India vs England: ಮೊದಲ ಏಕದಿನ ಪಂದ್ಯ ಆರಂಭವಾಗುವ ಸಮಯ, ದಿನಾಂಕ, ನೇರ ಪ್ರಸಾರ ಯಾವ ಚಾನೆಲ್​ನಲ್ಲಿ? ಇಲ್ಲಿದೆ ಮಾಹಿತಿ

India vs England: ಟೀಂ ಇಂಡಿಯಾ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಯುವ ಆಟಗಾರರಿಂದ ತುಂಬಿ ಹೋಗಿದೆ. ಹೀಗಾಗಿ ಅನುಭವಿ ಆಟಗಾರರು ತಮ್ಮ ಸ್ಥಾನವನ್ನು ಕಳೆದುಕೊಳ್ಳುವ ಭಯದಲ್ಲಿದ್ದಾರೆ.

India vs England: ಮೊದಲ ಏಕದಿನ ಪಂದ್ಯ ಆರಂಭವಾಗುವ ಸಮಯ, ದಿನಾಂಕ, ನೇರ ಪ್ರಸಾರ ಯಾವ ಚಾನೆಲ್​ನಲ್ಲಿ? ಇಲ್ಲಿದೆ ಮಾಹಿತಿ
ಇಂಡಿಯಾ- ಇಂಗ್ಲೆಂಡ್ ಏಕದಿನ ಸರಣಿ
Follow us
ಪೃಥ್ವಿಶಂಕರ
|

Updated on: Mar 22, 2021 | 4:24 PM

ಮೊದಲ ಪಂದ್ಯವನ್ನು ಕಳೆದುಕೊಂಡಿದ್ದರೂ ಭಾರತ ಟೆಸ್ಟ್ ಸರಣಿಯನ್ನು ಆರಾಮವಾಗಿ ಗೆದ್ದುಕೊಂಡಿತು. ಐದು ಪಂದ್ಯಗಳ ಟ್ವೆಂಟಿ -20 ಇಂಟರ್ನ್ಯಾಷನಲ್ (ಟಿ 20 ಐ) ಸರಣಿಯನ್ನು ಗೆಲ್ಲುವ ಮೂಲಕ ತಮ್ಮ ಗೆಲುವಿನ ಸರಣಿಯನ್ನು ಮುಂದುವರೆಸಿದೆ. ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತರು ಸಹ ಧೃತಿಗೆಡದ ಟೀಂ ಇಂಡಿಯಾ, ಇಂಗ್ಲೆಂಡ್​ ಎದುರು 3 ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿತು. ಈ ಮೂಲಕ ಟಿ20 ರ್ಯಾಂಕಿಂಗ್​ನಲ್ಲಿ ಮೊದಲ ಸ್ಥಾನದಲ್ಲಿರುವ ಇಂಗ್ಲೆಂಡ್​ ತಂಡವನ್ನು ಹೀನಾಯವಾಗಿ ಸೋಲೊಪ್ಪಿಕೊಳ್ಳುವಂತೆ ಮಾಡಿತು. ಈಗ ಏಕದಿನ ಸರಣಿಗೆ ಉಭಯ ತಂಡಗಳು ಬಾರಿ ತಯಾರಿ ನಡೆಸಿಕೊಳ್ಳುತ್ತಿವೆ.

ಯುವ ಆಟಗಾರರಿಂದ ತುಂಬಿ ಹೋಗಿದೆ ಮಂಗಳವಾರದಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಸರಣಿಯಲ್ಲಿ ಆತಿಥೇಯರು ಇಂಗ್ಲೆಂಡ್ ವಿರುದ್ಧ ಸೆಣಸಾಡಲಿದ್ದಾರೆ. ಟೀಂ ಇಂಡಿಯಾ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಯುವ ಆಟಗಾರರಿಂದ ತುಂಬಿ ಹೋಗಿದೆ. ಹೀಗಾಗಿ ಅನುಭವಿ ಆಟಗಾರರು ತಮ್ಮ ಸ್ಥಾನವನ್ನು ಕಳೆದುಕೊಳ್ಳುವ ಭಯದಲ್ಲಿದ್ದಾರೆ. ಈಗಾಗಲೇ ಟಿ20 ಕ್ರಿಕೆಟ್​ನಲ್ಲಿ ಧವನ್ ಅವರ ಸ್ಥಾನವನ್ನು ಕಿಶಾನ್​ ಕಿತ್ತುಕೊಂಡಾಗಿದೆ. ಆದರಿಂದ ಏಕದಿನ ಸರಣಿಯಲ್ಲಿ ಧವನ್ ತಮ್ಮ ಬ್ಯಾಟ್​ನಿಂದ ಕಮಾಲ್​ ಮಾಡಲೇಬೇಕಿದೆ.

ಆರಂಭಿಕ ಪಂದ್ಯದಲ್ಲಿ ಉಭಯ ತಂಡಗಳು ಯಾವ ರೀತಿಯ ತಂಡದೊಂದಿಗೆ ಮೈದಾನಕ್ಕಿಳಿಯಲಿದೆ ಎಂಬುದನ್ನು ನೋಡಲು ಆಸಕ್ತಿದಾಯಕವಾಗಿದೆ. ಈಗಾಗಲೇ ಇಂಗ್ಲೆಂಡ್‌ ತಂಡದಲ್ಲಿ, ಜೋಫ್ರಾ ಆರ್ಚರ್ ಅಲಭ್ಯತೆ ದೊಡ್ಡ ಹೊಡೆತ ನೀಡಿದೆ. ಮೊಣಕೈ ಗಾಯದಿಂದಾಗಿ ಎಕ್ಸ್‌ಪ್ರೆಸ್ ವೇಗಿ ಏಕದಿನ ಸರಣಿಯ ಸಂಪೂರ್ಣ ಪಂದ್ಯವನ್ನು ಮಿಸ್​ ಮಾಡಿಕೊಳ್ಳಲ್ಲಿದ್ದಾರೆ. ಜೊತೆಗೆ ಟೆಸ್ಟ್ ನಾಯಕ ಜೋ ರೂಟ್ ಅವರನ್ನು ಸಹ 14 ಸದಸ್ಯರ ಇಂಗ್ಲೆಂಡ್ ತಂಡದಿಂದ ಹೊರಗಿಡಲಾಗಿದೆ.

ಭಾರತ -ಇಂಗ್ಲೆಂಡ್ ಮೊದಲನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ? ಮೊದಲನೇ ಏಕದಿನ ಪಂದ್ಯ ಮಾರ್ಚ್ 23, ಮಂಗಳವಾರ ನಡೆಯಲಿದೆ.

ಮೊದಲನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ? ಮೊದಲನೇ ಏಕದಿನ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪಂದ್ಯ ಆರಂಭವಾಗುವ ಸಮಯ? ಮೊದಲನೇ ಏಕದಿನ ಪಂದ್ಯ ಮಧ್ಯಾಹ್ನ 1: 30 ಕ್ಕೆ ಪ್ರಾರಂಭವಾಗಲಿದೆ.

ಮೊದಲನೇ ಏಕದಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ನೋಡಬಹುದು? ಇಂಡಿಯಾ ಮತ್ತು ಇಂಗ್ಲೆಂಡ್ ಮೊದಲನೇ ಏಕದಿನ ಪಂದ್ಯದ ನೇರ ಪ್ರಸಾರವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.

ಯಾವ ಟಿವಿ ಚಾನೆಲ್‌ಗಳು ಪ್ರಸಾರ ಮಾಡುತ್ತವೆ? ಇಂಡಿಯಾ ವರ್ಸಸ್ ಇಂಗ್ಲೆಂಡ್ ಮೊದಲನೇ ಏಕದಿನ ಪಂದ್ಯವನ್ನು ಸ್ಟಾರ್​ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದು.

ಇದನ್ನೂ ಓದಿ:India vs England: ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗ ಹೀಗಿರಬಹುದು?

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ