India vs England 2nd ODI Match Live Streaming: ಭಾರತಕ್ಕೆ ಸರಣಿ ಗೆಲ್ಲುವ ಅವಕಾಶ; ಪಂದ್ಯ ಎಷ್ಟು ಗಂಟೆಗೆ?
India vs England 2nd ODI Match Live Streaming: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ ಲಭಿಸಿದೆ. ಈ 10 ವಿಕೆಟ್ ಗೆಲುವಿನೊಂದಿಗೆ ಟೀಂ ಇಂಡಿಯಾ ಐಸಿಸಿ ಏಕದಿನ ತಂಡಗಳ ಶ್ರೇಯಾಂಕದಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದೆ.
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು 10 ವಿಕೆಟ್‌ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ (Team India) ಗುರುವಾರ ಸರಣಿ ವಶಪಡಿಸಿಕೊಳ್ಳುವ ಉತ್ಸಾಹದಲ್ಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಮಂಗಳವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಬುಮ್ರಾ (Jasprit Bumrah) ಆರು ವಿಕೆಟ್ ಪಡೆದು ತಮ್ಮ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ತೋರಿದ್ದರು. ಮಾರಕ ದಾಳಿ ಮಾಡಿದ ಭಾರತ, ಇಂಗ್ಲೆಂಡ್ ತಂಡವನ್ನು 110 ರನ್‌ಗಳಿಗೆ ಆಲೌಟ್ ಮಾಡಿತು, ಇದು ಭಾರತದ ವಿರುದ್ಧ ಆಂಗ್ಲರ ಅತ್ಯಂತ ಕಡಿಮೆ ಸ್ಕೋರ್ ಆಗಿತ್ತು. ಬುಮ್ರಾ 7.2 ಓವರ್‌ಗಳಲ್ಲಿ 19 ರನ್ ನೀಡಿ ಆರು ವಿಕೆಟ್ ಪಡೆದರು. ಇದಕ್ಕೆ ಉತ್ತರವಾಗಿ ನಾಯಕ ರೋಹಿತ್ ಶರ್ಮಾ (Rohit Sharma) 58 ಎಸೆತಗಳಲ್ಲಿ ಅಜೇಯ 76 ಮತ್ತು ಶಿಖರ್ ಧವನ್ 54 ಎಸೆತಗಳಲ್ಲಿ ಅಜೇಯ 31 ರನ್ ಗಳಿಸಿ ಭಾರತಕ್ಕೆ ಸುಲಭ ಗೆಲುವು ತಂಡದುಕೊಟ್ಟರು.
ಶ್ರೇಯಾಂಕದಲ್ಲಿ ಭಾರತಕ್ಕೆ ದೊಡ್ಡ ಲಾಭ
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ ಲಭಿಸಿದೆ. ಈ 10 ವಿಕೆಟ್ ಗೆಲುವಿನೊಂದಿಗೆ ಟೀಂ ಇಂಡಿಯಾ ಐಸಿಸಿ ಏಕದಿನ ತಂಡಗಳ ಶ್ರೇಯಾಂಕದಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದೆ. ಈ ಹಿಂದೆ ಭಾರತ 105 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿತ್ತು. ಆದರೆ ಮಂಗಳವಾರ 10 ವಿಕೆಟ್‌ಗಳ ಜಯದೊಂದಿಗೆ ಭಾರತ 108 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೇಲಕ್ಕೆ ಏರಿದ್ದಾರೆ. ಪಾಕಿಸ್ತಾನ 106 ಅಂಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಭಾರತ ಮೂರನೇ ಸ್ಥಾನ ಕಾಯ್ದುಕೊಳ್ಳಬೇಕಾದರೆ ಕ್ಲೀನ್ ಸ್ವೀಪ್ ಮಾಡಲೇಬೇಕು.
ಭಾರತ ಮತ್ತು ಇಂಗ್ಲೆಂಡ್ ನಡುವಿನ 2 ನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಲಂಡನ್‌ನ ಲಾರ್ಡ್ಸ್‌ನಲ್ಲಿ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಗುರುವಾರ ಜುಲೈ 14 ರಂದು ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಯಾವ ಸಮಯಕ್ಕೆ ಆರಂಭವಾಗಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಭಾರತೀಯ ಕಾಲಮಾನ ಸಂಜೆ 5:30ಕ್ಕೆ ಆರಂಭವಾಗಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 2 ನೇ ODI ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ನೇರ ಪ್ರಸಾರವನ್ನು ಸೋನಿ ನೆಟ್‌ವರ್ಕ್‌ನ ಚಾನೆಲ್‌ನಲ್ಲಿ ನೋಡಬಹುದು.
ಭಾರತ vs ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?
ನೀವು ಸೋನಿ ಟೆನ್ 3 ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ODI ನ ಲೈವ್ ಸ್ಟ್ರೀಮಿಂಗ್ ಅನ್ನು ಹಿಂದಿಯಲ್ಲಿ ವೀಕ್ಷಿಸಬಹುದು, ಜೊತೆಗೆ ಸೋನಿ ಸಿಕ್ಸ್‌ನಲ್ಲಿ ಇಂಗ್ಲಿಷ್ ಭಾಷೆಯಲ್ಲಿ ವೀಕ್ಷಿಸಬಹದು.
Published On - 4:14 pm, Wed, 13 July 22