India vs England 1st T20: ಭಾರತ-ಇಂಗ್ಲೆಂಡ್ ಟಿ20 ಪಂದ್ಯವನ್ನು ಯಾವ ಚಾನೆಲ್‌ನಲ್ಲಿ ವೀಕ್ಷಿಸಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ
India vs England 1st T20 Match Live Streaming: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ20 ಜುಲೈ 7 ರಂದು ಸೌತಾಂಪ್ಟನ್‌ನಲ್ಲಿ ನಡೆಯಲಿದೆ. ಇದರ ನಂತರ ಎರಡೂ ತಂಡಗಳು ಬರ್ಮಿಂಗ್‌ಹ್ಯಾಮ್‌ಗೆ ತೆರಳಲಿದ್ದು, ಅಲ್ಲಿ ಜುಲೈ 9 ರಂದು ಎರಡನೇ ಟಿ20 ಆಡಲಿದೆ.
ಎಡ್ಜ್‌ಬಾಸ್ಟನ್ ಟೆಸ್ಟ್ ಸೋಲಿನ ಬಳಿಕ ಇದೀಗ ಟೀಮ್ ಇಂಡಿಯಾ ಇಂಗ್ಲೆಂಡ್ (India vs England) ವಿರುದ್ದದ ಟಿ20 ಸರಣಿಗೆ ಸಜ್ಜಾಗಿದೆ. ಗುರುವಾರದಿಂದ (ಜುಲೈ 7) ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ ಕೆಲ ಆಟಗಾರರು ಅಲಭ್ಯರಾಗಲಿದ್ದಾರೆ. ಇನ್ನು ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ. ಹಾಗೆಯೇ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಕಾಣಿಸಿಕೊಳ್ಳಲಿದ್ದಾರೆ. ಲಕ್ಷ್ಮಣ್ ಸಾರಥ್ಯದಲ್ಲಿ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ದ ಉತ್ತಮ ಪ್ರದರ್ಶನ ನೀಡಿದೆ. ಹೆಚ್ಚು ಕಡಿಮೆ ಅದೇ ಆಟಗಾರರು ಈಗ ಹಿಟ್ಮ್ಯಾನ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದಿಂದ ತೀವ್ರ ಪೈಪೋಟಿಯನ್ನು ನಿರೀಕ್ಷಿಸಬಹುದು. ಈ ಪಂದ್ಯ ಎಲ್ಲಿ, ಯಾವಾಗ ನಡೆಯಲಿದೆ? ಹೇಗೆ ವೀಕ್ಷಿಸಬಹುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ20 ಜುಲೈ 7 ರಂದು ಸೌತಾಂಪ್ಟನ್‌ನಲ್ಲಿ ನಡೆಯಲಿದೆ. ಇದರ ನಂತರ ಎರಡೂ ತಂಡಗಳು ಬರ್ಮಿಂಗ್‌ಹ್ಯಾಮ್‌ಗೆ ತೆರಳಲಿದ್ದು, ಅಲ್ಲಿ ಜುಲೈ 9 ರಂದು ಎರಡನೇ ಟಿ20 ಆಡಲಿದೆ. ಮೂರನೇ ಟಿ20 ಪಂದ್ಯ ಜುಲೈ 10 ರಂದು ನಾಟಿಂಗ್‌ಹ್ಯಾಮ್‌ನಲ್ಲಿ ನಡೆಯಲಿದೆ. 3 ಟಿ20 ಪಂದ್ಯಗಳ ಈ ಸರಣಿಯ ಬಳಿಕ ಭಾರತ ತಂಡ ಇಂಗ್ಲೆಂಡ್‌ನಲ್ಲಿ 3 ಏಕದಿನ ಪಂದ್ಯಗಳ ಸರಣಿಯನ್ನೂ ಆಡಲಿದೆ. ಇಂಗ್ಲೆಂಡ್ ವಿರುದ್ಧದ ಈ ಟಿ20 ಸರಣಿಯು ಟಿ20 ವಿಶ್ವಕಪ್‌ಗೆ ಸಿದ್ಧತೆ ಮತ್ತು ಅದಕ್ಕೂ ಮುನ್ನ ಆಟಗಾರರ ಪ್ರದರ್ಶನವನ್ನು ಅಳೆಯಲು ಬಹಳ ಮಹತ್ವದ್ದಾಗಿದೆ.
- ಮೊದಲ ಟಿ20 ಪಂದ್ಯ ಯಾವಾಗ? ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಜುಲೈ 7 ರಂದು ಸೌತಂಪ್ಟನ್ನ ಏಜಿಯಾಸ್ ಬೌಲ್ ಸ್ಟೇಡಿಯಂನಲ್ಲಿ ನಡೆಯಲಿದೆ.
- ಎಷ್ಟು ಗಂಟೆಗೆ ಪಂದ್ಯ ಶುರು? ಮೊದಲ ಟಿ20 ಪಂದ್ಯವು ಭಾರತೀಯ ಕಾಲಮಾನ ರಾತ್ರಿ 10:30 ಕ್ಕೆ ಆರಂಭವಾಗಲಿದೆ.
- ನೇರ ಪ್ರಸಾರವನ್ನು ನಾನು ಎಲ್ಲಿ ವೀಕ್ಷಿಸಬಹುದು? ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದ ನೇರ ಪ್ರಸಾರವನ್ನು ಸೋನಿ ನೆಟ್‌ವರ್ಕ್‌ನ ಚಾನೆಲ್‌ನಲ್ಲಿ ಇರಲಿದೆ. ಅದರಂತೆ ಸೋನಿ ಸಿಕ್ಸ್, ಸೋನಿ ಟೆನ್ ಚಾನೆಲ್ಗಳಲ್ಲಿ ವೀಕ್ಷಿಸಬಹುದು.
- ಯಾವ ಆ್ಯಪ್ನಲ್ಲಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು? ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು.
ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳಾಪಟ್ಟಿ ಹೀಗಿದೆ:
ಟಿ20 ಸರಣಿ ವೇಳಾಪಟ್ಟಿ:
ಜುಲೈ 7: ಮೊದಲ ಟಿ20 ಪಂದ್ಯ (ಏಜಿಯಾಸ್ ಬೌಲ್) ಜುಲೈ 9: 2ನೇ ಟಿ20 ಪಂದ್ಯ (ಎಡ್ಜ್‌ಬಾಸ್ಟನ್) ಜುಲೈ 10: 3ನೇ ಟಿ20 ಪಂದ್ಯ (ಟ್ರೆಂಟ್ ಬ್ರಿಡ್ಜ್)
ಏಕದಿನ ಸರಣಿ ವೇಳಾಪಟ್ಟಿ:
ಜುಲೈ 12- ಮೊದಲ ಏಕದಿನ ಪಂದ್ಯ (ಕಿಯಾ ಓವಲ್) ಜುಲೈ 14- 2ನೇ ಏಕದಿನ ಪಂದ್ಯ (ಲಾರ್ಡ್ಸ್) ಜುಲೈ 17- 3ನೇ ಏಕದಿನ ಪಂದ್ಯ (ಮ್ಯಾಂಚೆಸ್ಟರ್)
ಈ ಸರಣಿಗಾಗಿ ಟೀಮ್ ಇಂಡಿಯಾ ಹೀಗಿದೆ:
- ಮೊದಲ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್
- ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್
- ಏಕದಿನ ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ದ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.