IND vs ENG: ನಾಳೆಯೇ ನಿರ್ಣಾಯಕ ಪಂದ್ಯ; ಭಾರತ ಗೆದ್ದರೆ ಸರಣಿ ಕೈವಶ

India vs England 2nd ODI: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಫೆಬ್ರವರಿ 9 ರಂದು ಕಟಕ್‌ನಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಭಾರತ ಗೆದ್ದಿದ್ದು, ಇದೀಗ ಕಟಕ್‌ನಲ್ಲಿ ಸತತ ಎರಡನೇ ಗೆಲುವು ದಾಖಲಿಸುವ ಮೂಲಕ ಟೀಂ ಇಂಡಿಯಾ ಸರಣಿ ಗೆಲ್ಲಲು ಪ್ರಯತ್ನಿಸಲಿದೆ. ಇತ್ತ ಇಂಗ್ಲೆಂಡ್ ಸರಣಿಯನ್ನು ಸಮಬಲಗೊಳಿಸಲು ನೋಡಲಿದೆ.

IND vs ENG: ನಾಳೆಯೇ ನಿರ್ಣಾಯಕ ಪಂದ್ಯ; ಭಾರತ ಗೆದ್ದರೆ ಸರಣಿ ಕೈವಶ
ಭಾರತ- ಇಂಗ್ಲೆಂಡ್

Updated on: Feb 08, 2025 | 10:45 PM

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಸರಣಿಯ ಎರಡನೇ ಪಂದ್ಯ ಭಾನುವಾರ ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯಲಿದೆ. ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ 4 ವಿಕೆಟ್‌ಗಳಿಂದ ಜಯಗಳಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಹೀಗಾಗಿ ಕಟಕ್‌ನಲ್ಲಿ ಸತತ ಎರಡನೇ ಗೆಲುವು ದಾಖಲಿಸುವ ಮೂಲಕ ಟೀಂ ಇಂಡಿಯಾ ಸರಣಿ ಗೆಲ್ಲಲು ಪ್ರಯತ್ನಿಸಲಿದೆ. ಇತ್ತ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡ ಕೂಡ ಸರಣಿಯಲ್ಲಿ ಗೆಲುವಿನ ಲಯಕ್ಕೆ ಮರಳಲು ಎದುರು ನೋಡಲಿದೆ. ಟಿ20 ಸರಣಿಯನ್ನು 1-4 ಅಂತರದಿಂದ ಸೋತಿರುವ ಇಂಗ್ಲೆಂಡ್, ಏಕದಿನ ಸರಣಿಯಲ್ಲಾದರೂ ಗೆಲ್ಲುವ ಇರಾದೆಯಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ, ಎರಡನೇ ಏಕದಿನ ಪಂದ್ಯದಲ್ಲಿ ಉಭಯ ತಂಡಗಳ ನಡುವೆ ಕಠಿಣ ಪೈಪೋಟಿ ನಿರೀಕ್ಷಿಸಲಾಗಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಫೆಬ್ರವರಿ 9 ರಂದು ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯವು ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದೆ. ಇದಕ್ಕೆ ಅರ್ಧ ಗಂಟೆ ಮೊದಲು ಟಾಸ್ ನಡೆಯಲ್ಲಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಏಕದಿನ ಪಂದ್ಯವನ್ನು ಯಾವ ಚಾನೆಲ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು?

ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಏಕದಿನ ಪಂದ್ಯದ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುವುದು ಮತ್ತು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್​ನಲ್ಲಿ ಆನ್​ಲೈನ್​ನಲ್ಲಿ ವೀಕ್ಷಿಸಬಹುದಾಗಿದೆ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜ, ಹರ್ಷಿತ್ ರಾಣಾ.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ