್ 24, ಸೆಪ್ಟೆಂಬರ್ 26 ರಂದು ಸೂಪರ್ 4 ಸುತ್ತಿವ ಪಂದ್ಯಗಳನ್ನು ಆಡಬೇಕು. ಆ ನಂತರ ಸೆಪ್ಟೆಂಬರ್ 28 ರಂದು ಫೈನಲ್ ಪಂದ್ಯವನ್ನು ಆಡಬೇಕು. ಇದರರ್ಥ ಟೀಂ ಇಂಡಿಯಾ ಆರು ದಿನಗಳಲ್ಲಿ ಮೂರು ಪಂದ್ಯಗಳನ್ನು ಆಡಬೇಕಾಗಿರುವುದರಿಂದ ಬುಮ್ರಾಗೆ ವಿಶ್ರಾಂತಿ ನೀಡಬಹುದು. ಇದಕ್ಕೆ ಪೂರಕವಾಗಿ ಜಸ್ಪ್ರೀತ್ ಬುಮ್ರಾ ಪಾಕಿಸ್ತಾನದ ವಿರುದ್ಧ ತುಂಬಾ ದುಬಾರಿಯಾಗಿದ್ದರು. ಅಲ್ಲದೆ ವಿಕೆಟ್ ಕೂಡ ಪಡೆಯಲಿಲ್ಲ, ಆದ್ದರಿಂದ ಅವರಿಗೆ ವಿಶ್ರಾಂತಿ ನೀಡಬಹುದು.
ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶ ವಿರುದ್ಧ ಆಡದಿದ್ದರೆ , ಅರ್ಷ್‌ದೀಪ್ ಸಿಂಗ್ಗೆ ಅವಕಾಶ ಸಿಗುವುದು ಖಚಿತ. ಈ ಟೂರ್ನಿಯಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿದ್ದ ಅರ್ಷ್‌ದೀಪ್ ಓಮನ್ ವಿರುದ್ಧ ಒಂದು ವಿಕೆಟ್ ಕೂಡ ಪಡೆದಿದ್ದರು. ಈಗ ಅವರಿಗೆ ಬಾಂಗ್ಲಾದೇಶ ವಿರುದ್ಧ ಅವಕಾಶ ಸಿಗುತ್ತದೆಯೇ ಎಂದು ಕಾದು ನೋಡಬೇಕಾಗಿದೆ. ಇದಕ್ಕೆ ಪೂರಕವಾಗಿ ಬಾಂಗ್ಲಾ ತಂಡದ ವಿರುದ್ಧದ ಕಳೆದ ಟಿ20 ಸರಣಿಯಲ್ಲಿ ಅವರು ಎರಡು ಪಂದ್ಯಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ಹೀಗಾಗಿ ಅವರಿಗೆ ಅವಕಾಶ ಸಿಕ್ಕರೂ ಸಿಗಬಹುದು. ಉಳಿದಂತೆ ಬುಮ್ರಾಗೆ ವಿಶ್ರಾಂತಿ ನೀಡಿರುವುದನ್ನು ಹೊರತುಪಡಿಸಿ, ತಂಡದಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ.
ಬಾಂಗ್ಲಾದೇಶ ವಿರುದ್ಧ ಭಾರತ ಅದ್ಭುತ ದಾಖಲೆಯನ್ನು ಹೊಂದಿದೆ. ಎರಡೂ ತಂಡಗಳು 17 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಭಾರತ 16 ಪಂದ್ಯಗಳನ್ನು ಗೆದ್ದಿದ್ದರೆ, ಬಾಂಗ್ಲಾದೇಶ ಕೇವಲ ಒಂದು ಪಂದ್ಯವನ್ನು ಗೆದ್ದಿದೆ.
ಭಾರತದ ಸಂಭಾವ್ಯ ಆಡುವ XI: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಶಿವಂ ದುಬೆ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ಅರ್ಷದೀಪ್ ಸಿಂಗ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ