ಬಾಂಗ್ಲಾದೇಶ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 280 ರನ್ಗಳ ಜಯ ಸಾಧಿಸಿದ್ದ ಭಾರತ ತಂಡವು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದೆ. ಈ ಮೂಲಕ ಕಾನ್ಪುರ್ನ ಗ್ರೀನ್ ಪಾರ್ಕ್ ಮೈದಾನದಲ್ಲಿ ಡ್ರಾಗೊಳ್ಳಬೇಕಿದ್ದ ಪಂದ್ಯವನ್ನು 7 ವಿಕೆಟ್ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿ ಕೂಡ ಮುಕ್ತಾಯಗೊಂಡಿದೆ.
ಇನ್ನು ಉಭಯ ತಂಡಗಳು ಟಿ20 ಸರಣಿಗಾಗಿ ಸಜ್ಜಾಗಲಿದೆ. ಈ ಸರಣಿಯಲ್ಲಿ ಒಟ್ಟು ಮೂರು ಪಂದ್ಯಗಳನ್ನಾಡಲಾಗುತ್ತದೆ. ಅಕ್ಟೋಬರ್ 6 ರಿಂದ ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಗ್ವಾಲಿಯರ್ನ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಿದರೆ, ಎರಡನೇ ಪಂದ್ಯವು ಅಕ್ಟೋಬರ್ 9 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಇನ್ನು ಅಕ್ಟೋಬರ್ 12 ರಂದು ನಡೆಯಲಿರುವ ಮೂರನೇ ಪಂದ್ಯಕ್ಕೆ ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಆತಿಥ್ಯವಹಿಸಲಿದೆ.
ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಹಾಗೆಯೇ ಟೆಸ್ಟ್ ತಂಡದಲ್ಲಿರುವ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಬಾಂಗ್ಲಾ ವಿರುದ್ಧ ಯುವ ಆಟಗಾರರು ಕಣಕ್ಕಿಳಿಯಲಿದ್ದಾರೆ. ಅದರಂತೆ ಮುಂಬರುವ ಸರಣಿಗೆ ಆಯ್ಕೆಯಾಗಿರುವ ಉಭಯ ತಂಡಗಳು ಈ ಕೆಳಗಿನಂತಿದೆ…
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್(ನಾಯಕ) ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.
ಇದನ್ನೂ ಓದಿ: IND vs BAN: ಭಾರತ್ ಬಾಲ್ಗೆ ತತ್ತರಿಸಿದ ಬಾಂಗ್ಲಾ: ಟೀಮ್ ಇಂಡಿಯಾಗೆ ಭರ್ಜರಿ ಜಯ
ಬಾಂಗ್ಲಾದೇಶ್ ಟಿ20 ತಂಡ: ನಜ್ಮುಲ್ ಹೊಸೈನ್ ಶಾಂತೊ (ನಾಯಕ), ತಂಝಿದ್ ಹಸನ್ ತಮೀಮ್, ಪರ್ವೇಝ್ ಹೊಸೈನ್ ಎಮನ್, ತೌಹಿದ್ ಹೃದೋಯ್, ಮಹಮ್ಮದುಲ್ಲಾ, ಲಿಟ್ಟನ್ ಕುಮರ್ ದಾಸ್, ಜಾಕಿರ್ ಅಲಿ, ಮೆಹಿದಿ ಹಸನ್ ಮಿರಾಝ್, ಮಹೇದಿ ಹಸನ್, ರಿಶಾದ್ ಹೊಸೈನ್, ಮುಸ್ತಾಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ತಂಝಿಮ್ ಹಸನ್ ಸಾಕಿಬ್, ರಕೀಬುಲ್ ಹಸನ್.
1ನೇ ಟಿ20, ಭಾರತ vs ಬಾಂಗ್ಲಾದೇಶ | ಸೋಮವಾರ, 7 ಅಕ್ಟೋಬರ್ 2024 | 7 PM | ಗ್ವಾಲಿಯರ್ |
2ನೇ ಟಿ20, ಭಾರತ vs ಬಾಂಗ್ಲಾದೇಶ | ಗುರುವಾರ, 10 ಅಕ್ಟೋಬರ್ 2024 | 7 PM | ದೆಹಲಿ |
3ನೇ ಟಿ20, ಭಾರತ vs ಬಾಂಗ್ಲಾದೇಶ | ಭಾನುವಾರ, 13 ಅಕ್ಟೋಬರ್ 2024 | 7 PM | ಹೈದರಾಬಾದ್ |