India vs England 2nd ODI Playing 11: ಕೊನೆ ಗಳಿಗೆಯಲ್ಲಿ ಕೊಹ್ಲಿಗೆ ಸ್ಥಾನ; ಭಾರತ ಬೌಲಿಂಗ್, ಹೀಗಿದೆ ಪ್ಲೇಯಿಂಗ್ XI

India vs England 2nd ODI Playing 11: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ವಿರಾಟ್ ಕೊಹ್ಲಿ ಟೀಂ ಇಂಡಿಯಾಗೆ ಮರಳಿದ್ದಾರೆ.

India vs England 2nd ODI Playing 11: ಕೊನೆ ಗಳಿಗೆಯಲ್ಲಿ ಕೊಹ್ಲಿಗೆ ಸ್ಥಾನ; ಭಾರತ ಬೌಲಿಂಗ್, ಹೀಗಿದೆ ಪ್ಲೇಯಿಂಗ್ XI
IND vs ENG 1st T20I
Follow us
TV9 Web
| Updated By: ಪೃಥ್ವಿಶಂಕರ

Updated on:Jul 14, 2022 | 5:26 PM

ಕ್ರಿಕೆಟ್‌ನ ಮೆಕ್ಕಾ ಎಂದು ಕರೆಯಲ್ಪಡುವ ಲಾರ್ಡ್ಸ್ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ (Ind vs Eng) ನಡುವೆ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ವಿರಾಟ್ ಕೊಹ್ಲಿ (Virat Kohli) ಟೀಂ ಇಂಡಿಯಾಗೆ ಮರಳಿದ್ದಾರೆ. ತೊಡೆಸಂದು ಗಾಯದ ಕಾರಣ ಅವರು ಮೊದಲ ODI ನಲ್ಲಿ ಆಡಲಿಲ್ಲ. ಕೊಹ್ಲಿ ಎರಡನೇ ಪಂದ್ಯದಲ್ಲೂ ಆಡದಿರುವ ಸಾಧ್ಯತೆ ಇತ್ತು. ಆದರೆ ಅವರು ಲಾರ್ಡ್ಸ್‌ನಲ್ಲಿ ಕಣಕ್ಕಿಳಿಯುತ್ತಾರೆ ಎಂಬ ಅಧಿಕೃತ ಮಾಹಿತಿ ಹೊರಬಿದ್ದಿದೆ. ಕೊಹ್ಲಿ ಆಗಮನದಿಂದಾಗಿ ಶ್ರೇಯಸ್ ಅಯ್ಯರ್ ತಂಡದಿಂದ ಹೊರಬಿದ್ದಿದ್ದಾರೆ.

ಹಠಾತ್ ಬದಲಾವಣೆ

ಇದನ್ನೂ ಓದಿ
Image
Breaking News: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ; ಕೊಹ್ಲಿ, ಬುಮ್ರಾಗೆ ವಿಶ್ರಾಂತಿ
Image
ICC T20 Rankings: 44 ಸ್ಥಾನ ಜಿಗಿದು ಟಾಪ್ 5ನೇ ಸ್ಥಾನಕ್ಕೆ ಸೂರ್ಯಕುಮಾರ್ ಎಂಟ್ರಿ; ಟಾಪ್ 20ರಲ್ಲೂ ಇಲ್ಲ ಕೊಹ್ಲಿ..!
Image
AUS vs SA: ತನ್ನ ಕಾಲಿಗೆ ತಾನೇ ಕೊಡಲಿ ಹಾಕಿಕೊಂಡ ದಕ್ಷಿಣ ಆಫ್ರಿಕಾ; ವಿಶ್ವಕಪ್‌ ಆಡುವುದು ಅನುಮಾನ?

ಮೊದಲ ಏಕದಿನದಲ್ಲಿ ಆಡದ ನಂತರವೂ ವಿರಾಟ್ ಕೊಹ್ಲಿ ಎರಡನೇ ಏಕದಿನ ಪಂದ್ಯದಲ್ಲೂ ಆಡುವುದಿಲ್ಲ ಎಂಬ ವರದಿಗಳು ಬುಧವಾರದವರೆಗೆ ಇದ್ದವು. ಆದರೆ ಒಂದು ಸಂದರ್ಭದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಟದ ಬಗ್ಗೆ ಮಾಹಿತಿ ನೀಡಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು. ವಿರಾಟ್ ಫಾರ್ಮ್‌ನಲ್ಲಿಲ್ಲದಿರುವುದರಿಂದ ರನ್ ಗಳಿಸುವ ಒತ್ತಡ ಅವರ ಮೇಲೆ ಇತ್ತು. ವಿರಾಟ್ ಅವರನ್ನು ತಂಡದಿಂದ ಕೈಬಿಡುವ ಬಗ್ಗೆ ಹಲವು ಅನುಭವಿ ಆಟಗಾರರು ಕೂಡ ಮಾತನಾಡಿದ್ದರು. ಹಾಗಾಗಿ ಈ ಪಂದ್ಯದಲ್ಲಿ ವಿರಾಟ್ ತಮ್ಮ ಶತಕಗಳ ಬರವನ್ನು ದೊಡ್ಡ ಇನಿಂಗ್ಸ್‌ನಿಂದ ಕೊನೆಗೊಳಿಸಲು ಪ್ರಯತ್ನಿಸಲಿದ್ದಾರೆ.

ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಈ ಪಂದ್ಯಕ್ಕಾಗಿ ಆಡುವ 11 ರಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಓವಲ್‌ನಲ್ಲಿ ಆಡಿದ ಸೋತ ಅದೇ ತಂಡದೊಂದಿಗೆ ಬಟ್ಲರ್ ಮೈದಾನಕ್ಕಿಳಿಯಲಿದೆ.

ಸರಣಿ ಗೆಲುವಿನ ಮೇಲೆ ಭಾರತದ ಕಣ್ಣು

ಮೊದಲ ಏಕದಿನ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಈ ಪಂದ್ಯವನ್ನು ಗೆದ್ದರೆ, ಭಾರತ ಸರಣಿಯನ್ನು ತನ್ನ ಹೆಸರಿಗೆ ಬರೆದುಕೊಳ್ಳಲಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಈ ಪಂದ್ಯದೊಂದಿಗೆ ಸರಣಿಯನ್ನು ಸೀಲ್ ಮಾಡುವ ಉದ್ದೇಶದಿಂದ ಅಖಾಡಕ್ಕಿಳಿಯಲಿದೆ. ಮತ್ತೊಂದೆಡೆ, ಈ ಪಂದ್ಯವನ್ನು ಗೆದ್ದು, ಸರಣಿಯಲ್ಲಿ ಸಮಬಲಗೊಳಿಸಲು ಮತ್ತು ರೋಚಕವಾಗಿಸಲು ಇಂಗ್ಲೆಂಡ್ ಪ್ರಯತ್ನಿಸುತ್ತದೆ.

ಎರಡೂ ತಂಡಗಳ ಪ್ಲೇಯಿಂಗ್-11 ಹೀಗಿದೆ

ಭಾರತ- ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಲ್.

ಇಂಗ್ಲೆಂಡ್ – ಜೋಸ್ ಬಟ್ಲರ್ (ನಾಯಕ), ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಲಿಯಾಮ್ ಲಿವಿಂಗ್‌ಸ್ಟನ್, ಮೊಯಿನ್ ಅಲಿ, ಡೇವಿಡ್ ವಿಲ್ಲಿ, ಕ್ರೇಗ್ ಓವರ್‌ಟನ್, ಬೈರ್ಡನ್ ಕಾರ್ಸ್, ರೀಸ್ ಟೋಪ್ಲಿ.

Published On - 5:11 pm, Thu, 14 July 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ