KL Rahul: ಕೆಎಲ್ ರಾಹುಲ್​ ಮೇಲೆ ಪ್ರೇಕ್ಷಕರಿಂದ ಬಾಟಲ್ ಕಾರ್ಕ್ ದಾಳಿ: ತಿರುಗಿಸಿ ಹೊಡಿ ಎಂದ ಕಿಂಗ್ ಕೊಹ್ಲಿ

India vs England 2nd Test: ಈ ಹಿಂದೆ ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳೆ ಮೊಹಮ್ಮದ್ ಸಿರಾಜ್ ಹಾಗೂ ವಾಷಿಂಗ್ಟನ್ ಸುಂದರ್ ಅವರು ಆಸೀಸ್ ಪ್ರೇಕ್ಷಕರ ಜನಾಂಗೀಯ ನಿಂದನೆಗೆ ಗುರಿಯಾಗಿದ್ದರು.

KL Rahul: ಕೆಎಲ್ ರಾಹುಲ್​ ಮೇಲೆ ಪ್ರೇಕ್ಷಕರಿಂದ ಬಾಟಲ್ ಕಾರ್ಕ್ ದಾಳಿ: ತಿರುಗಿಸಿ ಹೊಡಿ ಎಂದ ಕಿಂಗ್ ಕೊಹ್ಲಿ
KL Rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 14, 2021 | 7:31 PM

ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ (India vs England 2nd Test) ನಡುವಣ 2ನೇ ಟೆಸ್ಟ್ ಪಂದ್ಯದ ವೇಳೆ ಅಹಿತಕರ ಘಟನೆ ನಡೆದಿದೆ. ಪಂದ್ಯದ ಮೂರನೇ ದಿನದಾಟದ ವೇಳೆ ಪ್ರೇಕ್ಷಕರು ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ (KL Rahul) ಅವರ ಮೇಲೆ ಶಾಂಪೇನ್ ಮುಚ್ಚಳ ಹಾಗೂ ಇನ್ನಿತರ ವಸ್ತುಗಳನ್ನು ಎಸೆದಿದ್ದಾರೆ. ರಾಹುಲ್​ ಬೌಂಡರಿ ಲೈನ್ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಇದೀಗ ಇಂಗ್ಲೆಂಡ್ ಪ್ರೇಕ್ಷಕರು ಟೀಮ್ ಇಂಡಿಯಾ ಆಟಗಾರನ ಮೇಲೆ ಎಸೆದ ಬಾಟಲ್ ಕಾರ್ಕ್ (ಶಾಂಪೇನ್ ಬಾಟಲ್ ಮುಚ್ಚಳ)​ ಹಾಗೂ ಇನ್ನಿತರ ವಸ್ತುಗಳ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪಂದ್ಯದ 69ನೇ ಓವರ್‌ನಲ್ಲಿ ಇಂಗ್ಲೆಂಡ್ ನಾಯಕ ಜೋ ರೂಟ್ ಮತ್ತು ಜಾನಿ ಬೈರ್‌ಸ್ಟೊ ಬ್ಯಾಟಿಂಗ್ ಮಾಡುತ್ತಿದ್ದ ಈ ಘಟನೆ ಸಂಭವಿಸಿದೆ. ಈ ವೇಳೆ ಮೊಹಮ್ಮದ್ ಶಮಿ ಬೌಲಿಂಗ್ ಮಾಡುತ್ತಿದ್ದರು. ಅತ್ತ ಬೌಂಡರಿ ಲೈನ್​ನಲ್ಲಿ ರಾಹುಲ್ ಫೀಲ್ಡಿಂಗ್​ನಲ್ಲಿದ್ದರು. ಈ ವೇಳೆ ಪ್ರೇಕ್ಷಕರ ಸ್ಟ್ಯಾಂಡ್‌ನಿಂದ ಇಂಗ್ಲೆಂಡ್​ ಪ್ರೇಕ್ಷಕರು ರಾಹುಲ್ ಮೇಲೆ ಶಾಂಪೇನ್ ಕಾರ್ಕ್ಸ್ ಎಸೆದರು. ಆರಂಭದಲ್ಲಿ ರಾಹುಲ್ ಅದರ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ಸತತವಾಗಿ ದಾಳಿಯಾಗುತ್ತಿದ್ದಂತೆ ಟೀಮ್ ಇಂಡಿಯಾ ಇತರೆ ಆಟಗಾರರು ಈ ದಾಳಿಯನ್ನು ಗಮನಿಸಿದರು.

ಅದರಲ್ಲೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ತಿರುಗಿ ಹೊಡೆಯುವಂತೆ ಕೆಎಲ್ ರಾಹುಲ್​ಗೆ ಸನ್ನೆ ಮಾಡುತ್ತಿರುವುದು ಕಂಡು ಬಂತು. ಆ ಬಳಿಕ ಟೀಮ್ ಇಂಡಿಯಾ ಆಟಗಾರರು ಫೀಲ್ಡ್ ಅಂಪೈರ್​ಗಳಾದ ಮೈಕೆಲ್ ಗೌಗ್ ಮತ್ತು ರಿಚರ್ಡ್ ಇಲ್ಲಿಂಗ್‌ವರ್ತ್ ಅವರಿಗೆ ದೂರ ನೀಡಿದರು.

ಇದೀಗ ಇಂಗ್ಲೆಂಡ್ ಪ್ರೇಕ್ಷಕರ ದುರ್ವತನೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ಕೆಎಲ್ ರಾಹುಲ್ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ 129 ರನ್​ ಬಾರಿಸಿರುವುದೇ ಇಂಗ್ಲೆಂಡ್ ಅಭಿಮಾನಿಗಳ ಹತಾಶೆಗೆ ಕಾರಣ ಎನ್ನಲಾಗುತ್ತಿದೆ. ಈ ಹಿಂದೆ ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳೆ ಮೊಹಮ್ಮದ್ ಸಿರಾಜ್ ಹಾಗೂ ವಾಷಿಂಗ್ಟನ್ ಸುಂದರ್ ಅವರು ಆಸೀಸ್ ಪ್ರೇಕ್ಷಕರ ಜನಾಂಗೀಯ ನಿಂದನೆಗೆ ಗುರಿಯಾಗಿದ್ದರು. ಇದೀಗ ಮತ್ತೊಮ್ಮೆ ಟೀಮ್ ಇಂಡಿಯಾ ಆಟಗಾರರು ಪ್ರೇಕ್ಷಕರ ದುರ್ವತನೆಗೆ ಗುರಿಯಾಗಿದ್ದಾರೆ. ಒಟ್ಟಿನಲ್ಲಿ ಜಂಟಲ್​ಮ್ಯಾನ್ ಗೇಮ್ ಎನಿಸಿಕೊಂಡಿರುವ ಕ್ರಿಕೆಟ್ ಅಂಗಳದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಮಾತ್ರ ಖೇದಕರ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್: ಟೀಮ್ ಇಂಡಿಯಾ- ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್

ಇಂಗ್ಲೆಂಡ್ – ರೋರಿ ಬರ್ನ್ಸ್, ಡೊಮ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್, ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್, ಮೊಯೀನ್ ಅಲಿ, ಸ್ಯಾಮ್ ಕರನ್, ಓಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಅಂಡರ್ಸನ್

ಇದನ್ನೂ ಓದಿ: Health Tips: ಹಲವು ಅನಾರೋಗ್ಯ ಸಮಸ್ಯೆಗಳಿಗೆ ಪಪ್ಪಾಯಿ ಎಲೆಗಳೇ ಔಷಧಿ

ಇದನ್ನೂ ಓದಿ: ಇವರ ಬ್ಯಾಟಿಂಗ್ ಮುಂದೆ, ಗೇಲ್-ಎಬಿಡಿ-ಸೆಹ್ವಾಗ್ ಏನೂ ಅಲ್ಲ: ವಿಶ್ವದ ಅತೀ ವೇಗದ ಶತಕದ ಸರದಾರ

ಇದನ್ನೂ ಓದಿ: Kl Rahul: ಪೂಜಾರ, ರಹಾನೆ ಕಳಪೆ ಫಾರ್ಮ್​ ಬಗ್ಗೆ ಕೆಎಲ್ ರಾಹುಲ್ ಹೇಳಿದ್ದೇನು?

(India vs England 2nd Test: Bottle corks hurled at KL Rahul by crowd at Lord’s)

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ