
ಟಿ20 ವಿಶ್ವಕಪ್ 2024 ರ 47 ನೇ ಪಂದ್ಯವು ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ನಡೆಯಿತು. ಆ್ಯಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಏಕಪಕ್ಷೀಯವಾಗಿ 50 ರನ್‌ಗಳ ಜಯ ಸಾಧಿಸಿತು. ಇದು ಸೂಪರ್-8 ಸುತ್ತಿನಲ್ಲಿ ಟೀಂ ಇಂಡಿಯಾದ ಸತತ ಎರಡನೇ ಗೆಲುವು. ಇದಕ್ಕೂ ಮುನ್ನ ಟೀಂ ಇಂಡಿಯಾ ಅಫ್ಘಾನಿಸ್ತಾನವನ್ನು ಸೋಲಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 146 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಈ ಮೂಲಕ ಬಾಂಗ್ಲಾ ತಂಡದ ಸೆಮಿಫೈನಲ್ ಕನಸು ಭಗ್ನಗೊಂಡಿತು.
ಇಂದು ನಡೆದ ಸೂಪರ್ 8 ಹಂತದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 50 ರನ್‌ಗಳಿಂದ ಸೋಲಿಸುವಲ್ಲಿ ಭಾರತ ತಂಡ ಯಶಸ್ವಿಯಾಗಿದೆ. ಮೊದಲು ಬ್ಯಾಟ್ ಮಾಡಿದ ಭಾರತ ಐದು ವಿಕೆಟ್‌ಗೆ 196 ರನ್ ಗಳಿಸಿತು. ಉತ್ತರವಾಗಿ ಬಾಂಗ್ಲಾದೇಶ ತಂಡ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ 146 ರನ್ ಗಳಿಸಲಷ್ಟೇ ಶಕ್ತವಾಯಿತು.
ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅದ್ಭುತ ಬೌಲಿಂಗ್ ಮಾಡಿ ಬಾಂಗ್ಲಾದೇಶಕ್ಕೆ ಏಳನೇ ಹೊಡೆತ ನೀಡಿದರು. ರಿಶಾದ್ ಹುಸೇನ್ 10 ಎಸೆತಗಳಲ್ಲಿ 24 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಇದು ಈ ಪಂದ್ಯದಲ್ಲಿ ಬುಮ್ರಾ ಅವರ ಎರಡನೇ ವಿಕೆಟ್ ಆಗಿದೆ.
ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಬಾಂಗ್ಲಾ ನಾಯಕ ನಜ್ಮುಲ್ ಹುಸೇನ್ ಶಾಂಟೊ ಅವರನ್ನು ಪೆವಿಲಿಯನ್ಗಟ್ಟಿದರು. ಶಾಂಟೊ 32 ಎಸೆತಗಳಲ್ಲಿ 40 ರನ್ ಗಳಿಸಿ ಔಟಾದರು.
ರಿಸ್ಟ್ ಸ್ಪಿನ್ನರ್ ಕುಲ್ದೀಪ್ ಯಾದವ್ ತಮ್ಮ ಅದ್ಭುತ ಪ್ರದರ್ಶನವನ್ನು ಮುಂದುವರಿಸಿ ಬಾಂಗ್ಲಾದೇಶಕ್ಕೆ ನಾಲ್ಕನೇ ಹೊಡೆತ ನೀಡಿದರು. ಅನುಭವಿ ಬ್ಯಾಟ್ಸ್‌ಮನ್ ಶಕೀಬ್ ಅಲ್ ಹಸನ್ ಅವರನ್ನು ಔಟ್ ಮಾಡುವ ಮೂಲಕ ಕುಲ್ದೀಪ್ ಭಾರತಕ್ಕೆ ನಾಲ್ಕನೇ ಯಶಸ್ಸನ್ನು ನೀಡಿದರು. ಏಳು ಎಸೆತಗಳಲ್ಲಿ 11 ರನ್ ಗಳಿಸಿ ಶಕೀಬ್ ಔಟಾದರು. ಇದು ಈ ಪಂದ್ಯದಲ್ಲಿ ಕುಲ್ದೀಪ್ ಅವರ ಮೂರನೇ ವಿಕೆಟ್ ಆಗಿದೆ.
ಕುಲ್ದೀಪ್ ಯಾದವ್, ಹೊಸ ಬ್ಯಾಟ್ಸ್‌ಮನ್ ಆಗಿ ಬಂದ ತೌಹೀದ್ ಹಾರ್ಡೋಯ್ ಅವರನ್ನು ಔಟ್ ಮಾಡುವ ಮೂಲಕ ಭಾರತಕ್ಕೆ ಮೂರನೇ ಯಶಸ್ಸನ್ನು ನೀಡಿದರು.
ರಿಸ್ಟ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅದ್ಭುತ ಬೌಲಿಂಗ್ ಮಾಡಿ ತಂಜಿದ್ ಹಸನ್ ಅವರನ್ನು ಔಟ್ ಮಾಡುವ ಮೂಲಕ ಬಾಂಗ್ಲಾದೇಶಕ್ಕೆ ಎರಡನೇ ಹೊಡೆತ ನೀಡಿದರು. ನಾಯಕ ನಜ್ಮುಲ್ ಹುಸೇನ್ ಅವರೊಂದಿಗೆ ತಂಝಿದ್ ಉತ್ತಮ ಜೊತೆಯಾಟ ನೀಡಿದ್ದರು. ತಂಜಿದ್ 29 ರನ್ ಗಳಿಸಿ ಔಟಾದರು.
ನಾಯಕ ನಜ್ಮುಲ್ ಹುಸೇನ್ ಶಾಂಟೊ ಅವರೊಂದಿಗೆ ತಂಜಿದ್ ಹಸನ್ ಬಾಂಗ್ಲಾದೇಶದ ಇನ್ನಿಂಗ್ಸ್‌ನ ಜವಾಬ್ದಾರಿಯನ್ನು ವಹಿಸಿಕೊಂಡರು. ಇಬ್ಬರೂ ಬ್ಯಾಟ್ಸ್‌ಮನ್‌ಗಳು ಅದ್ಭುತವಾಗಿ ಬ್ಯಾಟಿಂಗ್ ಮಾಡಿ ಪವರ್‌ಪ್ಲೇಯಲ್ಲಿ ಯಾವುದೇ ಹಿನ್ನಡೆಗೆ ಅವಕಾಶ ನೀಡಲಿಲ್ಲ. ಎಂಟು ಓವರ್‌ಗಳ ಅಂತ್ಯಕ್ಕೆ ಬಾಂಗ್ಲಾದೇಶ ಒಂದು ವಿಕೆಟ್‌ಗೆ 50 ರನ್ ಗಳಿಸಿದೆ. ತಂಜಿದ್ 27 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ ಮತ್ತು ಶಾಂಟೊ ಏಳು ರನ್ ಗಳಿಸಿದ್ದಾರೆ.
ಆರಂಭಿಕ ಆಟಗಾರ ಲಿಟನ್ ದಾಸ್ ಅವರನ್ನು ಔಟ್ ಮಾಡುವ ಮೂಲಕ ಹಾರ್ದಿಕ್ ಪಾಂಡ್ಯ ಭಾರತಕ್ಕೆ ಮೊದಲ ಯಶಸ್ಸನ್ನು ನೀಡಿದರು. ಲಿಟನ್ 10 ಎಸೆತಗಳಲ್ಲಿ 13 ರನ್ ಗಳಿಸಿ ಔಟಾದರು.
ಬಾಂಗ್ಲಾದೇಶದ ಇನ್ನಿಂಗ್ಸ್ ಆರಂಭವಾಗಿದೆ. ಲಿಟನ್ ದಾಸ್ ಮತ್ತು ತಂಜೀದ್ ಹಸನ್ ಬ್ಯಾಟಿಂಗ್ ಆರಂಭಿಸಿದ್ದಾರೆ. ಇನಿಂಗ್ಸ್‌ನ ಮೊದಲ ಓವರ್ ಅನ್ನು ಅರ್ಷದೀಪ್ ಸಿಂಗ್ ಬೌಲಿಂಗ್ ಮಾಡುತ್ತಿದ್ದಾರೆ.
ಉಪನಾಯಕ ಹಾರ್ದಿಕ್ ಪಾಂಡ್ಯ ಅವರ ಅಜೇಯ ಅರ್ಧಶತಕದ ಬಲದಿಂದ ಭಾರತ ಸೂಪರ್ 8 ಸುತ್ತಿನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲ್ಲಲು 197 ರನ್‌ಗಳ ಗುರಿಯನ್ನು ನೀಡಿದೆ. ಇದು ಈ ವಿಶ್ವಕಪ್‌ನಲ್ಲಿ ಭಾರತದ ಗರಿಷ್ಠ ಮೊತ್ತವಾಗಿದೆ.
ಶಿವಂ ದುಬೆ ಅವರನ್ನು ಔಟ್ ಮಾಡುವ ಮೂಲಕ ರಿಷಾದ್ ಹುಸೇನ್ ಭಾರತಕ್ಕೆ ಮತ್ತೊಂದು ಹೊಡೆತ ನೀಡಿದರು. ಶಿವಂ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಉತ್ತಮ ಜೊತೆಯಾಟವನ್ನು ಆಡುತ್ತಿದ್ದರು, ಆದರೆ ರಿಶಾದ್ ಎಸೆತದಲ್ಲಿ ಐದನೇ ಬ್ಯಾಟ್ಸ್‌ಮನ್ ಆಗಿ ಔಟಾದರು. ಶಿವಂ 24 ಎಸೆತಗಳಲ್ಲಿ 34 ರನ್ ಗಳಿಸಿದರು.
ಭಾರತ 12ನೇ ಓವರ್‌ನಲ್ಲಿ 100 ರ ಗಡಿ ದಾಟಿದೆ. ಈ ಓವರ್‌ನಲ್ಲಿ ಪಂತ್ ಟ ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿ, ನಂತರದ ಎಸೆತದಲ್ಲಿ ಕ್ಯಾಚಿತ್ತು ಔಟಾದರು.
ಭಾರತ ತಂಡಕ್ಕೆ ಮತ್ತೊಂದು ಪೆಟ್ಟು ನೀಡಿದ ತಂಝಿಮ್, ಸೂರ್ಯಕುಮಾರ್ ಯಾದವ್ ಅವರನ್ನು ಪೆವಿಲಿಯನ್ಗಟ್ಟಿದ್ದಾರೆ. ಕೊಹ್ಲಿ ಔಟಾದ ಬಳಿಕ ಹೊಸ ಬ್ಯಾಟ್ಸ್‌ಮನ್ ಆಗಿ ಕ್ರೀಸ್ಗೆ ಬಂದ ಸೂರ್ಯಕುಮಾರ್ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದರೂ, ಮುಂದಿನ ಎಸೆತದಲ್ಲಿಯೇ ವಿಕೆಟ್ ಕೀಪರ್ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು. ಸೂರ್ಯಕುಮಾರ್ ಎರಡು ಎಸೆತಗಳಲ್ಲಿ ಆರು ರನ್ ಗಳಿಸಿದರು.
ಅಮೋಘ ಫಾರ್ಮ್ನಲ್ಲಿದ್ದ ವಿರಾಟ್ ಕೊಹ್ಲಿ ಅವರನ್ನು ಬೌಲ್ಡ್ ಮಾಡುವ ಮೂಲಕ ವೇಗಿ ತಂಜಿಮ್ ಹಸನ್ ಸಾಕಿಬ್ ಭಾರತಕ್ಕೆ ಎರಡನೇ ಹೊಡೆತ ನೀಡಿದರು. 28 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ ಮೂರು ಸಿಕ್ಸರ್‌ಗಳ ನೆರವಿನಿಂದ 37 ರನ್ ಗಳಿಸಿ ಕೊಹ್ಲಿ ಔಟಾದರು.
ರೋಹಿತ್ ಶರ್ಮಾ ಬೇಗನೆ ವಿಕೆಟ್ ಕಳೆದುಕೊಂಡಿರಬಹುದು, ಆದರೆ ರಿಷಬ್ ಪಂತ್ ಜೊತೆಗೆ ವಿರಾಟ್ ಕೊಹ್ಲಿ ಭಾರತದ ಇನ್ನಿಂಗ್ಸ್ ಅನ್ನು ನಿಭಾಯಿಸಿದರು. ಹೀಗಾಗಿ ಭಾರತ ಪವರ್‌ಪ್ಲೇ ಅಂತ್ಯದ ನಂತರ ಒಂದು ವಿಕೆಟ್‌ಗೆ 53 ರನ್ ಗಳಿಸಿದೆ.
ಟೀಂ ಇಂಡಿಯಾದ ಮೊದಲ ವಿಕೆಟ್ ಪತನಗೊಂಡಿದ್ದು, ನಾಯಕ ರೋಹಿತ್ ಶರ್ಮಾ (23 ರನ್, 11 ಎಸೆತ) ಔಟಾಗಿದ್ದಾರೆ. ರೋಹಿತ್ ನಾಲ್ಕನೇ ಓವರ್‌ನಲ್ಲಿ ಶಕೀಬ್ ಅಲ್ ಹಸನ್ ಎಸೆತದಲ್ಲಿ ಸಿಕ್ಸರ್ ಮತ್ತು ಬೌಂಡರಿಗಳನ್ನು ಬಾರಿಸಿದರು ಆದರೆ ಮತ್ತೊಂದು ಸಿಕ್ಸರ್ ಹೊಡೆಯಲು ಪ್ರಯತ್ನಿಸುತ್ತಿರುವಾಗ ಔಟಾದರು.
ಭಾರತಕ್ಕೆ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡಿದರು. ಮೂರು ಓವರ್‌ಗಳ ಅಂತ್ಯಕ್ಕೆ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೆ 29 ರನ್ ಗಳಿಸಿದೆ.
ಬಾಂಗ್ಲಾದೇಶ ವಿರುದ್ಧ ಭಾರತದ ಇನ್ನಿಂಗ್ಸ್ ಆರಂಭವಾಗಿದ್ದು, ರೋಹಿತ್ ಶರ್ಮಾ ಜೊತೆಗೆ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಆರಂಭಿಸಿದ್ದಾರೆ.
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.
ತಂಝಿದ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತೌಹೀದ್ ಹೃದೋಯ್, ಶಕೀಬ್ ಅಲ್ ಹಸನ್, ಮಹಮ್ಮದುಲ್ಲಾ, ಜಾಕಿರ್ ಅಲಿ, ರಶೀದ್ ಹೊಸೈನ್, ಮೆಹದಿ ಹಸನ್, ತಂಝೀಮ್ ಹಸನ್ ಶಕೀಬ್, ಮುಸ್ತಫಿಜುರ್ ರಹಮಾನ್.
ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ಶಾಂಟೋ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಭಾರತ ಬ್ಯಾಟಿಂಗ್ ಮಾಡಲಿದೆ.
ಭಾರತ ಮತ್ತು ಬಾಂಗ್ಲಾದೇಶ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ 13 ಬಾರಿ ಮುಖಾಮುಖಿಯಾಗಿದ್ದು, ಬಾಂಗ್ಲಾದೇಶ ಕೇವಲ ಒಂದು ಬಾರಿ ಮಾತ್ರ ಗೆದ್ದಿದೆ. ಅಂದರೆ ಟೀಂ ಇಂಡಿಯಾ 12 ಬಾರಿ ನೆರೆಯ ತಂಡವನ್ನು ಸೋಲಿಸಿದೆ. ಇನ್ನು 14ನೇ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಭಾರತ ಮತ್ತು ಬಾಂಗ್ಲಾದೇಶ 5ನೇ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ಆಡಿದ ನಾಲ್ಕು ಪಂದ್ಯಗಳಲ್ಲಿ ಟೀಂ ಇಂಡಿಯಾ ಎಲ್ಲವನ್ನೂ ಗೆದ್ದಿದೆ.
Published On - 6:16 pm, Sat, 22 June 24