AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಹೆಚ್ಚಾಗಿ ಅಭ್ಯಾಸದಲ್ಲಿ ಕಾಣಿಸಿಕೊಳ್ಳದ ಬುಮ್ರಾ; 2ನೇ ಟೆಸ್ಟ್​ನಿಂದ ಯಾರ್ಕರ್​ ಕಿಂಗ್ ಔಟ್..!

Jasprit Bumrah: ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಜಸ್ಪ್ರೀತ್ ಬುಮ್ರಾ ಆಡುವುದಿಲ್ಲ ಎಂಬ ವರದಿ ಖಚಿತವಾಗಿದೆ. ಕೆಲಸದ ಹೊರೆಯ ನಿರ್ವಹಣೆಗೆ ಆದ್ಯತೆ ನೀಡಿ ಬುಮ್ರಾಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಬುಮ್ರಾ ಅವರ ಅನುಪಸ್ಥಿತಿಯು ಭಾರತೀಯ ತಂಡಕ್ಕೆ ದೊಡ್ಡ ಹೊಡೆತವಾಗಿದೆ. ಆದಾಗ್ಯೂ, ಬುಮ್ರಾ ಸೋಮವಾರ ಅಭ್ಯಾಸ ಮಾಡಿದ್ದಾರೆ ಎಂಬುದು ಗಮನಾರ್ಹ.

IND vs ENG: ಹೆಚ್ಚಾಗಿ ಅಭ್ಯಾಸದಲ್ಲಿ ಕಾಣಿಸಿಕೊಳ್ಳದ ಬುಮ್ರಾ; 2ನೇ ಟೆಸ್ಟ್​ನಿಂದ ಯಾರ್ಕರ್​ ಕಿಂಗ್ ಔಟ್..!
Team India
ಪೃಥ್ವಿಶಂಕರ
|

Updated on: Jun 30, 2025 | 8:38 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್‌ 1-0 ಮುನ್ನಡೆ ಪಡೆದುಕೊಂಡಿದೆ. ಉಭಯ ತಂಡಗಳ ನಡುವೆ ನಡೆದ ಲೀಡ್ಸ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಇದೀಗ ಎರಡು ತಂಡಗಳ ನಡುವಿನ ಸರಣಿಯ ಎರಡನೇ ಪಂದ್ಯ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಜುಲೈ 2 ರಿಂದ ಪ್ರಾರಂಭವಾಗಲಿದ್ದು, ಇದಕ್ಕಾಗಿ ಭಾರತೀಯ ತಂಡವು ಸಿದ್ಧತೆಯಲ್ಲಿ ನಿರತವಾಗಿದೆ. ಇದೆಲ್ಲದರ ನಡುವೆ, ತಂಡದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಬಗ್ಗೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ.

ಗಂಭೀರ್, ಬುಮ್ರಾ ಅವರನ್ನು ಹೊರಗಿಟ್ಟರೇ?

ಕಳೆದ ಕೆಲವು ದಿನಗಳಿಂದ, ಜಸ್ಪ್ರೀತ್ ಬುಮ್ರಾ ಸರಣಿಯ ಎರಡನೇ ಪಂದ್ಯದಲ್ಲಿ ಆಡುವುದಿಲ್ಲ ಎಂಬ ವರದಿಗಳು ಕೇಳಿಬರುತ್ತಿವೆ. ಕೆಲಸದ ಹೊರೆ ನಿರ್ವಹಣೆಗೆ ಆದ್ಯತೆ ನೀಡಿ ಬುಮ್ರಾಗೆ ವಿಶ್ರಾಂತಿ ನೀಡುತ್ತಿರುವುದಾಗಿ ವರದಿಯಾಗಿದೆ. ಇದಕ್ಕೆ ಪೂರಕವಾಗಿ ಎಡ್ಜ್‌ಬಾಸ್ಟನ್‌ ಟೆಸ್ಟ್​ಗೆ ಬುಮ್ರಾ ತಂಡದೊಂದಿಗೆ ಅಭ್ಯಾಸ ನಡೆಸದಿರುವುದು ಅವರು ಎರಡನೇ ಟೆಸ್ಟ್‌ನಲ್ಲಿ ಆಡುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಅಭ್ಯಾಸದ ಸಮಯದಲ್ಲಿ ಗಂಭೀರ್ ಮತ್ತು ಬುಮ್ರಾ ನಡುವೆ ದೀರ್ಘ ಸಂಭಾಷಣೆ ನಡೆದಿದ್ದು, ಇದರ ನಂತರ ಎರಡನೇ ಟೆಸ್ಟ್‌ನಲ್ಲಿ ಬುಮ್ರಾಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಆದಾಗ್ಯೂ, ಸೋಮವಾರ ಮಧ್ಯಾಹ್ನ ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಅಭ್ಯಾಸ ಅವಧಿಯಲ್ಲಿ ಜಸ್ಪ್ರೀತ್ ಬುಮ್ರಾ ಬೌಲಿಂಗ್ ಮಾಡಿದರು. ಮತ್ತೊಂದೆಡೆ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಅರ್ಶ್ದೀಪ್ ಸಿಂಗ್ ಮತ್ತು ಪ್ರಸಿದ್ಧ್ ಕೃಷ್ಣ ಮೈದಾನದಲ್ಲಿ ಬೆವರು ಸುರಿಸಿದರು. ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ಎರಡನೇ ಟೆಸ್ಟ್‌ನಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಆದರೆ ಮೊದಲ ಟೆಸ್ಟ್‌ನಲ್ಲಿ, ಸಿರಾಜ್ ಮತ್ತು ಕೃಷ್ಣ ಒಟ್ಟಿಗೆ ಕೇವಲ 9 ವಿಕೆಟ್‌ಗಳನ್ನು ಮಾತ್ರ ಪಡೆದರಾದರೂ ಅವರ ಎಕಾನಮಿ ರೇಟ್ 6 ಕ್ಕಿಂತ ಹೆಚ್ಚಿತ್ತು. ಮತ್ತೊಂದೆಡೆ, ಆಕಾಶ್ ದೀಪ್‌ಗೆ ಮೂರನೇ ವೇಗಿಯಾಗಿ ಅವಕಾಶ ನೀಡಲಾಗುವುದು ಅಥವಾ ಅರ್ಶ್ದೀಪ್ ಸಿಂಗ್ ಟೆಸ್ಟ್‌ನಲ್ಲಿ ಪಾದಾರ್ಪಣೆ ಮಾಡುವ ಅವಕಾಶ ಪಡೆಯಬಹುದು.

IND vs ENG: 2ನೇ ಟೆಸ್ಟ್​ನಿಂದ ಬುಮ್ರಾ ಜೊತೆಗೆ ಕನ್ನಡಿಗನಿಗೂ ಕೋಕ್?

ಮೊದಲ ಟೆಸ್ಟ್‌ನಲ್ಲಿ 5 ವಿಕೆಟ್‌

ಮೊದಲ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಅದ್ಭುತ ಪ್ರದರ್ಶನ ನೀಡಿ ಮೊದಲ ಇನ್ನಿಂಗ್ಸ್​ನಲ್ಲಿ ಐದು ವಿಕೆಟ್ ಕಬಳಿಸಿದರು, ಆದರೆ ಎರಡನೇ ಇನ್ನಿಂಗ್ಸ್​ನಲ್ಲಿ ಅವರಿಗೆ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಇದರ ಹೊರತಾಗಿಯೂ, ಬುಮ್ರಾ ತಂಡದಲ್ಲಿರುವುದು ಬಹಳ ಅವಶ್ಯಕ. ಆದಾಗ್ಯೂ, ಮುಖ್ಯ ಕೋಚ್ ಗೌತಮ್ ಗಂಭೀರ್ ಈಗಾಗಲೇ ಬುಮ್ರಾ ಈ ಸರಣಿಯ ಎಲ್ಲಾ ಐದು ಟೆಸ್ಟ್ ಪಂದ್ಯಗಳನ್ನು ಆಡುವುದಿಲ್ಲ, ಬದಲಿಗೆ ಅವರು ಕೇವಲ ಮೂರು ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಆಡುತ್ತಾರೆ ಎಂದು ಸ್ಪಷ್ಟಪಡಿಸಿದ್ದರು. ಅಂತಹ ಪರಿಸ್ಥಿತಿಯಲ್ಲಿ, ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಬುಮ್ರಾ ಅಭ್ಯಾಸ ಮಾಡದಿರುವುದು ಈ ಪಂದ್ಯದಲ್ಲಿ ಅವರಿಗೆ ವಿಶ್ರಾಂತಿ ನೀಡುವುದು ಖಚಿತ ಎಂಬುದರ ಸೂಚನೆಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ