ವೈಜಾಗ್‌ನ ಡಾ. ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಎರಡನೇ ಟೆಸ್ಟ್ ಪಂದ್ಯಕ್ಕೆ ಚಾಲನೆ ಸಿಕ್ಕಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳಲ್ಲಿ ಕೆಲ ಬದಲಾವಣೆ ಮಾಡಲಾಗಿದ್ದು, ವಿಶೇಷವಾದ ಈ ಪಿಚ್ನಲ್ಲಿ ಹೇಗೆ ಪ್ರದರ್ಶನ ನೀಡುತ್ತಾರೆ ನೋಡಬೇಕಿದೆ. ಐದು ಪಂದ್ಯಗಳ ಸರಣಿಯಲ್ಲಿ ಮೊದಲ ಮ್ಯಾಚ್ ಗೆದ್ದಿರುವ ಆಂಗ್ಲರು 1-0 ಮುನ್ನಡೆಯಲ್ಲಿದ್ದರೆ, ಟೀಮ್ ಇಂಡಿಯಾ ಕಮ್ಬ್ಯಾಕ್ ಮಾಡುವ ಯೋಜನೆ ಹಾಕಿಕೊಂಡಿದೆ.
ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಲಾಗಿದೆ. ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಜಾಗಕ್ಕೆ ಹೊಸ ಆಟಗಾರರ ಎಂಟ್ರಿ ಆಗಿದೆ. ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಲಾಗಿದೆ. ಇದೇ ಮೊದಲ ಬಾರಿಗೆ ರಜತ್ ಪಟಿದಾರ್ ಅಂತರರಾಷ್ಟ್ರೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಟೀಮ್ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ್ದಾರೆ.
ಹಾಗೆಯೆ ಮೂರನೇ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಸ್ಪಿನ್ ವಿಭಾಗವನ್ನು ಆರ್. ಅಶ್ವಿನ್ ಮುನ್ನಡೆಸಲಿದ್ದಾರೆ. ವೇಗಿಗಳಾಗಿ ಜಸ್ಪ್ರಿತ್ ಬುಮ್ರಾ ಮತ್ತು ಮುಖೇಶ್ ಕುಮಾರ್ ಕಾಣಿಸಿಕೊಂಡಿದ್ದಾರೆ.
IND vs ENG: ಬರೋಬ್ಬರಿ 4467 ದಿನಗಳ ನಂತರ ಈ ನಾಲ್ವರು ಆಟಗಾರರಿಲ್ಲದೆ ಕಣಕ್ಕಿಳಿಯುತ್ತಿದೆ ಭಾರತ..!
ಇತ್ತ ಇಂಗ್ಲೆಂಡ್ ತಂಡ ಎರಡು ಬದಲಾವಣೆ ಮಾಡಿಕೊಂಡಿದೆ. ಯುವ ಸ್ಪಿನ್ನರ್ ಶೊಯೆಬ್ ಬಶೀರ್ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ. ಸ್ಪಿನ್ನರ್ ಜ್ಯಾಕ್ ಲೀಚ್ ಗಾಯಗೊಂಡಿರುವ ಕಾರಣ ಇವರ ಜಾಗದಲ್ಲಿ ಶೊಯೆಬ್ಗೆ ಸ್ಥಾನ ನೀಡಲಾಗಿದೆ. ಮಾರ್ಕ್ ವುಡ್ ಅವರನ್ನು ಕೈ ಬಿಡಲಾಗಿದೆ. ಅನುಭವಿ ವೇಗಿ ಜೇಮ್ಸ್ ಅ್ಯಂಡರ್ಸನ್ ಅವರನ್ನು ಪ್ಲೇಯಿಂಗ್ ಇಲೆವೆನ್ಗೆ ಆಯ್ಕೆ ಮಾಡಲಾಗಿದೆ. ವಿಶೇಷ ಎಂದರೆ ಇಂಗ್ಲೆಂಡ್ ನಾಲ್ವರು ಸ್ಪಿನ್ನರ್ಗಳನ್ನು ಪ್ರಯೋಗಿಸುತ್ತಿದೆ. ಸ್ಪಿನ್ನರ್ಗಳಾಗಿ ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ ಹಾಗೂ ಶೊಯೆಬ್ ಬಶೀರ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ನಾಲ್ಕನೇ ಸ್ಪಿನ್ನರ್ ಆಗಿ ಜೋ ರೂಟ್ ಬೌಲಿಂಗ್ ಮಾಡಲಿದ್ದಾರೆ.
ಉಭಯ ತಂಡಗಳು:
ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಜತ್ ಪಟಿದಾರ್, ಕೆಎಸ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮುಖೇಶ್ ಕುಮಾರ್.
ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಶೊಯೆಬ್ ಬಶೀರ್, ಜೇಮ್ಸ್ ಅ್ಯಂಡರ್ಸನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:04 am, Fri, 2 February 24