IND vs ENG: ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾದಲ್ಲಿ 3 ಬದಲಾವಣೆ
India vs England 2nd Test: ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಮೊದಲ ಪಂದ್ಯದ ಸೋಲಿನಿಂದ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಇಂಗ್ಲೆಂಡ್ ತನ್ನ ಗೆಲುವಿನ ಸರಣಿಯನ್ನು ಮುಂದುವರಿಸಲು ಬಯಸುತ್ತದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿದೆ. ಎರಡೂ ತಂಡಗಳ ಆಡುವ ಬಳಗವೂ ಕೂಡ ಪ್ರಕಟವಾಗಿದೆ.

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಎರಡನೇ ಟೆಸ್ಟ್ ಪಂದ್ಯ ಎಡ್ಜ್‌ಬಾಸ್ಟನ್‌ನಲ್ಲಿ (Edgbaston) ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಸೋತಿರುವ ಟೀಂ ಇಂಡಿಯಾ ಇದೀಗ ಎರಡನೇ ಟೆಸ್ಟ್ ಗೆದ್ದು ಸರಣಿಯನ್ನು ಸಮಬಲಗೊಳಿಸಲು ಎದುರು ನೋಡುತ್ತಿದೆ. ಇತ್ತ ಆತಿಥೇಯ ಇಂಗ್ಲೆಂಡ್ ಕೂಡ ತನ್ನ ಗೆಲುವಿನ ಓಟವನ್ನು ಮುಂದುವರೆಸಲು ನೋಡುತ್ತಿದೆ. ಆದಾಗ್ಯೂ ಈ ಮೈದಾನದಲ್ಲಿ ಟೀಂ ಇಂಡಿಯಾದ (Team India) ಪ್ರದರ್ಶನ ತೀರ ಕಳಪೆಯಾಗಿದೆ. ಇಲ್ಲಿ ಭಾರತ ತಂಡಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಶುಭ್ಮನ್ ಗಿಲ್ ಪಡೆ ಈ ಪಂದ್ಯವನ್ನು ಗೆದ್ದು ಈ ಮೈದಾನದಲ್ಲಿ ಗೆಲುವಿನ ಖಾತೆ ತೆರೆಯಲು ಬಯಸುತ್ತಿದೆ. ಇನ್ನು ಈ ಪಂದ್ಯದ ಟಾಸ್ ನಡೆದಿದ್ದು ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಮಾಡಲು ನಿರ್ಧರಿಸಿದೆ. ಇದರೊಂದಿಗೆ ತಂಡದ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.
ಭಾರತ ತಂಡದಲ್ಲಿ 3 ಬದಲಾವಣೆ
ಮೇಲೆ ಹೇಳಿಂದತೆ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಇಂಗ್ಲೆಂಡ್ ತಂಡ ಈಗಾಗಲೇ ತನ್ನ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದರಿಂದ ತನ್ನ ಪ್ಲೇಯಿಂಗ್-11 ರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಅಂದರೆ ಲೀಡ್ಸ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ್ದ ಅದೇ 11 ಆಟಗಾರರು ಕಣಕ್ಕಿಳಿಯಲಿದ್ದಾರೆ. ಇತ್ತ ಟಾಸ್ ಸೋತು ಮಾತನಾಡಿದ ನಾಯಕ ಶುಭ್ಮನ್ ಗಿಲ್ ಕೂಡ ಟಾಸ್ ಗೆದ್ದಿದ್ದರೆ ಮೊದಲು ಬೌಲಿಂಗ್ ಮಾಡುತ್ತಿದ್ದಾಗಿ ಹೇಳಿದರು. ಆ ಬಳಿಕ ಪ್ಲೇಯಿಂಗ್-11 ಬಗ್ಗೆ ಮಾತನಾಡಿದ ಗಿಲ್, ತಂಡದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದ್ದು, ಶಾರ್ದೂಲ್ ಠಾಕೂರ್ ಬದಲಿಗೆ ನಿತೀಶ್ ಕುಮಾರ್ ಮತ್ತು ಬುಮ್ರಾ ಬದಲಿಗೆ ಆಕಾಶ್ ದೀಪ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದರ ಹೊರತಾಗಿ, ವಾಷಿಂಗ್ಟನ್ ಸುಂದರ್ ಕೂಡ ಸಾಯಿ ಸುದರ್ಶನ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿರುವುದಾಗಿ ತಿಳಿಸಿದರು.
🚨 Toss and Team Update 🚨
England win the toss and elect to bowl in the 2nd Test in Edgbaston.
Three changes for #TeamIndia
Updates ▶️ https://t.co/Oxhg97g4BF#ENGvIND pic.twitter.com/fGmkOLai7x
— BCCI (@BCCI) July 2, 2025
ಉಭಯ ತಂಡಗಳು
ಭಾರತ ತಂಡ; ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಕರುಣ್ ನಾಯರ್, ಕೆಎಲ್ ರಾಹುಲ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್
ಇಂಗ್ಲೆಂಡ್ ತಂಡ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್, ಶೋಯೆಬ್ ಬಶೀರ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:04 pm, Wed, 2 July 25
