AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಇಂಗ್ಲೆಂಡ್ 2ನೇ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

India vs England: ಭಾರತ ಮತ್ತು ಇಂಗ್ಲೆಂಡ್ ನಡುವೆ ಒಟ್ಟು 8 ಪಂದ್ಯಗಳ ಸರಣಿ ನಡೆಯಲಿದೆ. ಇದೀಗ ಐದು ಮ್ಯಾಚ್​ಗಳ ಟಿ20 ಸರಣಿ ಆರಂಭವಾಗಿದ್ದು,  ಮೊದಲ ಮ್ಯಾಚ್ ಮಳೆಯಿಂದಾಗಿ ರದ್ದಾಗಿದೆ. ಇನ್ನು ದ್ವಿತೀಯ ಪಂದ್ಯಕ್ಕಾಗಿ ಉಭಯ ತಂಡಗಳು ಮ್ಯಾಂಚೆಸ್ಟರ್​ಗೆ ಪ್ರಯಾಣ ಬೆಳೆಸಲಿದ್ದಾರೆ.

ಭಾರತ vs ಇಂಗ್ಲೆಂಡ್ 2ನೇ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ
IND vs ENGImage Credit source: BCCI
ಝಾಹಿರ್ ಯೂಸುಫ್
|

Updated on: Jul 02, 2026 | 2:09 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ ಬಹುನಿರೀಕ್ಷಿತ ಟಿ20 ಸರಣಿ ಶುರುವಾಗಿದೆ. ಈ ಸರಣಿಯ ಮೊದಲ ಪಂದ್ಯವು ಮಳೆಗೆ ಆಹುತಿಯಾಗಿದ್ದು, ಹೀಗಾಗಿ ಅಭಿಮಾನಿಗಳು ದ್ವಿತೀಯ ಪಂದ್ಯಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈ ಪಂದ್ಯವು ಜುಲೈ 4 ರಂದು ಮ್ಯಾಂಚೆಸ್ಟರ್‌ನ ಐತಿಹಾಸಿಕ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ…

  • ಭಾರತ ಮತ್ತು ಇಂಗ್ಲೆಂಡ್​ ನಡುವಣ 2ನೇ ಟಿ20 ಪಂದ್ಯ ಶನಿವಾರ (ಜು.4) ನಡೆಯಲಿದೆ.
  • ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ 2ನೇ ಟಿ20 ಪಂದ್ಯ ಜರುಗಲಿದೆ.
  • ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7:00 ಗಂಟೆಗೆ ಶುರುವಾಗಲಿದೆ.
  • ಮೊದಲ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 10 ಗಂಟೆಗೆ ಆರಂಭವಾಗಿತ್ತು.
  • ದ್ವಿತೀಯ ಪಂದ್ಯವು ಇಂಗ್ಲೆಂಡ್​ನ ಕಾಲಮಾನ ಮಧ್ಯಾಹ್ನ 2:30 ಕ್ಕೆ ಶುರುವಾಗುವುದರಿಂದ ಭಾರತದಲ್ಲಿ 7 ಗಂಟೆಗೆ ಲೈವ್ ಇರಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಎಲ್ಲಾ ಪಂದ್ಯಗಳನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಜಿಯೋಹಾಟ್‌ಸ್ಟಾರ್​ನಲ್ಲಿ ಲೈವ್ ವೀಕ್ಷಿಸಬಹುದು.

  • ನೇರ ಪ್ರಸಾರ (ಟಿವಿ): ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್​ಗಳಲ್ಲಿ.
  • ಲೈವ್ ಸ್ಟ್ರೀಮಿಂಗ್ (ಡಿಜಿಟಲ್): ಜಿಯೋಹಾಟ್‌ಸ್ಟಾರ್ ಆ್ಯಪ್ ಮತ್ತು ವೆಬ್‌ಸೈಟ್.

ಆರಂಭದಲ್ಲೇ ಸಮಬಲ:

ಐದು ಮ್ಯಾಚ್​ಗಳ ಈ ಸರಣಿಯ ಮೊದಲ ಪಂದ್ಯವು ರದ್ದಾಗಿರುವ ಕಾರಣ ಸರಣಿ ಈಗ 0-0 ಅಂತರದಿಂದ ಸಮಬಲದಲ್ಲಿದೆ. ಅಂದರೆ ಈ ಸರಣಿ ಸೋಲನ್ನು ತಪ್ಪಿಸಿಕೊಳ್ಳಬೇಕಿದ್ದರೆ ಎರಡು ಗೆಲುವು ದಾಖಲಿಸಿದರೆ ಸಾಕು. ಹೀಗಾಗಿ ಉಭಯ ತಂಡಗಳು ದ್ವಿತೀಯ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ.

ಓಲ್ಡ್ ಟ್ರಾಫರ್ಡ್ ಪಿಚ್:

ಓಲ್ಡ್ ಟ್ರಾಫರ್ಡ್ ಮೈದಾನವು ಸಮತೋಲಿತ ಪಿಚ್ ಹೊಂದಿದೆ. ಇದಾಗ್ಯೂ ಆರಂಭದಲ್ಲಿ ವೇಗದ ಬೌಲರ್‌ಗಳಿಗೆ ಪಿಚ್ ನೆರವಾಗಲಿದ್ದು, ಪಂದ್ಯ ಮುಂದುವರಿದಂತೆ ಸ್ಪಿನ್ನರ್‌ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಬಹುದು.

ಮೊದಲ ಪಂದ್ಯ ಮಳೆಗೆ ಆಹುತಿಯಾಗಿದ್ದರಿಂದ, ಅಭಿಮಾನಿಗಳು ಈ ಪಂದ್ಯದಲ್ಲಾದರೂ ವರುಣದೇವ ಕೃಪೆ ತೋರಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಶನಿವಾರದ ಹವಾಮಾನ ಮುನ್ಸೂಚನೆ ಪ್ರಕಾರ ಪಂದ್ಯಕ್ಕೆ ಹೆಚ್ಚಿನ ಮಳೆಯ ಅಡ್ಡಿ ಇರುವುದಿಲ್ಲ ಎನ್ನಲಾಗಿದೆ. ಹೀಗಾಗಿ ಓಲ್ಡ್ ಟ್ರಾಫರ್ಡ್​ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸಬಹುದು.

ಉಭಯ ತಂಡಗಳು:

ಇಂಗ್ಲೆಂಡ್ ಟಿ20 ತಂಡ: ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಫಿಲ್ ಸಾಲ್ಟ್, ಜೋರ್ಡನ್ ಕಾಕ್ಸ್ (ವಿಕೆಟ್ ಕೀಪರ್), ಟಾಮ್ ಬ್ಯಾಂಟನ್, ಜೋಫ್ರಾ ಆರ್ಚರ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಜೇಕಬ್ ಬೆಥೆಲ್, ಜೇಮ್ಸ್ ಕೋಲ್ಸ್, ಆದಿಲ್ ರಶೀದ್, ರೆಹಾನ್ ಅಹ್ಮದ್, ಲಿಯಾಮ್ ಡಾಸನ್, ಸಾಕಿಬ್ ಮಹಮೂದ್, ಜೋಶ್ ಟಂಗ್, ಲ್ಯೂಕ್ ವುಡ್, ಸೋನಿ ಬೇಕರ್.

ಇದನ್ನೂ ಓದಿ: ಸೋಲಿನ ಬೆನ್ನಲ್ಲೇ ಅಪ್ಪಳಿಸಿದ ತಂದೆಯ ನಿಧನದ ಸುದ್ದಿ..!

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ, ಸೂರ್ಯಂಶ್ ಶೆಡ್ಗೆ.

Follow Us
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು