
ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಏಕದಿನ ಪಂದ್ಯ ಶುರುವಾಗಿದೆ. ಕಟಕ್ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಅದರಂತೆ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ.
ಇದಕ್ಕೂ ಮುನ್ನ ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ. ಮೊಣಕಾಲಿನ ನೋವಿನ ಕಾರಣ ಅವರು ಹೊರಗುಳಿದಿದ್ದಾರೆ. ಇದೀಗ ಕಿಂಗ್ ಕೊಹ್ಲಿಯ ರಿಎಂಟ್ರಿಯಿಂದಾಗಿ ಯಶಸ್ವಿ ಜೈಸ್ವಾಲ್ ಪ್ಲೇಯಿಂಗ್ ಇಲೆವೆನ್ನಿಂದ ಹೊರಬಿದ್ದಿದ್ದಾರೆ. ಇನ್ನು ಈ ಪಂದ್ಯದ ಮೂಲಕ ವರುಣ್ ಚಕ್ರವರ್ತಿ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.
ಇಂಗ್ಲೆಂಡ್ ಪ್ಲೇಯಿಂಗ್ 11: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಓವರ್ಟನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ.
ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ 4 ವಿಕೆಟ್ಗಳ ಜಯ ಸಾಧಿಸಿದೆ. ಇದೀಗ 1-0 ಅಂತರದಿಂದ ಮುನ್ನಡೆ ಹೊಂದಿರುವ ಭಾರತ ತಂಡವು ದ್ವಿತೀಯ ಪಂದ್ಯದಲ್ಲಿ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ.
ಅತ್ತ ಸರಣಿ ಗೆಲ್ಲುವ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಇಂಗ್ಲೆಂಡ್ ತಂಡವು ಕಟಕ್ನಲ್ಲಿ ಗೆಲುವು ದಾಖಲಿಸಲೇಬೇಕು. ಹೀಗಾಗಿ ಬಾರಾಬತಿ ಕ್ರೀಡಾಂಗಣದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಭಾರತ ಮತ್ತು ಇಂಗ್ಲೆಂಡ್ ಈವರೆಗೆ 108 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 59 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಇಂಗ್ಲೆಂಡ್ 44 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ.
ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾದರೆ, ಇನ್ನೆರಡು ಪಂದ್ಯಗಳು ಟೈನಲ್ಲಿ ಅಂತ್ಯಗೊಂಡಿತ್ತು. ಈ ಅಂಕಿ ಅಂಶಗಳ ಪ್ರಕಾರ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಮೇಲುಗೈ ಹೊಂದಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
ಇದನ್ನೂ ಓದಿ: 100ನೇ ಪಂದ್ಯದ ಸೋಲಿನೊಂದಿಗೆ ದಿಮುತ್ ಕರುಣರತ್ನೆ ವಿದಾಯ
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕೊಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
Published On - 1:05 pm, Sun, 9 February 25