ಭಾರತದ ವಿರುದ್ಧ 4 ಟೆಸ್ಟ್, 5 T20, ಹಾಗೂ 3 ಏಕದಿನ ಪಂದ್ಯಗಳನ್ನಾಡಲು ಈಗಾಗಲೇ ಭಾರತಕ್ಕೆ ಆಗಮಿಸಿರುವ ಇಂಗ್ಲೆಂಡ್ ತಂಡ, ಮೊದಲ ಟೆಸ್ಟ್ಗಾಗಿ ಚೆನ್ನೈನ ಚೆಪಾಕ್ ಮೈದಾನದಲ್ಲಿ ಅಭ್ಯಾಸ ಮಾಡುತ್ತಿದೆ. ಜೊತೆಗೆ ಟೀಂ ಇಂಡಿಯಾ ಸಹ ಅಭ್ಯಾಸದಲ್ಲಿ ನಿರತವಾಗಿದ್ದು, ಸರಣಿಯನ್ನು ತಮ್ಮ ಕೈವಶ ಮಾಡಿಕೊಳ್ಳುವ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯುತ್ತಿದೆ. ಸರಣಿಯನ್ನು ಗೆಲ್ಲಲೇಬೇಕೆಂಬ ಉದ್ದೇಶದಿಂದ BCCI ಬಲಿಷ್ಠ ತಂಡವನ್ನು ಆಯ್ಕೆ ಮಾಡಿದೆ. ಫೆಬ್ರವರಿ 5 ರಿಂದ ಮೊದಲ ಟೆಸ್ಟ್ ಆರಂಭವಾಗಲಿದ್ದು, ಭಾರತದ ನೆಲದಲ್ಲಿ ಇಂಗ್ಲೆಂಡ್ ತಂಡ ಆಡುವ ಎಲ್ಲಾ ಮಾದರಿಯ ಕ್ರಿಕೆಟ್‌ನ ವೇಳಾಪಟ್ಟಿ, ದಿನಾಂಕ, ಹಾಗೂ ನಡೆಯುವ ಸ್ಥಳಗಳ ಮಾಹಿತಿ ಇಲ್ಲಿದೆ.
4 ಟೆಸ್ಟ್ ಪಂದ್ಯಗಳ ವಿವರ ಹೀಗಿದೆ..
– ಫೆಬ್ರವರಿ 5 ರಿಂದ ಆರಂಭವಾಗುವ ಮೊದಲ ಟೆಸ್ಟ್ ಪಂದ್ಯ, ಫೆಬ್ರವರಿ 9ಕ್ಕೆ ಮುಗಿಯಲಿದೆ. ಚೆನ್ನೈನ ಚಿದಂಬರಂ ಮೈದಾನದಲ್ಲಿ ಬೆಳಿಗ್ಗೆ 9.30 ಕ್ಕೆ ಪಂದ್ಯ ಆರಂಭವಾಗಲಿದೆ.
– ಫೆಬ್ರವರಿ 13 ರಿಂದ ಆರಂಭವಾಗುವ ಎರಡನೇ ಟೆಸ್ಟ್ ಪಂದ್ಯ, ಫೆಬ್ರವರಿ 17ಕ್ಕೆ ಮುಗಿಯಲಿದೆ. ಎರಡನೇ ಪಂದ್ಯವೂ ಸಹ ಚೆನ್ನೈನ ಚಿದಂಬರಂ ಮೈದಾನದಲ್ಲಿ ಬೆಳಿಗ್ಗೆ 9.30 ಕ್ಕೆ ಪಂದ್ಯ ಆರಂಭವಾಗಲಿದೆ.
– ಫೆಬ್ರವರಿ 24 ರಿಂದ ಆರಂಭವಾಗುವ ಮೂರನೇ ಟೆಸ್ಟ್ ಪಂದ್ಯ, ಫೆಬ್ರವರಿ 28ಕ್ಕೆ ಮುಗಿಯಲಿದೆ. ಅಹಮದಾಬಾದ್ನ ಸರ್ದಾರ್ ಪಟೇಲ್ ಮೈದಾನದಲ್ಲಿ ಮಧ್ಯಾಹ್ನ 2.30 ಕ್ಕೆ ಪಂದ್ಯ ಆರಂಭವಾಗಲಿದೆ.
– ಮಾರ್ಚ್ 04 ರಿಂದ ಆರಂಭವಾಗುವ ನಾಲ್ಕನೇ ಟೆಸ್ಟ್ ಪಂದ್ಯ, ಮಾರ್ಚ್ 08ಕ್ಕೆ ಮುಗಿಯಲಿದೆ. ಅಹಮದಾಬಾದ್ನ ಸರ್ದಾರ್ ಪಟೇಲ್ ಮೈದಾನದಲ್ಲಿ ಮಧ್ಯಾಹ್ನ 9.30 ಕ್ಕೆ ಪಂದ್ಯ ಆರಂಭವಾಗಲಿದೆ.
5 T20 ಪಂದ್ಯಗಳ ವೇಳಾಪಟ್ಟಿ..
-ಮಾರ್ಚ್ 12 ರಂದು ಮೊದಲ ಟಿ20 ಪಂದ್ಯ ನಡೆಯಲಿದ್ದು, ಅಹಮದಾಬಾದ್ನ ಮೊಟೆರಾ ಕ್ರೀಡಾಂಗಣದಲ್ಲಿ ಸಂಜೆ 7ಕ್ಕೆ ಪಂದ್ಯ ಆರಂಭವಾಗಲಿದೆ.
-ಮಾರ್ಚ್ 14 ರಂದು ಎರಡನೇ ಟಿ20 ಪಂದ್ಯ ನಡೆಯಲಿದ್ದು, ಅಹಮದಾಬಾದ್ನ ಮೊಟೆರಾ ಕ್ರೀಡಾಂಗಣದಲ್ಲಿ ಸಂಜೆ 7ಕ್ಕೆ ಪಂದ್ಯ ಆರಂಭವಾಗಲಿದೆ.
-ಮಾರ್ಚ್ 16 ರಂದು ಮೂರನೇ ಟಿ20 ಪಂದ್ಯ ನಡೆಯಲಿದ್ದು, ಅಹಮದಾಬಾದ್ನ ಮೊಟೆರಾ ಕ್ರೀಡಾಂಗಣದಲ್ಲಿ ಸಂಜೆ 7ಕ್ಕೆ ಪಂದ್ಯ ಆರಂಭವಾಗಲಿದೆ.
-ಮಾರ್ಚ್ 18 ರಂದು ನಾಲ್ಕನೇ ಟಿ20 ಪಂದ್ಯ ನಡೆಯಲಿದ್ದು, ಅಹಮದಾಬಾದ್ನ ಮೊಟೆರಾ ಕ್ರೀಡಾಂಗಣದಲ್ಲಿ ಸಂಜೆ 7ಕ್ಕೆ ಪಂದ್ಯ ಆರಂಭವಾಗಲಿದೆ.
-ಮಾರ್ಚ್ 20 ರಂದು ಐದನೇ ಟಿ20 ಪಂದ್ಯ ನಡೆಯಲಿದ್ದು, ಅಹಮದಾಬಾದ್ನ ಮೊಟೆರಾ ಕ್ರೀಡಾಂಗಣದಲ್ಲಿ ಸಂಜೆ 7ಕ್ಕೆ ಪಂದ್ಯ ಆರಂಭವಾಗಲಿದೆ.
3 ಏಕದಿನ ಪಂದ್ಯಗಳ ವೇಳಾಪಟ್ಟಿ..
-ಮಾರ್ಚ್ 23 ರಂದು ಮೊದಲ ಏಕದಿನ ಪಂದ್ಯ ನಡೆಯಲಿದ್ದು, ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಆಸೋಸಿಯೇಷನ್ ಮೈದಾನದಲ್ಲಿ ಮಧ್ಯಾಹ್ನ 1.30 ಕ್ಕೆ ಪಂದ್ಯ ಆರಂಭವಾಗಲಿದೆ.
-ಮಾರ್ಚ್ 26 ರಂದು ಮೊದಲ ಏಕದಿನ ಪಂದ್ಯ ನಡೆಯಲಿದ್ದು, ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಆಸೋಸಿಯೇಷನ್ ಮೈದಾನದಲ್ಲಿ ಮಧ್ಯಾಹ್ನ 1.30 ಕ್ಕೆ ಪಂದ್ಯ ಆರಂಭವಾಗಲಿದೆ.
-ಮಾರ್ಚ್ 28 ರಂದು ಮೊದಲ ಏಕದಿನ ಪಂದ್ಯ ನಡೆಯಲಿದ್ದು, ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಆಸೋಸಿಯೇಷನ್ ಮೈದಾನದಲ್ಲಿ ಮಧ್ಯಾಹ್ನ 1.30 ಕ್ಕೆ ಪಂದ್ಯ ಆರಂಭವಾಗಲಿದೆ.