AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 2ನೇ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಸಿಹಿಸುದ್ದಿ

Virat Kohli Return: ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಗೆದ್ದಿದ್ದು, ಇದೀಗ ಫೆಬ್ರವರಿ 9 ರಂದು ಕಟಕ್‌ನಲ್ಲಿ ನಡೆಯುವ ಎರಡನೇ ಪಂದ್ಯದಲ್ಲಿ ಸರಣಿ ಗೆಲ್ಲುವ ಗುರಿಯಲ್ಲಿದೆ. ಮೊದಲ ಪಂದ್ಯದಿಂದ ಗಾಯದಿಂದ ಹೊರಗಿದ್ದ ವಿರಾಟ್ ಕೊಹ್ಲಿ ಎರಡನೇ ಪಂದ್ಯಕ್ಕೆ ಫಿಟ್ ಆಗಿದ್ದಾರೆ. ಕೊಹ್ಲಿ ಅವರ ವಾಪಸಾತಿಯಿಂದಾಗಿ ಯುವ ಆಟಗಾರ ಯಶಸ್ವಿ ಜೈಸ್ವಾಲ್ ತಂಡದಿಂದ ಹೊರಬೀಳುವ ಸಾಧ್ಯತೆಯಿದೆ.

IND vs ENG: 2ನೇ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಸಿಹಿಸುದ್ದಿ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Feb 07, 2025 | 2:29 PM

Share

ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು 4 ವಿಕೆಟ್​ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಫೆಬ್ರವರಿ 9 ರಂದು ಕಟಕ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳಲು ಎದುರು ನೋಡುತ್ತಿದೆ. ಇತ್ತ ಇಂಗ್ಲೆಂಡ್ ಕೂಡ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಬೇಕೆಂದು ಬಯಸುತ್ತಿದೆ. ಈ ನಡುವೆ ಟೀಂ ಇಂಡಿಯಾಕ್ಕೆ ಕೊಂಚ ಸಮಾಧಾನಕರ ಸುದ್ದಿ ಸಿಕ್ಕಿದ್ದು, ಇಂಜುರಿಯಿಂದಾಗಿ ಮೊದಲ ಪಂದ್ಯದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ, ಎರಡನೇ ಪಂದ್ಯಕ್ಕೆ ಸಂಪೂರ್ಣ ಫಿಟ್ ಆಗಿದ್ದು, ತಂಡದಲ್ಲಿ ಆಡುವುದು ಖಚಿತ ಎಂದು ವರದಿಯಾಗಿದೆ.

ವಾಸ್ತವವಾಗಿ ನಾಗ್ಪುರ ಏಕದಿನ ಪಂದ್ಯಕ್ಕೂ ಮುನ್ನ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಮೊಣಕಾಲಿಗೆ ಇಂಜುರಿಯಾಗಿದೆ ಎಂಬ ಮಾಹಿತಿ ಹೊರಬಿದ್ದಿತ್ತು. ಆ ಬಳಿಕ ಪಂದ್ಯದಿಂದ ಹೊರಗುಳಿದಿದ್ದ ಕೊಹ್ಲಿ ಅವರ ಕಾಲಿಗೆ ಬ್ಯಾಂಡೇಜ್ ಸುತ್ತಿರುವುದು ಕೂಡ ಫೋಟೋ ಹಾಗೂ ವಿಡಿಯೋ ಮೂಲಕ ವೈರಲ್ ಆಗಿತ್ತು. ಮೊದಲ ಪಂದ್ಯದ ಟಾಸ್ ವೇಳೆ ಈ ಬಗ್ಗೆ ಮಾತನಾಡಿದ್ದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಬಲಗಾಲಿನ ನೋವಿನಿಂದ ಬಳಲುತ್ತಿದ್ದು, ಅವರಿಗೆ ಮೊದಲ ಏಕದಿನ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ ಎಂದಿದ್ದರು.

ಕೊಹ್ಲಿಗೆ ಈ ಸರಣಿ ಬಹಳ ಅವಶ್ಯಕ

ವರದಿಯ ಪ್ರಕಾರ, ಪ್ರಸ್ತುತ ಕೊಹ್ಲಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಎರಡನೇ ಏಕದಿನ ಪಂದ್ಯಕ್ಕೆ ಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ. ಚಾಂಪಿಯನ್ಸ್ ಟ್ರೋಫಿ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗುವುದರಿಂದ ಕೊಹ್ಲಿ ಎರಡನೇ ಏಕದಿನ ಪಂದ್ಯವನ್ನು ಆಡುವುದು ಅತ್ಯವಶ್ಯಕವಾಗಿದೆ. ಏಕೆಂದರೆ ಕೊಹ್ಲಿ ಕೂಡ ರೋಹಿತ್​ರಂತೆ ಕಳೆದ ಕೆಲವು ದಿನಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಹೀಗಾಗಿ ಉಳಿದಿರುವ ಎರಡು ಪಂದ್ಯಗಳಲ್ಲಿ ಕೊಹ್ಲಿ ಆಡುವ ಮೂಲಕ ತಮ್ಮ ಹಳೆಯ ಲಯಕ್ಕೆ ಮರಳಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

ಜೈಸ್ವಾಲ್ ಔಟ್, ಕೊಹ್ಲಿ ಇನ್

ಸದ್ಯದ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ಎರಡನೇ ಏಕದಿನ ಪಂದ್ಯದಲ್ಲಿ ಆಡುವುದು ಖಚಿತವಾದರೆ, ತಂಡದಲ್ಲಿ ಬದಲಾವಣೆಯಾಗುವುದು ಖಚಿತ. ಅದರಂತೆ ಮೊದಲನೇ ಏಕದಿನ ಪಂದ್ಯದಲ್ಲಿ ಚೊಚ್ಚಲ ಪಂದ್ಯವನ್ನಾಡುವ ಅವಕಾಶ ಪಡೆದಿದ್ದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ತಂಡದಿಂದ ಹೊರಗುಳಿಯಬೇಕಾಗುತ್ತದೆ. ಏಕೆಂದರೆ ಮೊದಲ ಪಂದ್ಯದಲ್ಲಿ ಜೈಸ್ವಾಲ್​ಗೆ ಗಮನಾರ್ಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಇದರ ಜೊತೆಗೆ ಜೈಸ್ವಾಲ್ ಹೊರತುಪಡಿಸಿ ಟಾಪ್ 4 ರಲ್ಲಿ ಆಡುವ ಉಳಿದ ಆಟಗಾರರು ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಜೈಸ್ವಾಲ್​ಗೆ ತಂಡದಿಂದ ಗೇಟ್​ಪಾಸ್ ನೀಡಿ ಕೊಹ್ಲಿಗೆ ಅವಕಾಶ ನೀಡಬೇಕಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Fri, 7 February 25

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ