ಭಾರತ ಮತ್ತು ಇಂಗ್ಲೆಂಡ್ (India and England) ನಡುವಿನ ಮೂರು ಪಂದ್ಯಗಳ T20 ಸರಣಿಯ ಎರಡನೇ ಪಂದ್ಯ ಶನಿವಾರ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ. ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಸೋಲಿನ ನಂತರ, ಟೀಮ್ ಇಂಡಿಯಾ ಈ ಸರಣಿಯನ್ನು ಗೆದ್ದು ಸೇಡು ತೀರಿಸಿಕೊಳ್ಳಲು ಬಯಸಿದೆ. ಮೊದಲ ಟಿ20 ಗೆದ್ದ ನಂತರ ಭಾರತಕ್ಕೆ ಈ ಸರಣಿ ಗೆಲ್ಲುವ ದೊಡ್ಡ ಅವಕಾಶವಿದೆ. ಈ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ (Jasprit Bumrah , Virat Kohli, Rishabh Pant and Ravindra Jadeja) ತಂಡಕ್ಕೆ ಮರಳಲಿದ್ದಾರೆ. ನಾಯಕತ್ವ ಮತ್ತೊಮ್ಮೆ ರೋಹಿತ್ ಶರ್ಮಾ ಕೈ ಸೇರಲಿದೆ. ಸೌತಾಂಪ್ಟನ್‌ನಲ್ಲಿ ನಡೆದ ಮೊದಲ ಟಿ20ಯಲ್ಲಿ ರೋಹಿತ್ ಶರ್ಮಾ (Rohit Sharma) ಗೆಲುವಿನೊಂದಿಗೆ ನಾಯಕತ್ವದಲ್ಲಿ ಸತತ 15ನೇ ಪಂದ್ಯವನ್ನು ಗೆದ್ದಿದ್ದಾರೆ.
ಹಾರ್ದಿಕ್ ಆಲ್ ರೌಂಡ್ ಆಟದಿಂದ ಟೀಂ ಇಂಡಿಯಾ ಗೆದ್ದಿದೆ
ಹಾರ್ದಿಕ್ ಪಾಂಡ್ಯ ವೃತ್ತಿಜೀವನದ ಮೊದಲ ಅರ್ಧಶತಕದೊಂದಿಗೆ ಗುರುವಾರ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ ಎಂಟು ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತು. ಆದರೆ, ಇಂಗ್ಲೆಂಡ್ ತಂಡ ಕೇವಲ 148 ರನ್ ಗಳಿಸಿ ಆಲೌಟ್ ಆಯಿತು. ಹಾರ್ದಿಕ್ ಚೆಂಡಿನೊಂದಿಗೆ ಅದ್ಭುತ ಪ್ರದರ್ಶನ ತೋರಿ, ನಾಲ್ಕು ವಿಕೆಟ್ ಪಡೆದರು. ಪಾಂಡ್ಯ 33 ಎಸೆತಗಳಲ್ಲಿ 51 ರನ್ ಗಳಿಸಿ 33 ರನ್ ನೀಡಿ ನಾಲ್ಕು ವಿಕೆಟ್ ಪಡೆದರು. ಪಂದ್ಯದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರಮಕ್ಕೆ ಯಾವಾಗಲೂ ಪ್ರತಿಫಲ ಸಿಗುತ್ತದೆ. ಒಳ್ಳೆಯ ಉದ್ದೇಶದಿಂದ ಮಾಡಿದ ಕಠಿಣ ಪರಿಶ್ರಮ ಎಂದಿಗೂ ವ್ಯರ್ಥವಾಗುವುದಿಲ್ಲ ಎಂದು ನಾನು ಯಾವಾಗಲೂ ನಂಬುತ್ತೇನೆ. ನಾನು ಯಾವಾಗಲೂ ನನ್ನನ್ನು ಸಿದ್ಧವಾಗಿಟ್ಟುಕೊಳ್ಳಲು ಬಯಸುತ್ತೇನೆ. ಕೆಲವೊಮ್ಮೆ ಫಲಿತಾಂಶಗಳು ನನ್ನ ಪರವಾಗಿರುತ್ತವೆ ಮತ್ತು ಕೆಲವೊಮ್ಮೆ ಪರವಾಗಿರುವುದಿಲ್ಲ ಎಂದಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವೆ ಎರಡನೇ ಟಿ20 ಎಲ್ಲಿ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟಿ20 ಯಾವಾಗ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಜುಲೈ 9 ರಂದು ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟಿ20 ಯಾವಾಗ ಆರಂಭವಾಗುತ್ತದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಅಂದರೆ, ಅದರ ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 2 ನೇ T20I ಪಂದ್ಯವನ್ನು ಲೈವ್ ಆಗಿ ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟಿ20 ಪಂದ್ಯದ ನೇರ ಪ್ರಸಾರವನ್ನು ಸೋನಿ ನೆಟ್‌ವರ್ಕ್‌ನ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೋಡಬಹುದು. ಇದನ್ನು ಸೋನಿ ಸಿಕ್ಸ್‌ನಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಮತ್ತು ಸೋನಿ ಟೆನ್ 3 ನಲ್ಲಿ ಹಿಂದಿಯಲ್ಲಿ ನೋಡಬಹುದು.
ಭಾರತ vs ಇಂಗ್ಲೆಂಡ್ 2ನೇ T20I ಪಂದ್ಯದ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ T20 ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ನೀವು SonyLive ನಲ್ಲಿ ವೀಕ್ಷಿಸಬಹುದು. ಅದೇ ಸಮಯದಲ್ಲಿ, ನೀವು tv9 kannada.com ನಲ್ಲಿ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಹ ಪಡೆಯಬಹುದು.
Published On - 6:12 pm, Fri, 8 July 22