IND vs BAN: ಇಂದಿನಿಂದ ಭಾರತ-ಬಾಂಗ್ಲಾ ದ್ವಿತೀಯ ಟೆಸ್ಟ್: ಟೀಮ್ ಇಂಡಿಯಾದಲ್ಲಿ ಆಗುತ್ತಾ ಬದಲಾವಣೆ?
India vs Bangladesh 2nd Test: ದ್ವಿತೀಯ ಟೆಸ್ಟ್ ಪಂದ್ಯ ಎರಡೂ ತಂಡಕ್ಕೆ ಮಹತ್ವದ್ದಾಗಿದೆ. ಸರಣಿ ವಶಪಡಿಸಿಕೊಳ್ಳಬೇಕಾದರೆ ಟೀಮ್ ಇಂಡಿಯಾಕ್ಕೆ ಈ ಮ್ಯಾಚ್ ಗೆಲ್ಲಲೇ ಬೇಕು. ಇತ್ತ ಸರಣಿ ಸೋಲಿನಿಂದ ತಪ್ಪಿಸಿಕೊಳ್ಳಲು ಶಕಿಬ್ ಪಡೆ ಸಮಬಲಕ್ಕೆ ಹೋರಾಟ ನಡೆಸಬೇಕಿದೆ.
ಬಾಂಗ್ಲಾದೇಶ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ (India vs Bangladesh) ಏಕದಿನ ಸರಣಿಯನ್ನು ಕಳೆದುಕೊಂಡ ಬಳಿಕ ಟೆಸ್ಟ್ ಸರಣಿಯಲ್ಲಿ ಭರ್ಜರಿ ಕಮ್ಬ್ಯಾಕ್ ಮಾಡಿತು. ಚಟ್ಟೋಗ್ರಾಮ್‌ನ ಝಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 188 ರನ್ಗಳ ಅಮೋಘ ಜಯ ಸಾಧಿಸಿದ ಟೀಮ್ ಇಂಡಿಯಾ (Team India) ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿತು. ಇದೀಗ ದ್ವಿತೀಯ ಹಾಗೂ ಅಂತಿಮ ಟೆಸ್ಟ್ಗೆ ಉಭಯ ತಂಡಗಳು ಸಜ್ಜಾಗಿದೆ. ಇಂದು ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಹಾಗೂ ಬಾಂಗ್ಲಾ (IND vs BAN) ನಡುವಣ ಎರಡನೇ ಟೆಸ್ಟ್ ಪಂದ್ಯ ಶುರುವಾಗಲಿದೆ.
ದ್ವಿತೀಯ ಟೆಸ್ಟ್ ಪಂದ್ಯ ಎರಡೂ ತಂಡಕ್ಕೆ ಮಹತ್ವದ್ದಾಗಿದೆ. ಸರಣಿ ವಶಪಡಿಸಿಕೊಳ್ಳಬೇಕಾದರೆ ಟೀಮ್ ಇಂಡಿಯಾಕ್ಕೆ ಈ ಮ್ಯಾಚ್ ಗೆಲ್ಲಲೇ ಬೇಕು. ಇತ್ತ ಸರಣಿ ಸೋಲಿನಿಂದ ತಪ್ಪಿಸಿಕೊಳ್ಳಲು ಶಕಿಬ್ ಪಡೆ ಸಮಬಲಕ್ಕೆ ಹೋರಾಟ ನಡೆಸಬೇಕಿದೆ. ರೋಹಿತ್ ಶರ್ಮಾ ಇನ್ನೂ ಗುಣಮುಖರಾಗಿಲ್ಲ. ಹೀಗಾಗಿ ಇವರು ದ್ವಿತೀಯ ಟೆಸ್ಟ್ನಿಂದ ಕೂಡ ಹೊರಬಿದ್ದಿದ್ದಾರೆ. ಇದರ ಜೊತೆಗೆ ಕಿಬ್ಬೊಟ್ಟೆಯ ಸ್ನಾಯು ಸೆಳೆತದಿಂದಾಗಿ ನವ್ದೀಪ್ ಸೈನಿ ಕೂಡ ತಂಡದಿಂದ ಔಟಾಗಿದ್ದರೆ. ರೋಹಿತ್ ಅಲಭ್ಯತೆಯಲ್ಲಿ ಕೆಎಲ್ ರಾಹುಲ್ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ. ಚೇತೇಶ್ವರ್ ಪೂಜಾರ ಉಪ ನಾಯಕನಾಗಿದ್ದಾರೆ.
Preps ✅
Just one sleep away from the second #BANvIND Test ⏳#TeamIndia pic.twitter.com/br75gzwEO8
— BCCI (@BCCI) December 21, 2022
ಈ ಪಂದ್ಯಕ್ಕೆ ಭಾರತ ತಂಡದಲ್ಲಿ ಬದಲಾವಣೆ ಅನುಮಾನ. ಮೊದಲ ಟೆಸ್ಟ್ನಲ್ಲಿ ಗೆದ್ದ ತಂಡವೇ ಕಣಕ್ಕಿಳಿಯಲಿದೆ. ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ ಹಾಗೂ ಶ್ರೇಯಸ್ ಅಯ್ಯರ್ ಬೊಂಬಾಟ್ ಫಾರ್ಮ್ನಲ್ಲಿದ್ದಾರೆ. ಇವರಿಗೆ ನಾಯಕ ಕೆಎಲ್ ರಾಹುಲ್, ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಸಾಥ್ ನೀಡಬೇಕಿದೆ. ಅಕ್ಷರ್ ಪಟೇಲ್ ಹಾಗೂ ರವಿಚಂದ್ರನ್ ಅಶ್ವಿನ್ ಆಲ್ರೌಂಡರ್ಗಳಾಗಿದ್ದಾರೆ. ಕುಲ್ದೀಪ್ ಯಾದವ್ ಕೂಡ ತಂಡಕ್ಕೆ ಬ್ಯಾಟಿಂಗ್ ವಿಭಾಗದಲ್ಲಿ ನೆರವಾಗಬಲ್ಲರು. ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್ ಘಾತಕ ವೇಗಿಗಳಾಗಿದ್ದಾರೆ.
IPL Auction 2023: ಮಿನಿ ಹರಾಜಿನಿಂದ ಹೊರಬಿದ್ದ ಸ್ಟಾರ್ ವಿದೇಶಿ ಆಟಗಾರರು ಇವರೇ! ಪಟ್ಟಿಯಲ್ಲಿ 9 ಮಂದಿ
ಇತ್ತ ಮೊದಲ ಟೆಸ್ಟ್ ಸೋಲಿನಲ್ಲಿರುವ ಬಾಂಗ್ಲಾದೇಶಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಇಂಜುರಿ ಕಾರಣದಿಂದ ಮೊದಲ ಟೆಸ್ಟ್ಗೆ ಅಲಭ್ಯರಾಗಿದ್ದ ಆರಂಭಿಕ ಆಟಗಾರ ತಮೀಮ್ ಇಕ್ಬಾಲ್ ಎರಡನೇ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದಿದ್ದಾರೆ. ಅಷ್ಟೆ ಅಲ್ಲ, ವೇಗಿ ಹುಸೈನ್ ಕೂಡ ಇಂಜುರಿಗೆ ಒಳಗಾಗಿದ್ದು ಢಾಕಾ ಟೆಸ್ಟ್ನಿಂದ ಔಟ್ ಆಗಿದ್ದಾರೆ. ಮಂಡಿರಜ್ಜು ಸಮಸ್ಯೆಯಿಂದ ಬಳಲುತ್ತಿರುವ ಶೋರಿಫುಲ್ ಇಸ್ಲಾಮ್ ಅವರನ್ನು ತಂಡದಿಂದ ಕೈಬಿಡಲಾಗಿದ್ದು ಅವರ ಸ್ಥಾನಕ್ಕೆ ಮೊಮಿನುಲ್ ಹಕ್ ಅವರನ್ನು ಕರೆತರಲಾಗಿದೆ. ಒಟ್ಟಾರೆಯಾಗಿ ಮೇಲ್ನೋಟಕ್ಕೆ ಬಾಂಗ್ಲಾ ಬಲಿಷ್ಠವಾಗಿರುವಂತೆ ಕಾಣುತ್ತಿಲ್ಲ. ಶಕಿಬ್ ಅಲ್ ಹಸನ್ ನಾಯಕತ್ವದಲ್ಲಿ ತಂಡ ಯಾವರೀತಿ ಪ್ರದರ್ಶನ ನೀಡುತ್ತೆ ನೋಡಬೇಕಿದೆ.
ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಬೆಳಗ್ಗೆ 9 ಗಂಟೆಗೆ ಶುರುವಾಗಲಿದೆ. 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಸೋನಿ ಲಿವ್ನಲ್ಲಿ ಲೈವ್ ಸ್ಟ್ರೀಮ್ ಕಾಣಲಿದೆ.
ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ಸೌರಬ್ ಕುಮಾರ್, ಜಯದೇವ್ ಉನಾದ್ಕಟ್.
ಬಾಂಗ್ಲಾದೇಶ ತಂಡ: ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಶಕಿಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್, ಯಾಸಿರ್ ಅಲಿ, ನೂರುಲ್ ಹಸನ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ನಸುಮ್ ಅಹ್ಮದ್, ಮಹ್ಮುದುಲ್ ಹಸನ್ ಪ್ಲೆಷರ್, ಮೊಮಿನುಲ್ ಹಕ್, ರೆಹಮಾನ್ ರಾಜಾ, ತಸ್ಕಿನ್ ಅಹ್ಮದ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:36 am, Thu, 22 December 22