ಇಂದು IND vs ENG ನಡುವಣ 2ನೇ ಟಿ20 ಪಂದ್ಯ: ಎಷ್ಟು ಗಂಟೆಗೆ ಶುರು?

|

Updated on: Jan 25, 2025 | 7:14 AM

India vs England T20I: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಸರಣಿಯ ಮೊದಲ ಮ್ಯಾಚ್​​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ 132 ರನ್​ಗಳಿಸಿದರೆ, ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 12.5 ಓವರ್​​ಗಳಲ್ಲಿ ಚೇಸ್ ಮಾಡಿ ಭರ್ಜರಿ ಗೆಲುವು ದಾಖಲಿಸಿತು.

ಇಂದು IND vs ENG ನಡುವಣ 2ನೇ ಟಿ20 ಪಂದ್ಯ: ಎಷ್ಟು ಗಂಟೆಗೆ ಶುರು?
Ind Vs Eng
Follow us on

ಭಾರತ ಮತ್ತು ಇಂಗ್ಲೆಂಡ್ ನಡುವಣ ದ್ವಿತೀಯ ಟಿ20 ಪಂದ್ಯವು ಇಂದು ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ಇರಾದೆಯಲ್ಲಿದೆ ಇಂಗ್ಲೆಂಡ್. ಇದಕ್ಕೂ ಮುನ್ನ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್​​ಗಳ ಜಯ ಸಾಧಿಸಿತ್ತು.

ಇದೀಗ ಸರಣಿಯಲ್ಲಿ ಸಮಬಲ ಸಾಧಿಸಬೇಕಿದ್ದರೆ ಇಂಗ್ಲೆಂಡ್ ತಂಡವು ಇಂದಿನಿಂದ ಪಂದ್ಯದಲ್ಲಿ ಗೆಲುವು ದಾಖಲಿಸಬೇಕು. ಅತ್ತ ಟೀಮ್ ಇಂಡಿಯಾ ಈ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ 5 ಪಂದ್ಯಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸುವ ವಿಶ್ವಾಸದಲ್ಲಿದೆ.

ಭಾರತ vs ಇಂಗ್ಲೆಂಡ್ 2ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಶುರು?

ಐದು ಪಂದ್ಯಗಳ ಟಿ20 ಸರಣಿಯ 2ನೇ ಮ್ಯಾಚ್​​ ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿದೆ. ಇದಕ್ಕೂ ಮುನ್ನ ರಾತ್ರಿ 6.30 ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಭಾರತ vs ಇಂಗ್ಲೆಂಡ್ ಸರಣಿ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದೆ. ಹಾಗೆಯೇ ಡಿಸ್ನಿ ಹಾಟ್ ಸ್ಟಾರ್ ಆ್ಯಪ್ ಹಾಗೂ ವೆಬ್​ಸೈಟ್​ಗಳಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪಾನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್).

ಇದನ್ನೂ ಓದಿ: ಸಿಕ್ಸ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಕೀರನ್ ಪೊಲಾರ್ಡ್ ವಿಶ್ವ ದಾಖಲೆ

ಇಂಗ್ಲೆಂಡ್ ಟಿ20 ತಂಡ: ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್ (ಉಪನಾಯಕ), ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್​ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.