AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 2ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ? ಕಟಕ್ ಪಿಚ್ ವರದಿ, ಮೈದಾನದ ದಾಖಲೆಯ ವಿವರ ಇಲ್ಲಿದೆ

India vs England 2nd ODI: ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಕಟಕ್‌ನಲ್ಲಿ ನಡೆಯಲಿದೆ. ಕಟಕ್ ಪಿಚ್ ಸ್ಪಿನ್ ಬೌಲರ್‌ಗಳಿಗೆ ಅನುಕೂಲಕರವಾಗಿದ್ದು, ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಕಷ್ಟಪಡಬೇಕಾಗುತ್ತದೆ. ಬಾರಾಬತಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಳ್ಳಬಹುದು.

IND vs ENG: 2ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ? ಕಟಕ್ ಪಿಚ್ ವರದಿ, ಮೈದಾನದ ದಾಖಲೆಯ ವಿವರ ಇಲ್ಲಿದೆ
Ind Vs Eng 2nd Odi
Follow us
ಪೃಥ್ವಿಶಂಕರ
|

Updated on:Feb 07, 2025 | 3:22 PM

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಫೆಬ್ರವರಿ 9 ರಂದು ನಡೆಯಲಿದೆ. ಮೊದಲ ಪಂದ್ಯವನ್ನು 4 ವಿಕೆಟ್​ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆಯಲ್ಲಿದೆ. ಹೀಗಾಗಿ ಎರಡನೇ ಪಂದ್ಯವನ್ನು ರೋಹಿತ್ ಪಡೆ ಗೆದ್ದುಕೊಂಡರೆ, ಟಿ20 ಸರಣಿಯ ಜೊತೆಗೆ ಏಕದಿನ ಸರಣಿಯನ್ನು ಗೆದ್ದಂತ್ತಾಗುತ್ತದೆ. ಇತ್ತ ಇಂಗ್ಲೆಂಡ್ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಏಕದಿನ ಸರಣಿಯನ್ನು 1-1 ರಿಂದ ಸಮಬಲಗೊಳಿಸಲು ಎದುರು ನೋಡುತ್ತಿದೆ. ಹೀಗಾಗಿ ಕಟಕ್‌ನಲ್ಲಿ ನಡೆಯಲ್ಲಿರುವ ಎರಡನೇ ಏಕದಿನ ಪಂದ್ಯ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ.

ಕಟಕ್ ಪಿಚ್ ವರದಿ ಹೀಗಿದೆ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯವು ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಮೈದಾನದ ಪಿಚ್​ನಲ್ಲಿ ಸ್ಪಿನ್ ಬೌಲರ್‌ಗಳು ಮೇಲುಗೈ ಸಾಧಿಸಲಿದ್ದಾರೆ. ಹೀಗಾಗಿ ಈ ಪಿಚ್​ನಲ್ಲಿ ಬ್ಯಾಟ್ಸ್‌ಮನ್‌ಗಳು ರನ್ ಗಳಿಸುವುದು ತುಂಬಾ ಕಷ್ಟ. ಸ್ಪಿನ್ನರ್‌ಗಳ ಜೊತೆಗೆ, ವೇಗದ ಬೌಲರ್‌ಗಳು ಸಹ ಆರಂಭದಲ್ಲಿ ವಿಕೆಟ್‌ನಿಂದ ಸಾಕಷ್ಟು ಸಹಾಯ ಪಡೆಯುತ್ತಾರೆ. ಅಂದರೆ, ಕಟಕ್‌ನ ಈ ಮೈದಾನದಲ್ಲಿ, ಬ್ಯಾಟ್ಸ್‌ಮನ್‌ಗಳು ಪ್ರತಿ ರನ್‌ಗೂ ಕಷ್ಟಪಡಬೇಕಾಗುತ್ತದೆ.

ಬಾರಾಬತಿ ಕ್ರೀಡಾಂಗಣದ ದಾಖಲೆ

ಬಾರಾಬತಿ ಕ್ರೀಡಾಂಗಣದಲ್ಲಿ ಇಲ್ಲಿಯವರೆಗೆ ಒಟ್ಟು 27 ಏಕದಿನ ಪಂದ್ಯಗಳನ್ನು ಆಡಲಾಗಿದೆ. ಇವುಗಳಲ್ಲಿ 11 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದ್ದರೆ, 16 ಪಂದ್ಯಗಳಲ್ಲಿ ರನ್ ಬೆನ್ನಟ್ಟಿದ ತಂಡ ಗೆಲುವು ಸಾಧಿಸಿದೆ. ಅಂದರೆ ಈ ಮೈದಾನದಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಬಹುದು. ಮೊದಲ ಇನ್ನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 229 ಆಗಿದ್ದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 201 ಆಗಿದೆ. ಇದೇ ಮೈದಾನದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 50 ಓವರ್‌ಗಳಲ್ಲಿ 381 ರನ್ ಕಲೆಹಾಕಿತ್ತು. ಇದು ಈ ಮೈದಾನದಲ್ಲಿ ದಾಖಲಾದ ಅತ್ಯಧಿಕ ಸ್ಕೋರ್ ಕೂಡ ಆಗಿದೆ.

ಏಕದಿನ ಸರಣಿಗೆ ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಶ್ದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್. (ವಿಕೆಟ್ ಕೀಪರ್) ಮತ್ತು ರವೀಂದ್ರ ಜಡೇಜಾ.

ಇಂಗ್ಲೆಂಡ್‌ ತಂಡ: ಹ್ಯಾರಿ ಬ್ರೂಕ್, ಬೆನ್ ಡಕೆಟ್, ಜೋ ರೂಟ್, ಜಾಕೋಬ್ ಬೆಥೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಬ್ರೈಡನ್ ಕಾರ್ಸೆ, ಜೇಮೀ ಓವರ್ಟನ್, ಜೋಸ್ ಬಟ್ಲರ್, ಜೇಮೀ ಸ್ಮಿತ್, ಫಿಲಿಪ್ ಸಾಲ್ಟ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಮಾರ್ಕ್ ವುಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Fri, 7 February 25

ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ