India vs England 2nd T20 Playing 11: ಭಾರತ ಮೊದಲು ಬ್ಯಾಟಿಂಗ್; 4 ಬದಲಾವಣೆ, ಯಾರಿಗೆಲ್ಲ ಛಾನ್ಸ್?
India vs England 2nd T20 Playing 11: ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟೀಂ ಇಂಡಿಯಾದಲ್ಲಿ ನಾಲ್ಕು ಬದಲಾವಣೆಗಳನ್ನು ಮಾಡಲಾಗಿದ್ದು, ನಿರೀಕ್ಷೆಯಂತೆ ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ ತಂಡಕ್ಕೆ ಮರಳುತ್ತಿದ್ದಾರೆ.
ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್‌ನಲ್ಲಿ ಟಿ20 ಸರಣಿ ಗೆಲ್ಲುವ ತವಕದಲ್ಲಿದೆ. ಟೀಂ ಇಂಡಿಯಾಗೆ ಎಡ್ಜ್‌ಬಾಸ್ಟನ್ ಟಿ20 ಪಂದ್ಯ ಗೆಲ್ಲಲೇಬೇಕಾಗಿದೆ. ಭಾರತ ಮತ್ತು ಇಂಗ್ಲೆಂಡ್ ( India and England) ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿದೆ. ಮೊದಲ ಪಂದ್ಯ ಗೆದ್ದಿದ್ದ ಟೀಂ ಇಂಡಿಯಾ ಇದೀಗ ಈ ಪಂದ್ಯದೊಂದಿಗೆ ಸರಣಿ ಗೆಲ್ಲುವ ಅವಕಾಶ ಪಡೆದುಕೊಂಡಿದೆ. ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟೀಂ ಇಂಡಿಯಾದಲ್ಲಿ ನಾಲ್ಕು ಬದಲಾವಣೆಗಳನ್ನು ಮಾಡಲಾಗಿದ್ದು, ನಿರೀಕ್ಷೆಯಂತೆ ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ ( Virat Kohli and Rishabh Pant) ತಂಡಕ್ಕೆ ಮರಳುತ್ತಿದ್ದಾರೆ.
ಉತ್ತಮ ಪ್ರದರ್ಶನದ ಹೊರತಾಗಿಯೂ ಹೂಡಾ ಔಟ್
ಕಳೆದ ಕೆಲವು ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ದೀಪಕ್ ಹೂಡಾ ಈ ಪಂದ್ಯದಿಂದ ಹೊರಗುಳಿಯಬೇಕಾಯಿತು. ಏಕೆಂದರೆ ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಹೂಡಾ ಹೊರತಾಗಿ ಇಶಾನ್ ಕಿಶನ್ ಕೂಡ ಹೊರಗೆ ಕುಳಿತುಕೊಳ್ಳಬೇಕಾಗಿ ಬಂದಿದೆ.
ಬೌಲಿಂಗ್ನಲ್ಲಿ ಈ ಬದಲಾವಣೆ
ಮೊದಲ ಪಂದ್ಯದಿಂದ ಹೊರಗುಳಿದಿದ್ದ ಕೊಹ್ಲಿ ಮತ್ತು ಪಂತ್ ಹೊರತುಪಡಿಸಿ, ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಈ ಪಂದ್ಯದಲ್ಲಿ ಮರಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು ಮತ್ತು ಅದೇ ಸಂಭವಿಸಿದೆ. ಅಕ್ಷರ್ ಪಟೇಲ್ ಬದಲಿಗೆ ಜಡೇಜಾ ಅವರನ್ನು ಸೇರಿಸಿಕೊಳ್ಳಲಾಗಿದ್ದು, ಕಳೆದ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದ ಯುವ ವೇಗಿ ಅರ್ಷದೀಪ್ ಸಿಂಗ್ ಕೂಡ ಹೊರಗುಳಿಯಬೇಕಾಯಿತು.
ನಾವು ಇಂಗ್ಲೆಂಡ್ ಬಗ್ಗೆ ಮಾತನಾಡುವುದಾದರೆ, ಕಳೆದ ಪಂದ್ಯದಲ್ಲಿ ನಿಷ್ಪರಿಣಾಮಕಾರಿಯಾಗಿದ್ದ ರೀಸ್ ಟೋಪ್ಲಿ ಮತ್ತು ಟಿಮಲ್ ಮಿಲ್ಸ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅವರ ಸ್ಥಾನದಲ್ಲಿ 34 ವರ್ಷದ ರಿಚರ್ಡ್ ಗ್ಲೀಸನ್ ಮತ್ತು ಆಲ್ ರೌಂಡರ್ ಡೇವಿಡ್ ವಿಲ್ಲಿ ತಂಡಕ್ಕೆ ಬಂದಿದ್ದಾರೆ.
ಉಭಯ ತಂಡಗಳು ಹೀಗಿವೆ
ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್
ಇಂಗ್ಲೆಂಡ್: ಜೇಸನ್ ರಾಯ್, ಜೋಸ್ ಬಟ್ಲರ್ (ನಾಯಕ), ಡೇವಿಡ್ ಮಲನ್, ಲಿಯಾಮ್ ಲಿವಿಂಗ್‌ಸ್ಟೋನ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಸ್ಯಾಮ್ ಕರನ್, ಡೇವಿಡ್ ವಿಲ್ಲಿ, ಕ್ರಿಸ್ ಜೋರ್ಡಾನ್, ರಿಚರ್ಡ್ ಗ್ಲೀಸನ್, ಮ್ಯಾಥ್ಯೂ ಪಾರ್ಕಿನ್ಸನ್
Published On - 6:40 pm, Sat, 9 July 22