AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG ನಡುವಣ 2ನೇ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

India vs England 2nd ODI: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರು ಮ್ಯಾಚ್​ಗಳ ಏಕದಿನ ಸರಣಿ ಶುರುವಾಗಿದೆ. ಎಡ್ಜ್​ಬಾಸ್ಟನ್​ನಲ್ಲಿ ನಡೆದ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 6 ವಿಕೆಟ್​ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯವು ಜುಲೈ 16 ರಂದು ಕಾರ್ಡಿಫ್​ನಲ್ಲಿ ನಡೆಯಲಿದೆ.

IND vs ENG ನಡುವಣ 2ನೇ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ
Ind Vs EngImage Credit source: BCCI
ಝಾಹಿರ್ ಯೂಸುಫ್
|

Updated on: Jul 15, 2026 | 1:28 PM

Share

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಕಾರ್ಡಿಫ್​ನಲ್ಲಿ ನಡೆಯಲಿರುವ ಈ ಪಂದ್ಯವು ಇಂಗ್ಲೆಂಡ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲೂ ಟೀಮ್ ಇಂಡಿಯಾ ಗೆದ್ದರೆ 2-0 ಅಂತರದಿಂದ ಸರಣಿ ವಶಪಡಿಸಿಕೊಳ್ಳಲಿದೆ. ಹೀಗಾಗಿ ನಾಳಿನ (ಜು.16) ಪಂದ್ಯದಲ್ಲಿ ಆಂಗ್ಲರ ಪಡೆಯಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಇನ್ನು ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಪಂದ್ಯ ನಡೆಯುವುದು ಎಲ್ಲಿ?

ಮೂರು ಪಂದ್ಯದ ಏಕದಿನ ಸರಣಿಯ 2ನೇ ಪಂದ್ಯವು ಕಾರ್ಡಿಫ್​ನ ಸೋಫಿಯಾ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.

ಪಂದ್ಯ ಶುರುವಾಗುವುದು ಎಷ್ಟು ಗಂಟೆಗೆ?

ಭಾರತೀಯ ಕಾಲಮಾನ (IST) ಸಂಜೆ 5:30 ಕ್ಕೆ (ಕಾರ್ಡಿಫ್ ಸ್ಥಳೀಯ ಸಮಯ ಮಧ್ಯಾಹ್ನ 1:00 ಗಂಟೆ) ಮ್ಯಾಚ್ ಆರಂಭವಾಗಲಿದೆ.

ಯಾವ ಚಾನೆಲ್​ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು?

ಈ ಪಂದ್ಯವನ್ನು ಟಿವಿಯಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ (Sony Sports Ten 1, 3, 4 ಮತ್ತು 5) ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋಸ್ಟಾರ್ ಆ್ಯಪ್ ಮತ್ತು ವೆಬ್​ಸೈಟ್​ನಲ್ಲೂ ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಇರಲಿದೆ.

ಪಿಚ್ ರಿಪೋರ್ಟ್​:

ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್ ಮೈದಾನದ ಪಿಚ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡಕ್ಕೂ ಸಮಾನ ನೆರವು ನೀಡುವ ಒಂದು ಸಮತೋಲಿತ ಮೈದಾನವಾಗಿದೆ.

ಆರಂಭದಲ್ಲಿ ಬ್ಯಾಟರ್‌ಗಳಿಗೆ ಈ ಪಿಚ್ ಉತ್ತಮವಾಗಿರಲಿದ್ದು, ಒಮ್ಮೆ ಕ್ರೀಸ್‌ಗೆ ಸೆಟ್ ಆದರೆ ದೊಡ್ಡ ರನ್ ಗಳಿಸಲು ಇಲ್ಲಿ ಉತ್ತಮ ಅವಕಾಶವಿದೆ.

ಇನ್ನು ಪಂದ್ಯದ ಆರಂಭದಲ್ಲಿ ಗಾಳಿಯ ವೇಗದಿಂದಾಗಿ ವೇಗದ ಬೌಲರ್‌ಗಳಿಗೆ ಪಿಚ್ ನೆರವಾಗಲಿದೆ. ಆದರೆ ಪಂದ್ಯ ಮುಂದುವರಿದಂತೆ ಪಿಚ್ ನಿಧಾನಗತಿಯಾಗಲಿದ್ದು, ಸ್ಪಿನ್ನರ್‌ಗಳು ಮತ್ತು ಸ್ಲೋ ಬೌಲರ್‌ಗಳಿಗೆ ಹೆಚ್ಚಿನ ವಿಕೆಟ್ ಪಡೆಯಲು ಸಹಾಯ ಮಾಡುತ್ತದೆ.

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.

ಇದನ್ನೂ ಓದಿ: ಸೋಲರಿಯದ ಸರದಾರರು: 37 ಪಂದ್ಯಗಳ ‘ಸ್ಪೇನ್’ ಸಾಮ್ರಾಜ್ಯ!

ಇಂಗ್ಲೆಂಡ್ ಏಕದಿನ ತಂಡ: ಜೇಕಬ್ ಬೆಥೆಲ್, ಬೆನ್ ಡಕೆಟ್ , ಜೋ ರೂಟ್ , ಹ್ಯಾರಿ ಬ್ರೂಕ್ (ನಾಯಕ) , ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್ , ವಿಲ್ ಜ್ಯಾಕ್ಸ್ , ಲಿಯಾಮ್ ಡಾಸನ್ , ಜೋಫ್ರಾ ಆರ್ಚರ್ , ಆದಿಲ್ ರಶೀದ್ , ಜೋಶ್ ಟಂಗ್, ಸಾಕಿಬ್ ಮಹಮೂದ್ , ಟಾಮ್ ಬ್ಯಾಂಟನ್ , ಗಸ್ ಅಟ್ಕಿನ್ಸನ್ , ಜೇಮ್ಸ್ ಕೋಲ್ಸ್ , ರೆಹಾನ್ ಅಹ್ಮದ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ