IND vs ENG 1st ODI Match Live Streaming: ಟಿ20 ಗೆದ್ದ ಭಾರತಕ್ಕೀಗ ಏಕದಿನ ಸರಣಿ ಮೇಲೆ ಕಣ್ಣು; ಪಂದ್ಯ ಯಾವಾಗ ಆರಂಭ?
IND vs ENG 1st ODI Match Live Streaming: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ಗೆದ್ದುಕೊಂಡಿದ್ದು, ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯ ಮೇಲೆ ಕಣ್ಣಿಟ್ಟಿದೆ.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ (T20 series)ಯನ್ನು ಭಾರತ ಗೆದ್ದುಕೊಂಡಿದ್ದು, ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯ ಮೇಲೆ ಕಣ್ಣಿಟ್ಟಿದೆ. 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮಂಗಳವಾರ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿದೆ. ಟೀಂ ಇಂಡಿಯಾ ತನ್ನ ಆಕ್ರಮಣಕಾರಿ ಮನೋಭಾವವನ್ನು ಕಾಪಾಡಿಕೊಳ್ಳಬೇಕು ಎಂದು ನಾಯಕ ರೋಹಿತ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ. ಶಿಖರ್ ಧವನ್ (Shikhar Dhawan)ಗೆ ಈ ಸರಣಿಯು ತುಂಬಾ ಮಹತ್ವದ್ದಾಗಿದೆ, ಏಕೆಂದರೆ ಅವರು ಪ್ರಸ್ತುತ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಈಗ ವೆಸ್ಟ್ ಇಂಡೀಸ್ ಪ್ರವಾಸದ ತಂಡದ ನಾಯಕರಾಗಿಯೂ ಸಹ ಮಾಡಲಾಗಿದೆ.
ರನ್ ಗಳಿಸಲು ವಿರಾಟ್ ಕೊಹ್ಲಿ ಮೇಲೆ ಒತ್ತಡ
ದೀರ್ಘ ಕಾಲದಿಂದ ಕಳಪೆ ಫಾರ್ಮ್‌ನೊಂದಿಗೆ ಹೋರಾಡುತ್ತಿರುವ ವಿರಾಟ್ ಕೊಹ್ಲಿ ಮೇಲೆ ಮತ್ತೊಮ್ಮೆ ಎಲ್ಲರ ಕಣ್ಣು ನೆಟ್ಟಿದೆ. ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲೂ ಅವರು ಹೀನಾಯ ಪ್ರದರ್ಶನ ತೋರಿದ್ದರು. ಅವರ ಬ್ಯಾಟ್ ಸರಣಿಯಲ್ಲಿ ಸದ್ದು ಮಾಡಲಿಲ್ಲ, ಜೊತೆಗೆ ಕೊಹ್ಲಿ ಫೀಲ್ಡಿಂಗ್ ಬಗ್ಗೆಯೂ ಟೀಕೆಗಳು ಕೇಳಿಬಂದವು. ಈಗ ಅವರ ಮೇಲೆ ರನ್ ಗಳಿಸುವ ಒತ್ತಡ ಹೆಚ್ಚಿದೆ. ODIಗಳಲ್ಲಿ, ಕೊಹ್ಲಿ ತಮ್ಮ ಫಾರ್ಮ್ ಅನ್ನು ಮರಳಿ ಪಡೆಯಲು ಸ್ವಲ್ಪ ಹೆಚ್ಚು ಸಮಯವನ್ನು ಹೊಂದಿರುವುದು ಪ್ಲಸ್ ಪಾಯಿಂಟ್ ಆಗಲಿದೆ. ಅದೇ ಸಮಯದಲ್ಲಿ, ಇದು ಹಾಲಿ ನಾಯಕನಾಗಿ ಜೋಸ್ ಬಟ್ಲರ್ ಅವರ ಮೊದಲ ಏಕದಿನ ಸರಣಿಯಾಗಿದೆ. ಇಯಾನ್ ಮಾರ್ಗನ್ ನಿವೃತ್ತಿಯ ನಂತರ, ಅವರಿಗೆ ಇಂಗ್ಲಿಷ್ ತಂಡದ ಜವಾಬ್ದಾರಿಯನ್ನು ನೀಡಲಾಗಿದೆ. ಹೀಗಾಗಿ ಈ ಸರಣಿ ಬಟ್ಲರ್ಗೂ ತುಂಬಾ ವಿಶೇಷವಾದುದ್ದಾಗಿದೆ.
ಪಂದ್ಯದ ಬಗ್ಗೆ ಪೂರ್ಣ ವಿವರ ಹೀಗಿದೆ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಓವಲ್‌ನಲ್ಲಿ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಜುಲೈ 12 ರಂದು ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ODI ಪಂದ್ಯ ಯಾವ ಸಮಯಕ್ಕೆ ಆರಂಭವಾಗಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ODI ಪಂದ್ಯವು 5:30 PM IST ಕ್ಕೆ ಪ್ರಾರಂಭವಾಗಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 1 ನೇ ODI ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದ ನೇರ ಪ್ರಸಾರವನ್ನು ಸೋನಿ ನೆಟ್‌ವರ್ಕ್‌ನ ಚಾನೆಲ್‌ನಲ್ಲಿ ನೋಡಬಹುದು. ಜೊತೆಗೆ ಹಿಂದಿಯಲ್ಲಿ ಸೋನಿ ಟೆನ್ 3 ನಲ್ಲಿ ವೀಕ್ಷಿಸಬಹುದು.
Published On - 5:11 pm, Mon, 11 July 22