IND vs ENG 2nd Test: ಭಾರತ-ಇಂಗ್ಲೆಂಡ್ 2ನೇ ಟೆಸ್ಟ್ ಪಂದ್ಯ ಎಲ್ಲಿ?, ಯಾವುದರಲ್ಲಿ ನೇರಪ್ರಸಾರ?, ಎಷ್ಟು ಗಂಟೆಗೆ?, ಇಲ್ಲಿದೆ ಮಾಹಿತಿ
IND vs ENG 2nd Test: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಟೆಸ್ಟ್ ಪಂದ್ಯಗಳಲ್ಲಿ ಎರಡನೇ ಪಂದ್ಯ ಆಗಸ್ಟ್ 12, ಗುರುವಾರದಿಂದ ಲಾರ್ಡ್ಸ್ ಮೈದಾನದಲ್ಲಿ ಆರಂಭವಾಗಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಟೆಸ್ಟ್ ಪಂದ್ಯಗಳಲ್ಲಿ ಎರಡನೇ ಪಂದ್ಯ ಆಗಸ್ಟ್ 12, ಗುರುವಾರದಿಂದ ಲಾರ್ಡ್ಸ್ ಮೈದಾನದಲ್ಲಿ ಆರಂಭವಾಗಲಿದೆ. ನಾಟಿಂಗ್‌ಹ್ಯಾಮ್ ಟೆಸ್ಟ್‌ನ ಐದನೇ ಮತ್ತು ಕೊನೆಯ ದಿನವಾದ ಭಾನುವಾರ ಎಡೆಬಿಡದೆ ಸುರಿದ ಮಳೆಯಿಂದಾಗಿ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು. ಸರಣಿಯು 0-0 ಅಂತರದಲ್ಲಿರುವುದರಿಂದ ಉಭಯ ತಂಡಗಳು ತಲಾ ನಾಲ್ಕು ಪಾಯಿಂಟ್‌ಗಳನ್ನು ಹಂಚಿಕೊಂಡವು. ಹೀಗಾಗಿ ಲಾರ್ಡ್ಸ್ ಮೈದಾನಲ್ಲಿ ನಡೆಯುವ 2ನೇ ಟೆಸ್ಟ್ ಪಂದ್ಯ ಗೆದ್ದು ಸರಣಿಯಲ್ಲಿ ಮೇಲುಗೈ ಸಾಧಿಸಲು ಉಭಯ ತಂಡಗಳು ಶತಪ್ರಯತ್ನ ನಡೆಸಲಿವೆ.
ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 65.4 ಓವರ್ನಲ್ಲಿ 183 ರನ್ಗೆ ಆಲೌಟ್ ಆಯಿತು. ಭಾರತ ಕೆ. ಎಲ್ ರಾಹುಲ್ ಅವರ 84 ಹಾಗೂ ರವೀಂದ್ರ ಜಡೇಜಾ ಅವರ 56 ರನ್ಗಳ ನೆರವಿನಿಂದ 278 ರನ್ ಬಾರಿಸಿತು. 95 ರನ್ಗಳ ಹಿನ್ನಡಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ಗೆ ನಾಯಕ ರೂಟ್ ಶತಕ ಸಿಡಿಸಿ ಮತ್ತೆ ತಂಡಕ್ಕೆ ಆಸರೆಯಾದರು. 172 ಎಸೆತಗಳಲ್ಲಿ 109 ರನ್ ಗಳಿಸಿದ ರೂಟ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಇಂಗ್ಲೆಂಡ್ 303 ರನ್ ಗಳಿಸಿ ಭಾರತಕ್ಕೆ 209 ರನ್ಗಳ ಟಾರ್ಗೆಟ್ ನೀಡಿತು.
ಈ ಗುರಿ ಬೆನ್ನಟ್ಟಿದ ಭಾರತ ನಾಲ್ಕನೆ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 52 ರನ್ ಗಳಿಸಿತ್ತು. ರೋಹಿತ್ ಶರ್ಮಾ ಹಾಗೂ ಚೇತೇಶ್ವರ್ ಪೂಜಾರ ತಲಾ 12 ರನ್ ಗಳಿಸಿ ಅಂತಿಮ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು. ಭಾರತದ ಗೆಲುವಿಗೆ 157 ರನ್ಗಳ ಅವಶ್ಯಕತೆಯಿತ್ತು. ಆದರೆ, ಎಡಬಿಡದೆ ಸುರಿದ ಮಳೆಯು ಮೊದಲ ಟೆಸ್ಟ್ ನಲ್ಲಿ ಭಾರತದ ಕೈಯಿಂದ ಗೆಲುವನ್ನು ಕಸಿದುಕೊಂಡಿತು. ಒಂದೂ ಎಸೆತ ಕಾಣದೆ ರದ್ದಾದ ಕಾರಣ ಉಭಯ ತಂಡಗಳು ತಲಾ 4 ಅಂಕವನ್ನು ಹಂಚಿಕೊಂಡಿವೆ. ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 12ಕ್ಕೆ ಆರಂಭವಾಗಲಿದ್ದು ಆಗಸ್ಟ್ 16ರ ವರೆಗೆ ನಡೆಯಲಿದೆ.
ಮೊದಲ ಟೆಸ್ಟ್ ಮಳೆಯಿಂದಾಗಿ ಡ್ರಾನಲ್ಲಿ ಅಂತ್ಯಕಂಡಿತಾದರೂ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದರು. ನಾಲ್ಕು ವೇಗದ ಬೌಲರ್ಗಳು ಹಾಗೂ ಏಕೈಕ ಸ್ಪಿನ್ನರ್ ಅನ್ನು ಕೊಹ್ಲಿ ಕಣಕ್ಕಿಳಿಸಿದ್ದರು. ಇದರ ನಡುವೆ ಅನುಭವಿ ರವಿಚಂದ್ರನ್ ಅಶ್ವಿನ್ ಅವರನ್ನು ಆಡಿಸದ ಬಗ್ಗೆ ಸಾಕಷ್ಟು ಮಾತುಗಳು ಕೇಳಿಬಂದಿದ್ದವು.
2ನೇ ಟೆಸ್ಟ್ ಪಂದ್ಯದ ಸಂಪೂರ್ಣ ವಿವರ ಹೀಗಿದೆ.. ಭಾರತ vs ಇಂಗ್ಲೆಂಡ್ 2 ನೇ ಟೆಸ್ಟ್ ಯಾವಾಗ ಆರಂಭವಾಗುತ್ತದೆ? ಭಾರತ vs ಇಂಗ್ಲೆಂಡ್ 2 ನೇ ಟೆಸ್ಟ್ ಆಗಸ್ಟ್ 12 ರಂದು ಆರಂಭವಾಗಲಿದೆ
ಭಾರತ vs ಇಂಗ್ಲೆಂಡ್ ಟೆಸ್ಟ್ ಸರಣಿಯ ಪಂದ್ಯಗಳು ಯಾವ ಸಮಯದಲ್ಲಿ ಆರಂಭವಾಗುತ್ತವೆ? ಟೆಸ್ಟ್ ಸರಣಿಯ 2ನೇ ಪಂದ್ಯವು ಭಾರತದ ಕಾಲಮಾನ ಮಧ್ಯಾಹ್ನ 3:30 ಕ್ಕೆ ಆರಂಭವಾಗಲಿದೆ
ಭಾರತ vs ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ನಡೆಯುವ ಸ್ಥಳ ಯಾವುದು? ಟೆಸ್ಟ್ ಸರಣಿಯ 2ನೇ ಪಂದ್ಯವು ಇಂಗ್ಲೆಂಡ್ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ
ಭಾರತ vs ಇಂಗ್ಲೆಂಡ್ ಟೆಸ್ಟ್ ಸರಣಿಯ ನೇರ ಪ್ರಸಾರವನ್ನು ಯಾವ ಚಾನೆಲ್ನಲ್ಲಿ ವೀಕ್ಷಿಸಬಹುದು? ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಯ ಲೈವ್ ಬ್ರಾಡ್‌ಕಾಸ್ಟ್ ಮತ್ತು ಲೈವ್ ಸ್ಟ್ರೀಮಿಂಗ್ ಅನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ನೇರ ಪ್ರಸಾರ ಮಾಡುತ್ತಿದೆ ಮತ್ತು ಸೋನಿಲೈವ್ ಸರಣಿಯನ್ನು ನೇರ ಪ್ರಸಾರ ಮಾಡುತ್ತದೆ. ಸೋನಿ ಸಿಕ್ಸ್, ಸೋನಿ ಟೆನ್ 3 ಮತ್ತು ಸೋನಿ ಟೆನ್ ನಲ್ಲಿ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
ಭಾರತದ ಸಂಭಾವ್ಯ ಪ್ಲೇಯಿಂಗ್ 11 ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ
ಇಂಗ್ಲೆಂಡ್ ಸಂಭಾವ್ಯ ಪ್ಲೇಯಿಂಗ್ 11 ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಢಾಕ್ ಕ್ರಾವ್ಲಿ, ಜೋ ರೂಟ್ (ನಾಯಕ), ಜಾನಿ ಬೈರ್‌ಸ್ಟೊ, ಡೇನಿಯಲ್ ಲಾರೆನ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕುರ್ರನ್, ಒಲ್ಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
ಇದನ್ನೂ ಓದಿ:India vs England: 2ನೇ ಟೆಸ್ಟ್ಗೂ ಮುನ್ನ ಭಾರತ-ಇಂಗ್ಲೆಂಡ್ ತಂಡಗಳಿಗೆ ದಂಡ..!
Published On - 4:13 pm, Wed, 11 August 21