AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಬದಲಾವಣೆ ಖಚಿತ; ಟೀಂ ಇಂಡಿಯಾ ಪ್ಲೇಯಿಂಗ್ 11 ಬಗ್ಗೆ ಮೌನ ಮುರಿದ ಕೋಚ್

Team India's Edgbaston Test XI: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾದ ಆಡುವ ಬಳಗದ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ. ಜಸ್ಪ್ರೀಟ್ ಬುಮ್ರಾ ಅವರ ಲಭ್ಯತೆ ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಅವರು ಆಡುವ ಸಾಧ್ಯತೆಯಿದೆ. ಸಹಾಯಕ ಕೋಚ್ ರಿಯಾನ್ ಟೆನ್ ಡೋಸ್ಚೇಟ್ ಅವರು ಇಬ್ಬರು ಸ್ಪಿನ್ನರ್‌ಗಳನ್ನು ಆಡಿಸುವ ಯೋಜನೆಯನ್ನು ಖಚಿತಪಡಿಸಿದ್ದಾರೆ, ಕುಲ್ದೀಪ್ ಯಾದವ್ ಅಥವಾ ವಾಷಿಂಗ್ಟನ್ ಸುಂದರ್ ಅವರಲ್ಲಿ ಒಬ್ಬರು ಆಡುವ ಸಾಧ್ಯತೆ ಹೆಚ್ಚಿದೆ. ಪಂದ್ಯವು ಜುಲೈ 2 ರಂದು ಎಡ್ಜ್‌ಬಾಸ್ಟನ್‌ನಲ್ಲಿ ಆರಂಭವಾಗಲಿದೆ.

IND vs ENG: ಬದಲಾವಣೆ ಖಚಿತ; ಟೀಂ ಇಂಡಿಯಾ ಪ್ಲೇಯಿಂಗ್ 11 ಬಗ್ಗೆ ಮೌನ ಮುರಿದ ಕೋಚ್
Team India
ಪೃಥ್ವಿಶಂಕರ
|

Updated on: Jun 30, 2025 | 10:49 PM

Share

ಇಂಗ್ಲೆಂಡ್‌ ವಿರುದ್ಧದ ಲೀಡ್ಸ್ ಟೆಸ್ಟ್ ಪಂದ್ಯವನ್ನು 5 ವಿಕೆಟ್​ಗಳಿಂದ ಸೋತಿದ್ದ ಟೀಂ ಇಂಡಿಯಾ (Team India) ಇದೀಗ ಎರಡನೇ ಟೆಸ್ಟ್ ಗೆಲ್ಲುವ ಇರಾದೆಯಲ್ಲಿದೆ. ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರಿಕೆಟ್ ಮೈದಾನದಲ್ಲಿ ಜುಲೈ 2 ರಿಂದ ಆರಂಭವಾಗಲಿದೆ. ಈ ಪಂದ್ಯಕ್ಕಾಗಿ ಇಂಗ್ಲೆಂಡ್ ತನ್ನ ಪ್ಲೇಯಿಂಗ್ 11 ಅನ್ನು ಸಹ ಘೋಷಿಸಿದೆ. ಇತ್ತ ಟೀಂ ಇಂಡಿಯಾ ಮಾತ್ರ ಟಾಸ್​ವರೆಗೂ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸದಿರಲು ನಿರ್ಧರಿಸಿದೆ. ಆದರೆ ಮೊದಲ ಪಂದ್ಯದಲ್ಲಿ ಸೋಲನ್ನು ಎದುರಿಸಿದ ಟೀಂ ಇಂಡಿಯಾದ ಪ್ಲೇಯಿಂಗ್ 11 ನಲ್ಲಿ ಕೆಲವು ಬದಲಾವಣೆಗಳನ್ನು ಕಾಣಬಹುದು ಎಂಬ ಮಾತು ಕೇಳಿಬರುತ್ತಿದೆ. ಅಲ್ಲದೆ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಈ ಪಂದ್ಯದ ಭಾಗವಾಗುತ್ತಾರೋ ಇಲ್ಲವೋ ಎಂಬ ಬಗ್ಗೆ ಇನ್ನೂ ಸಸ್ಪೆನ್ಸ್ ಇದೆ. ಇದರ ಹೊರತಾಗಿ, ಪ್ಲೇಯಿಂಗ್ 11 ರಲ್ಲಿ ಹೊಸ ಆಟಗಾರನ ಪ್ರವೇಶವೂ ಖಚಿತವಾಗಿದೆ.

ಪ್ಲೇಯಿಂಗ್ 11 ಬಗ್ಗೆ ಸಹಾಯಕ ಕೋಚ್ ಮಾತು

ವಾಸ್ತವವಾಗಿ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡದ ಆಡುವ 11ರ ಬಳಗದ ಬಗ್ಗೆ ತಂಡದ ಸಹಾಯಕ ಕೋಚ್ ರಿಯಾನ್ ಟೆನ್ ಡೋಸ್ಚೇಟ್ ಮಾಹಿತಿ ನೀಡಿದ್ದಾರೆ. ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ರಿಯಾನ್, ‘ವೇಗಿ ಬುಮ್ರಾ ಈ ಪಂದ್ಯಕ್ಕೆ ಲಭ್ಯರಿದ್ದಾರೆ, ಆದರೆ ಮುಂದಿನ 24 ಗಂಟೆಗಳಲ್ಲಿ ಅವರು ಆಡುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ. ಮತ್ತೊಂದೆಡೆ, ತಂಡವು ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯಲು ಯೋಜಿಸುತ್ತಿದೆ. ಆ ಪ್ರಕಾರ ಕುಲ್ದೀಪ್ ಯಾದವ್ ಅಥವಾ ವಾಷಿಂಗ್ಟನ್ ಸುಂದರ್ ಅವರಿಗೆ ತಂಡದಲ್ಲಿ ಅವಕಾಶ ಸಿಗಬಹುದು.

ಬುಮ್ರಾ ಆಯ್ಕೆಗೆ ಲಭ್ಯ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಿಯಾನ್ ಟೆನ್ ಡೋಸ್ಚೇಟ್, ‘ ಬುಮ್ರಾ ಅವರು ಆಯ್ಕೆಗೆ ಲಭ್ಯವಿದ್ದಾರೆ. ಅವರು ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಮಾತ್ರ ಆಡುತ್ತಾರೆ ಎಂದು ನಮಗೆ ಮೊದಲಿನಿಂದಲೂ ತಿಳಿದಿದೆ. ಆದರೆ ಮೊದಲ ಟೆಸ್ಟ್​ ನಡೆದು 8 ದಿನಗಳು ಕಳೆದಿವೆ. ಹೀಗಾಗಿ ಬುಮ್ರಾ ಚೇತರಿಸಿಕೊಳ್ಳುವುದಕ್ಕೂ ಕಾಲವಕಾಶ ಸಿಕ್ಕಿದ್ದು, ಮುಂದಿನ ಪಂದ್ಯದಲ್ಲಿ ಅವರು ಆಡುವ ಬಗ್ಗೆ ನಾವು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಈ ಟೆಸ್ಟ್‌ನಲ್ಲಿ ಅವರನ್ನು ಆಡಿಸುವುದರಿಂದ ಅನುಕೂಲವಿದೆ ಎಂದು ನಾವು ಭಾವಿಸಿದರೆ, ಕೊನೆಯ ಕ್ಷಣದಲ್ಲಿ ನಾವು ಈ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಅನುಕೂಲ ಎಂದರೆ ಹವಾಮಾನ, ಪಿಚ್ ಮತ್ತು ಪರಿಸ್ಥಿತಿಗಳ ಮೇಲೆ ಬುಮ್ರಾರನ್ನು ಆಡಿಸುವ ಬಗ್ಗೆ ಯೋಚಿಸಲಾಗುತ್ತದೆ’.

ಇಂಗ್ಲೆಂಡ್‌ ಪ್ರವಾಸದಲ್ಲಿ ಭಾರತದ ಮತ್ತೊಂದು ತಂಡ; ಮೊದಲ ಪಂದ್ಯದಲ್ಲೇ ಭರ್ಜರಿ ಶತಕ ಸಿಡಿಸಿದ ಮುಶೀರ್ ಖಾನ್

ಇಬ್ಬರು ಸ್ಪಿನ್ನರ್ ಕಣಕ್ಕೆ

ಹಾಗೆಯೇ ಇಬ್ಬರು ಸ್ಪಿನ್ನರ್​ಗಳನ್ನು ಆಡಿಸುವ ಬಗ್ಗೆಯೂ ಮಾತನಾಡಿದ ಅವರು, ‘ಇಬ್ಬರು ಸ್ಪಿನ್ನರ್‌ಗಳನ್ನು ಆಡಿಸುವ ಸಾಧ್ಯತೆಗಳು ಹೆಚ್ಚಿವೆ. ನಾವು ಯಾವ ಇಬ್ಬರು ಸ್ಪಿನ್ನರ್‌ಗಳನ್ನು ಆಡಿಸುತ್ತೇವೆ ಎಂಬುದನ್ನು ಕಾದು ನೋಡಬೇಕಾಗಿದೆ. ಇದು ಬ್ಯಾಟಿಂಗ್‌ನಲ್ಲಿ ಹೆಚ್ಚಿನ ಆಯ್ಕೆಗಳನ್ನು ಸೇರಿಸುವುದಕ್ಕೂ ಸಂಬಂಧಿಸಿದೆ. ತಂಡದಲ್ಲಿರುವ ಮೂವರು ಸ್ಪಿನ್ನರ್‌ಗಳು ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಆದರೆ ಬ್ಯಾಟಿಂಗ್ ವಿಷಯದಲ್ಲಿ ವಾಷಿಂಗ್ಟನ್ ಸುಂದರ್ ನಮಗೆ ನೆರವಾಗಲಿದ್ದಾರೆ. ಆದಾಗ್ಯೂ ನಾವು ಯಾವ ಸಂಯೋಜನೆಯೊಂದಿಗೆ ಹೋಗುತ್ತೇವೆ ಎಂಬುದನ್ನು ಕಾದು ನೋಡಬೇಕು’ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ