IND vs ENG: ಭಾರತ-ಇಂಗ್ಲೆಂಡ್ 2ನೇ ಟೆಸ್ಟ್ ಯಾವಾಗ ಶುರು? ಇಲ್ಲಿದೆ ಮಾಹಿತಿ

| Updated By: ಝಾಹಿರ್ ಯೂಸುಫ್

Updated on: Jan 29, 2024 | 2:07 PM

India vs England: ಮೊದಲ ಟೆಸ್ಟ್ ಪಂದ್ಯದಲ್ಲಿ ಗೆದ್ದು ಬೀಗಿರುವ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯದ ಮೂಲಕ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಐದು ಪಂದ್ಯಗಳ ಸರಣಿಯ ಈ ಪಂದ್ಯವು ಶುಕ್ರವಾರದಿಂದ ಶುರುವಾಗಲಿದೆ.

IND vs ENG: ಭಾರತ-ಇಂಗ್ಲೆಂಡ್ 2ನೇ ಟೆಸ್ಟ್ ಯಾವಾಗ ಶುರು? ಇಲ್ಲಿದೆ ಮಾಹಿತಿ
India vs England
Follow us on

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಮೊದಲ ಟೆಸ್ಟ್ ಪಂದ್ಯ ಮುಕ್ತಾಯಗೊಂ ಡಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 28 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಆಂಗ್ಲರು 1-0 ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಇನ್ನು ಸರಣಿಯಲ್ಲಿ ಸಮಬಲ ಸಾಧಿಸಬೇಕಿದ್ದರೆ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲೇಬೇಕು.

ಫೆಬ್ರವರಿ 2 ರಿಂದ ಎರಡನೇ ಟೆಸ್ಟ್ ಪಂದ್ಯ ಶುರುವಾಗಲಿದ್ದು, ಈ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿ ಡಾ. ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅಂದರೆ ದ್ವಿತೀಯ ಟೆಸ್ಟ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರಿಗೆ ವಿಶ್ರಾಂತಿ ಸಿಗಲಿದೆ. ಅಲ್ಲದೆ ಜನವರಿ 31 ಅಥವಾ ಫೆಬ್ರವರಿ 1 ರಿಂದ ಭಾರತೀಯ ಆಟಗಾರರು ದ್ವಿತೀಯ ಟೆಸ್ಟ್​ಗೆ ಅಭ್ಯಾಸ ಶುರು ಮಾಡುವ ಸಾಧ್ಯತೆಯಿದೆ.

ವಿರಾಟ್ ಕೊಹ್ಲಿ ಅಲಭ್ಯ:

ಇನ್ನು ಎರಡನೇ ಟೆಸ್ಟ್ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ.  ವೈಯುಕ್ತಿಕ ಕಾರಣಗಳಿಂದಾಗಿ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಕಿಂಗ್ ಕೊಹ್ಲಿ ಹೊರಗುಳಿದಿದ್ದಾರೆ. ಹೀಗಾಗಿ ದ್ವಿತೀಯ ಟೆಸ್ಟ್​ನಲ್ಲೂ ಟೀಮ್ ಇಂಡಿಯಾ ಪರ ಶ್ರೇಯಸ್ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:

  • ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
  • ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್​ಕೋಟ್)
  • ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
  • ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

ಇದನ್ನೂ ಓದಿ: Virat Kohli: ಅದ್ಭುತ ಫೀಲ್ಡಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ ವಿರಾಟ್ ಕೊಹ್ಲಿ

ಭಾರತ ಟೆಸ್ಟ್ ತಂಡ (2ನೇ ಟೆಸ್ಟ್​ಗೆ): ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ರಜತ್ ಪಾಟಿದಾರ್, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.

 

Published On - 6:50 am, Mon, 29 January 24