AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs IND: ಟೀಮ್ ಇಂಡಿಯಾ ಮುಂದೆ ಮುಂಡಿಯೂರಿದ ಆಂಗ್ಲರು..!

India vs England 1st ODI; ಜಸ್​ಪ್ರೀತ್ ಬುಮ್ರಾ ದಾಳಿಗೆ ತತ್ತರಿಸಿದ ಇಂಗ್ಲೆಂಡ್​ 25.2 ಓವರ್​ಗಳಲ್ಲಿ ಕೇವಲ 110 ರನ್​ಗಳಿಗೆ ಸರ್ವಪತನ ಕಂಡಿತು. ಟೀಮ್ ಇಂಡಿಯಾ ಪರ ಬುಮ್ರಾ ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಶಮಿ 3 ವಿಕೆಟ್ ಪಡೆದರು.

ENG vs IND: ಟೀಮ್ ಇಂಡಿಯಾ ಮುಂದೆ ಮುಂಡಿಯೂರಿದ ಆಂಗ್ಲರು..!
Team India
TV9 Web
| Edited By: |

Updated on:Jul 12, 2022 | 9:44 PM

Share

ಕಿಯಾ ಓವಲ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ (England vs India Odi) ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬೌಲಿಂಗ್ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ವೇಗಿಗಳು ಇಂಗ್ಲೆಂಡ್​ಗೆ ಆರಂಭಿಕ ಆಘಾತ ನೀಡಿದ್ದರು. ಪರಿಣಾಮ ಕೇವಲ 26 ರನ್​ಗಳಿಸುವಷ್ಟರಲ್ಲಿ ಇಂಗ್ಲೆಂಡ್ ತಂಡದ 5 ಪ್ರಮುಖ ಬ್ಯಾಟ್ಸ್​​ಮನ್​ಗಳು ಪೆವಿಲಿಯನ್​ಗೆ ಮರಳಿದ್ದರು.

ಇದಾಗ್ಯೂ ನಾಯಕ ಜೋಸ್ ಬಟ್ಲರ್ 30 ರನ್​ಗಳಿಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದರು. ಆದರೆ ಮೊಹಮ್ಮದ್ ಶಮಿ ಎಸೆತಕ್ಕೆ ಭರ್ಜರಿ ಉತ್ತರ ನೀಡಲು ಹೋದ ಬಟ್ಲರ್ ಕೂಡ ಔಟಾದರು. ಒಂದು ಹಂತದಲ್ಲಿ ಕೇವಲ 68 ರನ್​ಗಳಿಗೆ 8 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಡೇವಿಡ್ ವಿಲ್ಲಿ ಆಸರೆಯಾಗಿ ನಿಂತರು. ಅದರಂತೆ ವಿಲ್ಲಿ 21 ರನ್​ಗಳ ಉಪಯುಕ್ತ ಕಾಣಿಕೆ ನೀಡಿದರು. ಪರಿಣಾಮ ಇಂಗ್ಲೆಂಡ್ ತಂಡದ ಮೊತ್ತ ನೂರರ ಗಡಿದಾಟಿತು.

ಇದಾಗ್ಯೂ ಟೀಮ್ ಇಂಡಿಯಾ ಬೌಲರ್​ಗಳ ಮುಂದೆ 26 ಓವರ್​ಗಳನ್ನು ದಾಟಲು ಆಂಗ್ಲ ಆಟಗಾರರಿಗೆ ಸಾಧ್ಯವಾಗಿಲ್ಲ. ಅಂತಿಮವಾಗಿ ಜಸ್​ಪ್ರೀತ್ ಬುಮ್ರಾ ದಾಳಿಗೆ ತತ್ತರಿಸಿದ ಇಂಗ್ಲೆಂಡ್​ 25.2 ಓವರ್​ಗಳಲ್ಲಿ ಕೇವಲ 110 ರನ್​ಗಳಿಗೆ ಸರ್ವಪತನ ಕಂಡಿತು. ಟೀಮ್ ಇಂಡಿಯಾ ಪರ ಬುಮ್ರಾ ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಶಮಿ 3 ವಿಕೆಟ್ ಪಡೆದರು.

ಇದನ್ನೂ ಓದಿ
Image
Virat Kohli: ವಿರಾಟ್ ಕೊಹ್ಲಿಯ ಫಾರ್ಮ್​ ಬಗ್ಗೆ ಟೀಕೆ ಮಾಡುವ ಮುನ್ನ ಈ ಅಂಕಿ ಅಂಶಗಳನ್ನೊಮ್ಮೆ ನೋಡಿ..!
Image
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Image
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

ಇನ್ನು ಇಂಗ್ಲೆಂಡ್ ನೀಡಿದ 111 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಭರ್ಜರಿ ಆರಂಭ ಒದಗಿಸಿದ್ದರು. ಅತ್ಯುತ್ತಮ ಜೊತೆಯಾಟವಾಡಿದ ಈ ಜೋಡಿ ಎಲ್ಲಾ ಹಂತದಲ್ಲೂ ಇಂಗ್ಲೆಂಡ್ ಬೌಲರ್​ಗಳ ವಿರುದ್ದ ಮೇಲುಗೈ ಸಾಧಿಸಿದರು. ಅದರಂತೆ ರೋಹಿತ್ ಶರ್ಮಾ ಕೇವಲ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಮತ್ತೊಂದೆಡೆ ಶಿಖರ್ ಧವನ್ ಉತ್ತಮ ಸಾಥ್ ನೀಡಿದರು.

ಅಂತಿಮವಾಗಿ ರೋಹಿತ್ ಶರ್ಜಾ ಅಜೇಯ 76 (58) ರನ್​ ಬಾರಿಸಿದರೆ, ಶಿಖರ್ ಧವನ್ ಅಜೇಯ 31 (54) ರನ್ ಕಲೆಹಾಕಿದರು. ಪರಿಣಾಮ 18.4 ಓವರ್​ಗಳಲ್ಲಿ ಟೀಮ್ ಇಂಡಿಯಾ ವಿಕೆಟ್ ನಷ್ಟವಿಲ್ಲದೆ 114 ರನ್​ ಬಾರಿಸುವ ಮೂಲಕ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಪಡೆದಿದೆ. ಇನ್ನು ಈ ಪಂದ್ಯದಲ್ಲಿ 7.2 ಓವರ್​ಗಳಲ್ಲಿ ಕೇವಲ 19 ರನ್​ ನೀಡಿ 6 ವಿಕೆಟ್ ಉರುಳಿಸಿ ಮಿಂಚಿದ್ದ ಜಸ್​ಪ್ರೀತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Published On - 9:44 pm, Tue, 12 July 22

Follow Us
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ