AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG Test Series: ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಯಾವಾಗ?, ಎಷ್ಟು ಗಂಟೆಗೆ?, ಯಾವುದರಲ್ಲಿ ಲೈವ್?

India vs England 1st Test: ಭಾರತ ತನ್ನ ಮುಂದಿನ ಸರಣಿಯನ್ನು ಇಂಗ್ಲೆಂಡ್ ವಿರುದ್ಧ ಆಡಲಿದೆ. ಇದು ಐದು ಪಂದ್ಯಗಳ ಟೆಸ್ಟ್ ಸರಣಿ ಆಗಿದೆ. ಇಂಡೋ-ಇಂಗ್ಲೆಂಡ್ ಸರಣಿ ಯಾವಾಗ?, ಎಷ್ಟು ಗಂಟೆಗೆ ಆರಂಭ?, ಲೈವ್ ಯಾವುದರಲ್ಲಿ?. ಇಲ್ಲಿದೆ ಸಂಪೂರ್ಣ ಮಾಹಿತಿ.

IND vs ENG Test Series: ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಯಾವಾಗ?, ಎಷ್ಟು ಗಂಟೆಗೆ?, ಯಾವುದರಲ್ಲಿ ಲೈವ್?
India vs England Test
Vinay Bhat
|

Updated on: Jan 20, 2024 | 8:38 AM

Share

2024ನೇ ವರ್ಷವನ್ನು ಭಾರತ ಕ್ರಿಕೆಟ್ ತಂಡ ಭರ್ಜರಿ ಆಗಿ ಆರಂಭಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸಮಬಲ ಸಾಧಿಸಿದರೆ, ಬಳಿಕ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲೂ ಬೊಂಬಾಟ್ ಪ್ರದರ್ಶನ ತೋರಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು. ಇದರ ಬೆನ್ನಲ್ಲೇ ರೋಹಿತ್ ಪಡೆ ಮುಂದಿನ ಸರಣಿಗೆ ಸಜ್ಜಾಗುತ್ತಿದೆ. ಭಾರತ ತನ್ನ ಮುಂದಿನ ಸರಣಿಯನ್ನು ಇಂಗ್ಲೆಂಡ್ (India vs England) ವಿರುದ್ಧ ಆಡಲಿದೆ. ಇಂಡೋ-ಇಂಗ್ಲೆಂಡ್ ಸರಣಿ ಯಾವಾಗ?, ಎಷ್ಟು ಗಂಟೆಗೆ ಆರಂಭ?, ಲೈವ್ ಯಾವುದರಲ್ಲಿ?. ಇಲ್ಲಿದೆ ಸಂಪೂರ್ಣ ಮಾಹಿತಿ.

ಭಾರತದ ಮುಂದಿನ ಸರಣಿ ಯಾರ ವಿರುದ್ಧ?

ಭಾರತ ಕ್ರಿಕೆಟ್ ತಂಡ ತನ್ನ ಮುಂದಿನ ಸರಣಿಯನ್ನು ಪ್ರವಾಸಿ ಇಂಗ್ಲೆಂಡ್ ವಿರುದ್ಧ ಆಡಲಿದೆ. ಇದು ಐದು ಪಂದ್ಯಗಳ ಟೆಸ್ಟ್ ಸರಣಿ ಆಗಿದೆ.

ಇದನ್ನೂ ಓದಿ
Image
ಭಾರತದ ಮೂವರು ಸ್ಟಾರ್ ಆಟಗಾರರನ್ನು ವಿದೇಶಕ್ಕೆ ಕಳುಹಿಸಿದ ಬಿಸಿಸಿಐ
Image
U19 ವಿಶ್ವಕಪ್​ನಲ್ಲಿಂದು ಭಾರತದ ಮೊದಲ ಪಂದ್ಯ: ಎಷ್ಟು ಗಂಟೆಗೆ?
Image
ಗುರು ದ್ರಾವಿಡ್ ಆದೇಶವನ್ನು ಮತ್ತೆ ಧಿಕ್ಕರಿಸಿದ್ರಾ ಇಶಾನ್ ಕಿಶನ್..!
Image
ಪಿಸಿಬಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಝಾಕಾ ಅಶ್ರಫ್..!

ಭಾರತ- ಇಂಗ್ಲೆಂಡ್ ಟಿಸ್ಟ್ ಸರಣಿ ಯಾವಾಗ?

ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಟೆಸ್ಟ್ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯ ಜನವರಿ 25-29, ಎರಡನೇ ಪಂದ್ಯ ಫೆಬ್ರವರಿ 2-6, ಮೂರನೇ ಪಂದ್ಯ ಫೆ. 15-19, ನಾಲ್ಕನೇ ಟೆಸ್ಟ್ ಫೆ. 23-27 ಹಾಗೂ ಕೊನೆಯ ಐದನೇ ಪಂದ್ಯ ಮಾರ್ಚ್ 7-11 ವರೆಗೆ ಆಯೋಜಿಸಲಾಗಿದೆ.

ರಣಜಿಯಲ್ಲಿ ಮುಂದುವರೆದ ರಹಾನೆ ಶೂನ್ಯ ಸಾಧನೆ; ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದು ಡೌಟ್..!

ಭಾರತ- ಇಂಗ್ಲೆಂಡ್ ಟಿಸ್ಟ್ ಸರಣಿ ಎಲ್ಲಿ ಆಡಲಾಗುತ್ತದೆ?

ಭಾರತ ಮತ್ತು ಇಂಗ್ಲೆಂಡ್ ಟಿಸ್ಟ್ ಸರಣಿಯ ಮೊದಲ ಪಂದ್ಯ ಹೈದರಾಬಾದ್​ನಲ್ಲಿ ನಡೆಯಲಿದೆ. ಎರಡನೇ ಪಂದ್ಯ ವಿಶಾಖಪಟ್ಟಣಂ, ಮೂರನೇ ಪಂದ್ಯ ರಾಜ್ಕೋಟ್, ನಾಲ್ಕನೇ ಪಂದ್ಯ ರಾಂಚಿ ಮತ್ತು ಐದನೇ ಪಂದ್ಯ ಧರ್ಮಶಾಲಾದಲ್ಲಿ ಆಯೋಜಿಸಲಾಗಿದೆ.

ಭಾರತ- ಇಂಗ್ಲೆಂಡ್ ಟಿಸ್ಟ್ ಸರಣಿ ಎಲ್ಲಿ ವೀಕ್ಷಿಸಬಹುದು?

ಭಾರತ- ಇಂಗ್ಲೆಂಡ್ ಟಿಸ್ಟ್ ಸರಣಿಯ ಲೈವ್ ಸ್ಟ್ರೀಮ್ JioCinema ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ. ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿಯೂ ಪಂದ್ಯವನ್ನು ಲೈವ್ ಆಗಿ ವೀಕ್ಷಿಸಬಹುದು.

ಭಾರತ- ಇಂಗ್ಲೆಂಡ್ ಟಿಸ್ಟ್ ಸರಣಿ ಎಷ್ಟು ಗಂಟೆಗೆ ಆರಂಭ?

ಭಾರತ ಹಾಗೂ ಇಂಗ್ಲೆಂಡ್ ಟಿಸ್ಟ್ ಸರಣಿಯ ಎಲ್ಲ ಐದು ಪಂದ್ಯಗಳು ಭಾರತೀಯ ಕಾಲಮಾನದ ಪ್ರಕಾರ ಬೆಳಗ್ಗೆ 9:30ಕ್ಕೆ ಆರಂಭವಾಗಲಿದೆ.

ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೆಲ್ (ವಿಕೇಟ್ ಕೀಪರ್), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ