AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 1st T20 Playing 11: ಟಾಸ್ ಗೆದ್ದ ಭಾರತ ಬ್ಯಾಟಿಂಗ್; ಉಭಯ ತಂಡಗಳ ಪ್ಲೇಯಿಂಗ್ XI ಹೀಗಿದೆ

India vs England 1st T20 Playing 11: ಸೌತಾಂಪ್ಟನ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿ ಆರಂಭವಾಗಿದೆ. ತಂಡಕ್ಕೆ ವಾಪಸಾಗಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

IND vs ENG 1st T20 Playing 11: ಟಾಸ್ ಗೆದ್ದ ಭಾರತ ಬ್ಯಾಟಿಂಗ್; ಉಭಯ ತಂಡಗಳ ಪ್ಲೇಯಿಂಗ್ XI ಹೀಗಿದೆ
ಟೀಂ ಇಂಡಿಯಾ
TV9 Web
| Updated By: ಪೃಥ್ವಿಶಂಕರ|

Updated on:Jul 07, 2022 | 10:33 PM

Share

2022 ರ T20 ವಿಶ್ವಕಪ್ (T20 World Cup) ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಪ್ರತಿ ತಂಡವೂ ಈ ವಿಶ್ವಕಪ್‌ಗಾಗಿ ತಯಾರಿ ನಡೆಸುತ್ತಿದೆ ಮತ್ತು ಟೀಮ್ ಇಂಡಿಯಾ (Team India) ಕೂಡ ಹಿಂದೆ ಬಿದ್ದಿಲ್ಲ. ಕಳೆದ ಕೆಲವು ವಾರಗಳಲ್ಲಿ 6 ಟಿ20 ಪಂದ್ಯಗಳನ್ನು ಆಡಿರುವ ಭಾರತ ತಂಡ ಇದೀಗ ತನ್ನ ಪ್ರಮುಖ ಸವಾಲಿಗೆ ಸಿದ್ಧವಾಗಿದೆ. ಸೌತಾಂಪ್ಟನ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿ ಆರಂಭವಾಗಿದೆ. ತಂಡಕ್ಕೆ ವಾಪಸಾಗಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಭಾರತ ತಂಡವು ಕೆಲವು ಹಿರಿಯರಿಲ್ಲದೆ ಈ ಪಂದ್ಯವನ್ನು ಆಡುತ್ತಿದೆ. ಈ ಪಂದ್ಯದ ಮೂಲಕ ತಮ್ಮ ಅಂತರಾಷ್ಟ್ರೀಯ ಚೊಚ್ಚಲ ಪಂದ್ಯವನ್ನಾಡಲಿರುವ ಯುವ ವೇಗದ ಬೌಲರ್ ಅರ್ಶ್‌ದೀಪ್ ಸಿಂಗ್‌ಗೆ ಭಾಗ್ಯದ ಬಾಗಿಲು ತೆರೆದಿದೆ.

ಆದರೆ ಹಿಟ್ಟರ್​ಗಳೇ ತುಂಬಿರುವ ಇಂಗ್ಲೆಂಡ್ ತಂಡವನ್ನು ಈ ಸರಣಿಯಲ್ಲಿ ಸೋಲಿಸುವುದು ಭಾರತಕ್ಕೆ ಸವಾಲಾಗಿದೆ. ಮಾರ್ಗನ್ ನಿವೃತ್ತಿಯ ಹಿನ್ನೆಲೆಯಲ್ಲಿ ಇಂಗ್ಲೆಂಡ್ ನಾಯಕನಾಗಿ ಜೋಸ್ ಬಟ್ಲರ್ ಅವರ ಇನ್ನಿಂಗ್ಸ್ ಈ ಸರಣಿಯೊಂದಿಗೆ ಆರಂಭವಾಗಲಿದೆ. ಭಾರತದ ಬೌಲರ್ ಅರ್ಷದೀಪ್ ಸಿಂಗ್ ಇಂದು ಪದಾರ್ಪಣೆ ಮಾಡಲಿದ್ದಾರೆ. ರೋಹಿತ್ ಶರ್ಮಾ ಈ ಯುವ ಆಟಗಾರನಿಗೆ ಚೊಚ್ಚಲ ಕ್ಯಾಪ್ ನೀಡಿದರು. ಭಾರತದ ನಾಯಕತ್ವ ರೋಹಿತ್ ಶರ್ಮಾ ಕೈಯಲ್ಲಿದ್ದರೆ, ಇಂಗ್ಲೆಂಡ್ ನಾಯಕತ್ವ ಜೋಸ್ ಬಟ್ಲರ್ ಕೈಯಲ್ಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಟಿ20 ಸರಣಿ ಇಂದಿನಿಂದ ಆರಂಭವಾಗಲಿದೆ. ಈ ಪಂದ್ಯದಲ್ಲಿ ಎಲ್ಲಾ ಟೆಸ್ಟ್ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ರೋಹಿತ್ ಶರ್ಮಾ ಜೊತೆಗೆ ಐರ್ಲೆಂಡ್ ವಿರುದ್ಧದ ಸರಣಿಯ ಭಾಗವಾಗಿದ್ದ ಆಟಗಾರರನ್ನು ಕಣಕ್ಕಿಳಿಸಿದೆ. ಈ ಸರಣಿಯಲ್ಲಿ ಭಾರತ ಎಡ್ಜ್‌ಬಾಸ್ಟನ್ ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಣಕ್ಕೆ ಇಳಿಯಲಿದೆ.

ಉಭಯ ತಂಡಗಳ ಇಂದಿನ ಪ್ಲೇಯಿಂಗ್ XI

ಇದನ್ನೂ ಓದಿ
Image
ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ನಲ್ಲಿ ಟೀಂ ಇಂಡಿಯಾದ ಕಳಪೆ ಪ್ರದರ್ಶನ; ಕೋಚ್ ದ್ರಾವಿಡ್‌ಗೆ ಹೆಚ್ಚಿದ ಆತಂಕ
Image
IND vs ENG: ಇಂಗ್ಲೆಂಡ ತಂಡವನ್ನು ಕಾಡುತ್ತಿವೆ ಕ್ಯಾಪ್ಟನ್ ರೋಹಿತ್ ಶರ್ಮಾ ದಾಖಲೆಗಳು..!

ಭಾರತ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಮತ್ತು ಯುಜ್ವೇಂದ್ರ ಚಾಹಲ್.

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಜೇಸನ್ ರಾಯ್, ಡೇವಿಡ್ ಮಲನ್, ಲಿಯಾಮ್ ಲಿವಿಂಗ್ಸ್ಟನ್, ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ರೀಸ್ ಟೋಪ್ಲಿ, ಟಿಮಲ್ ಮಿಲ್ಸ್, ಮ್ಯಾಟ್ ಪಾರ್ಕಿನ್ಸನ್

Published On - 10:10 pm, Thu, 7 July 22