IND vs ENG 2nd Test: ಎರಡನೇ ಟೆಸ್ಟ್​ನಲ್ಲಿ ಟಾಸ್ ಗೆದ್ದ ಭಾರತ: ರಜತ್ ಪಟಿದಾರ್ ಪದಾರ್ಪಣೆ, 3 ಬದಲಾವಣೆ

India vs England Second Test Playing XI: ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ವೈಜಾಗ್‌ನ ಡಾ. ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ನೋಡಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಪಟ್ಟಿ.

IND vs ENG 2nd Test: ಎರಡನೇ ಟೆಸ್ಟ್​ನಲ್ಲಿ ಟಾಸ್ ಗೆದ್ದ ಭಾರತ: ರಜತ್ ಪಟಿದಾರ್ ಪದಾರ್ಪಣೆ, 3 ಬದಲಾವಣೆ
IND vs ENG 2nd Test
Follow us
Vinay Bhat
|

Updated on:Feb 02, 2024 | 10:01 AM

ವೈಜಾಗ್‌ನ ಡಾ. ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಎರಡನೇ ಟೆಸ್ಟ್ ಪಂದ್ಯಕ್ಕೆ ಚಾಲನೆ ಸಿಕ್ಕಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳಲ್ಲಿ ಕೆಲ ಬದಲಾವಣೆ ಮಾಡಲಾಗಿದ್ದು, ವಿಶೇಷವಾದ ಈ ಪಿಚ್​ನಲ್ಲಿ ಹೇಗೆ ಪ್ರದರ್ಶನ ನೀಡುತ್ತಾರೆ ನೋಡಬೇಕಿದೆ. ಐದು ಪಂದ್ಯಗಳ ಸರಣಿಯಲ್ಲಿ ಮೊದಲ ಮ್ಯಾಚ್ ಗೆದ್ದಿರುವ ಆಂಗ್ಲರು 1-0 ಮುನ್ನಡೆಯಲ್ಲಿದ್ದರೆ, ಟೀಮ್ ಇಂಡಿಯಾ ಕಮ್​ಬ್ಯಾಕ್ ಮಾಡುವ ಯೋಜನೆ ಹಾಕಿಕೊಂಡಿದೆ.

ಭಾರತದಲ್ಲಿ 3 ಬದಲಾವಣೆ:

ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಲಾಗಿದೆ. ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಜಾಗಕ್ಕೆ ಹೊಸ ಆಟಗಾರರ ಎಂಟ್ರಿ ಆಗಿದೆ. ಮೊಹಮ್ಮದ್ ಸಿರಾಜ್​ಗೆ ವಿಶ್ರಾಂತಿ ನೀಡಲಾಗಿದೆ. ಇದೇ ಮೊದಲ ಬಾರಿಗೆ ರಜತ್ ಪಟಿದಾರ್ ಅಂತರರಾಷ್ಟ್ರೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಟೀಮ್ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ್ದಾರೆ.

ಹಾಗೆಯೆ ಮೂರನೇ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಸ್ಪಿನ್ ವಿಭಾಗವನ್ನು ಆರ್. ಅಶ್ವಿನ್ ಮುನ್ನಡೆಸಲಿದ್ದಾರೆ. ವೇಗಿಗಳಾಗಿ ಜಸ್​ಪ್ರಿತ್ ಬುಮ್ರಾ ಮತ್ತು ಮುಖೇಶ್ ಕುಮಾರ್ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
2ನೇ ಟೆಸ್ಟ್ ಆರಂಭಕ್ಕೂ ಮುನ್ನ ಶಾಕ್: ಸ್ಟಾರ್ ಬೌಲರ್ ಸರಣಿಯಿಂದಲೇ ಔಟ್
Image
ಇಂದಿನಿಂದ ಭಾರತ-ಇಂಗ್ಲೆಂಡ್ ಎರಡನೇ ಟೆಸ್ಟ್ ಆರಂಭ: ರೋಚಕತೆ ಸೃಷ್ಟಿಸಿದ ಪಿಚ್
Image
ಸೂಪರ್ ಸಿಕ್ಸ್ ಹಂತದಲ್ಲಿ ಬಲಿಷ್ಠ ಭಾರತಕ್ಕೆ ನೇಪಾಳ ಎದುರಾಳಿ
Image
ಎರಡನೇ ಟೆಸ್ಟ್​ಗೆ ಹೇಗಿರಲಿದೆ ತಂಡ? ಇಲ್ಲಿದೆ ಭಾರತ ಸಂಭಾವ್ಯ ತಂಡ
Rajat Patidar

ರಜತ್ ಪಟಿದಾರ್​ಗೆ ಟೆಸ್ಟ್ ಕ್ಯಾಪ್ ನೀಡಿದ ಜಹೀರ್ ಖಾನ್.

IND vs ENG: ಬರೋಬ್ಬರಿ 4467 ದಿನಗಳ ನಂತರ ಈ ನಾಲ್ವರು ಆಟಗಾರರಿಲ್ಲದೆ ಕಣಕ್ಕಿಳಿಯುತ್ತಿದೆ ಭಾರತ..!

ಇಂಗ್ಲೆಂಡ್​ನಲ್ಲೂ 2 ಬದಲಾವಣೆ:

ಇತ್ತ ಇಂಗ್ಲೆಂಡ್ ತಂಡ ಎರಡು ಬದಲಾವಣೆ ಮಾಡಿಕೊಂಡಿದೆ. ಯುವ ಸ್ಪಿನ್ನರ್ ಶೊಯೆಬ್ ಬಶೀರ್ ಟೆಸ್ಟ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ. ಸ್ಪಿನ್ನರ್ ಜ್ಯಾಕ್ ಲೀಚ್ ಗಾಯಗೊಂಡಿರುವ ಕಾರಣ ಇವರ ಜಾಗದಲ್ಲಿ ಶೊಯೆಬ್​ಗೆ ಸ್ಥಾನ ನೀಡಲಾಗಿದೆ. ಮಾರ್ಕ್​ ವುಡ್ ಅವರನ್ನು ಕೈ ಬಿಡಲಾಗಿದೆ. ಅನುಭವಿ ವೇಗಿ ಜೇಮ್ಸ್ ಅ್ಯಂಡರ್ಸನ್ ಅವರನ್ನು ಪ್ಲೇಯಿಂಗ್ ಇಲೆವೆನ್​ಗೆ ಆಯ್ಕೆ ಮಾಡಲಾಗಿದೆ. ವಿಶೇಷ ಎಂದರೆ ಇಂಗ್ಲೆಂಡ್ ನಾಲ್ವರು ಸ್ಪಿನ್ನರ್​ಗಳನ್ನು ಪ್ರಯೋಗಿಸುತ್ತಿದೆ. ಸ್ಪಿನ್ನರ್​ಗಳಾಗಿ ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ ಹಾಗೂ ಶೊಯೆಬ್ ಬಶೀರ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ನಾಲ್ಕನೇ ಸ್ಪಿನ್ನರ್ ಆಗಿ ಜೋ ರೂಟ್ ಬೌಲಿಂಗ್ ಮಾಡಲಿದ್ದಾರೆ.

ಉಭಯ ತಂಡಗಳು:

ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್, ರಜತ್ ಪಟಿದಾರ್, ಕೆಎಸ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮುಖೇಶ್ ಕುಮಾರ್.

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಶೊಯೆಬ್ ಬಶೀರ್, ಜೇಮ್ಸ್ ಅ್ಯಂಡರ್ಸನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 am, Fri, 2 February 24

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?