IND vs ENG: ಎಡ್ಜ್‌ಬಾಸ್ಟನ್‌ನಲ್ಲಿ ಸೋಲೇ ಕಾಣದ ಇಂಗ್ಲೆಂಡ್​ಗೆ ಭಾರತ ಎದುರಾಳಿ; ಉಭಯ ತಂಡಗಳ ಸಂಭಾವ್ಯ XI

IND vs ENG: 2014ರಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 66 ರನ್ ಗಳಿಸಿದ್ದರು. ಆದರೆ ಈ ಪಂದ್ಯವನ್ನು ಭಾರತ ಗೆಲ್ಲಲಿಲ್ಲ. ಈ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ 3 ರನ್‌ಗಳ ಜಯ ಸಾಧಿಸಿತ್ತು.

IND vs ENG: ಎಡ್ಜ್‌ಬಾಸ್ಟನ್‌ನಲ್ಲಿ ಸೋಲೇ ಕಾಣದ ಇಂಗ್ಲೆಂಡ್​ಗೆ ಭಾರತ ಎದುರಾಳಿ; ಉಭಯ ತಂಡಗಳ ಸಂಭಾವ್ಯ XI
IND vs ENG
Follow us
TV9 Web
| Updated By: ಪೃಥ್ವಿಶಂಕರ

Updated on:Jul 09, 2022 | 4:24 PM

ಭಾರತ ಮತ್ತು ಇಂಗ್ಲೆಂಡ್ (India and England) ನಡುವಿನ ಎರಡನೇ ಟಿ20 ಪಂದ್ಯ ಇಂದು ಎಜ್‌ಬಾಸ್ಟನ್‌ನಲ್ಲಿ ನಡೆಯಲಿದೆ. ಪಂದ್ಯವು ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ 7 ಗಂಟೆಗೆ ಆರಂಭವಾಗಲಿದೆ. ವಾಸ್ತವವಾಗಿ, ಭಾರತ ಮತ್ತು ಇಂಗ್ಲೆಂಡ್ ನಡುವಿನ 3 ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ತಂಡ ಸೋಲು ಅನುಭವಿಸಬೇಕಾಯಿತು. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್ ಮತ್ತು ವಿರಾಟ್ ಕೊಹ್ಲಿಯಂತಹ (Jasprit Bumrah, Rishabh Pant and Virat Kohli) ಹಿರಿಯ ಆಟಗಾರರು ಭಾರತ ತಂಡಕ್ಕೆ ಮರಳಲಿದ್ದಾರೆ. ಸೌತಾಂಪ್ಟನ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸೇರಿದಂತೆ ಮೂವರು ಆಟಗಾರರು ಟೀಂ ಇಂಡಿಯಾದ ಭಾಗವಾಗಿರಲಿಲ್ಲ. ಆದರೆ, ಇಂಗ್ಲೆಂಡ್ ವಿರುದ್ಧ ಭಾರತ 50 ರನ್‌ಗಳ ಭರ್ಜರಿ ಜಯ ಸಾಧಿಸಿತು.

ಭಾರತ ತಂಡಕ್ಕೆ ಸರಣಿ ಗೆಲ್ಲುವ ಅವಕಾಶ

ಭಾರತ ತಂಡ ಎರಡನೇ ಟಿ20ಯಲ್ಲಿ ಗೆದ್ದರೆ ಸರಣಿ ರೋಹಿತ್ ಸೇನೆಯ ಹಿಡಿತದಲ್ಲಿರುತ್ತದೆ. ಅದೇ ವೇಳೆ ಇದಕ್ಕೆ ಪೂರಕವೆಂಬಂತೆ ಇಂಗ್ಲೆಂಡ್ ವಿರುದ್ಧದ ಟಿ20ಯಲ್ಲಿ ಟೀಂ ಇಂಡಿಯಾ ದಾಖಲೆ ಉತ್ತಮವಾಗಿದೆ. ಉಭಯ ತಂಡಗಳ ನಡುವೆ ಇದುವರೆಗೆ 20 ಟಿ20 ಪಂದ್ಯಗಳು ನಡೆದಿದ್ದು, ಈ ಪೈಕಿ ಭಾರತ ತಂಡ 11 ಪಂದ್ಯಗಳನ್ನು ಗೆದ್ದಿದೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ಇಲ್ಲಿಯವರೆಗೆ 1 ಟಿ20 ಪಂದ್ಯ ಎಡ್ಜ್‌ಬಾಸ್ಟನ್‌ನಲ್ಲಿ ನಡೆದಿದೆ. 2014ರಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಈ ಟಿ20 ಪಂದ್ಯ ನಡೆದಿತ್ತು.

ಇಂಗ್ಲೆಂಡ್ ಇದುವರೆಗೆ ಎಡ್ಜ್‌ಬಾಸ್ಟನ್‌ನಲ್ಲಿ ಟಿ20 ಸೋತಿಲ್ಲ

2014ರಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 66 ರನ್ ಗಳಿಸಿದ್ದರು. ಆದರೆ ಈ ಪಂದ್ಯವನ್ನು ಭಾರತ ಗೆಲ್ಲಲಿಲ್ಲ. ಈ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ 3 ರನ್‌ಗಳ ಜಯ ಸಾಧಿಸಿತ್ತು. ಏತನ್ಮಧ್ಯೆ, ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್‌ನ ದಾಖಲೆ ಅತ್ಯುತ್ತಮವಾಗಿದೆ. ಈ ಮೈದಾನದಲ್ಲಿ ಇಂಗ್ಲೆಂಡ್ ತಂಡ ಇದುವರೆಗೆ 3 ಟಿ20 ಪಂದ್ಯಗಳನ್ನು ಆಡಿದ್ದು, ಆತಿಥೇಯ ತಂಡ ಮೂರೂ ಪಂದ್ಯಗಳನ್ನು ಗೆದ್ದಿದೆ. ಹೀಗಾಗಿ, ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್‌ನ ದಾಖಲೆ ಅತ್ಯುತ್ತಮವಾಗಿದೆ.

ಎರಡೂ ತಂಡಗಳ ಆಡುವ XI ಹೀಗಿರಬಹುದು..

ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ರಿಷಬ್ ಪಂತ್, ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಭಾರತ ತಂಡದಲ್ಲಿ ಲಭ್ಯವಿರುತ್ತಾರೆ. ಇಂತಹ ಸಂದರ್ಭಗಳಲ್ಲಿ ಆಡುವ ಹನ್ನೊಂದರ ಆಯ್ಕೆ ತಂಡದ ನಿರ್ವಹಣೆಗೆ ತುಂಬಾ ಕಷ್ಟಕರವಾಗಿದೆ. ಏಕೆಂದರೆ ಈ ದಿಗ್ಗಜರಿಲ್ಲದಿದ್ದರೂ ಭಾರತ ತಂಡ ಟಿ20 ಸರಣಿಯ ಮೊದಲ ಪಂದ್ಯ ಗೆದ್ದಿತ್ತು. ಮತ್ತೊಂದೆಡೆ, ಇಂಗ್ಲೆಂಡ್ ಆಡುವ XI ಗೆ ಒಂದು ಅಥವಾ ಎರಡು ಬದಲಾವಣೆಗಳನ್ನು ಮಾಡಬಹುದು.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್/ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ.

ಇಂಗ್ಲೆಂಡ್: ಜೇಸನ್ ರಾಯ್, ಜೋಸ್ ಬಟ್ಲರ್ (ನಾಯಕ), ಡೇವಿಡ್ ಮಲಾನ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ಡೇವಿಡ್ ವಿಲ್ಲಿ, ಮ್ಯಾಥ್ಯೂ ಪಾರ್ಕಿನ್ಸನ್, ರಿಚರ್ಡ್ ಗ್ಲೀಸನ್

Published On - 4:24 pm, Sat, 9 July 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು