ಟಿ20 ಮಾದರಿಯಲ್ಲಿ ಟೆಸ್ಟ್ ಆಡಿದ ಹಿಟ್ಮ್ಯಾನ್: ಮಗುವಿನ ಮೇಲೆ ದಬ್ಬಾಳಿಕೆ ಎಂದ ನೆಟ್ಟಿಗರು
India vs England 2nd test: ಮೊದಲ ವಿಕೆಟ್ಗೆ 126 ರನ್ ಪೇರಿಸುವ ಮೂಲಕ ಈ ಜೋಡಿ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟರು. ಇದೇ ವೇಳೆ ಜೇಮ್ಸ್ ಅಂಡರ್ಸನ್ ಎಸೆತವನ್ನು ಗುರುತಿಸುವಲ್ಲಿ ಎಡವಿದ ಹಿಟ್ಮ್ಯಾನ್ ಕ್ಲೀನ್ ಬೌಲ್ಡ್ ಆಗಿ ಹೊರನಡೆದರು.

ಲಾರ್ಡ್ಸ್ ಮೈದಾನದಲ್ಲಿ ಭಾರತ-ಇಂಗ್ಲೆಂಡ್ (India vs England 2nd test) ನಡುವೆ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ (Rohit Sharma) ಅಕ್ಷರಶಃ ಅಬ್ಬರಿಸಿದ್ದರು. ಆರಂಭದಲ್ಲಿ ತುಸು ಎಚ್ಚರಿಕೆಯ ಆಟ ಪ್ರದರ್ಶಿಸಿದ್ದ ಹಿಟ್ಮ್ಯಾನ್ ಆ ಬಳಿಕ ಬಿರುಸಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಅದರಲ್ಲೂ ಇಂಗ್ಲೆಂಡ್ ಯುವ ಎಡಗೈ ವೇಗಿ ಸ್ಯಾಮ್ ಕರನ್ ಅವರನ್ನು ಬೆಂಡೆತ್ತುವ ಮೂಲಕ ರೋಹಿತ್ ಶರ್ಮಾ ಸ್ಪೋಟಕ ಇನಿಂಗ್ಸ್ ಕಟ್ಟಿದರು.
ಮಳೆಯ ಕಾರಣ 20 ನಿಮಿಷ ತಡವಾಗಿ ಶುರುವಾದ ಈ ಪಂದ್ಯದಲ್ಲಿ ಭಾರತ ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿಸಲ್ಪಟಿತು. ಆದರೆ ಇಂಗ್ಲೆಂಡ್ ನಾಯಕನ ನಿರ್ಧಾರವನ್ನು ಪ್ರಶ್ನಿಸುವಂತೆ ಇನಿಂಗ್ಸ್ ಆರಂಭಿಸಿದ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಟೀಮ್ ಇಂಡಿಯಾ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್ಗೆ 126 ರನ್ ಪೇರಿಸುವ ಮೂಲಕ ಈ ಜೋಡಿ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟರು. ಇದೇ ವೇಳೆ ಜೇಮ್ಸ್ ಅಂಡರ್ಸನ್ ಎಸೆತವನ್ನು ಗುರುತಿಸುವಲ್ಲಿ ಎಡವಿದ ಹಿಟ್ಮ್ಯಾನ್ ಕ್ಲೀನ್ ಬೌಲ್ಡ್ ಆಗಿ ಹೊರನಡೆದರು. ಆದರೆ ಇದಕ್ಕೂ ಮುನ್ನವೇ ರೋಹಿತ್ ಶರ್ಮಾ 145 ಎಸೆತಗಳಲ್ಲಿ 83 ರನ್ ಬಾರಿಸಿದ್ದರು.
ಸ್ವಿಂಗ್ಗೆ ಸಹಕಾರಿಯಾಗಿದ್ದ ಪಿಚ್ನಲ್ಲಿ ಹಿಟ್ಮ್ಯಾನ್ ಮಾತ್ರ ತಮ್ಮ ಸ್ಪೋಟಕ ಆಟ ಪ್ರದರ್ಶಿಸಿದರು. ಈ ವೇಳೆ ರೋಹಿತ್ ಶರ್ಮಾ ವಿಕೆಟ್ ಉರುಳಿಸುವ ವಿಶ್ವಾಸದೊಂದಿಗೆ ಚೆಂಡೆತ್ತಿಕೊಂಡು ಬಂದ ಸ್ಯಾಮ್ ಕರನ್ ಅವರನ್ನು ಬೆಂಡೆತ್ತಿದರು. ಒಂದೇ ಓವರ್ನಲ್ಲಿ ನಾಲ್ಕು ಬೌಂಡರಿ ಬಾರಿಸಿ ಹಿಟ್ಮ್ಯಾನ್ ಟಿ20 ಮಾದರಿಯ ಬ್ಯಾಟಿಂಗ್ ಪ್ರದರ್ಶಿಸಿದರು. ಅಷ್ಟೇ ಅಲ್ಲದೆ ಕರನ್ ಎಸೆದ 10 ಎಸೆತಗಳನ್ನು ಎದುರಿಸಿದ ರೋಹಿತ್ 5 ಬೌಂಡರಿಗಳನ್ನು ಬಾರಿಸಿದರು. ಇತ್ತ ಹಿಟ್ಮ್ಯಾನ್ ಅಬ್ಬರಕ್ಕೆ ಯುವ ವೇಗಿ ಕಂಗಾಲಾದರು.
ಇದೀಗ ರೋಹಿತ್ ಶರ್ಮಾ ಅವರ ಸಿಡಿಲಬ್ಬರದ ಬ್ಯಾಟಿಂಗ್ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಟೆಸ್ಟ್ನಲ್ಲಿ ಟಿ20 ಮಾದರಿಯಲ್ಲಿ ಮಗುವಿನ ಮೇಲೆ ಹಿಟ್ಮ್ಯಾನ್ನ ಗದಾಪ್ರಹಾರ ಎಂದು ಟ್ರೋಲ್ ಮಾಡಲಾಗುತ್ತಿದೆ. ಒಟ್ಟಿನಲ್ಲಿ ಏಕದಿನ ಮತ್ತು ಟಿ20 ಕ್ರಿಕೆಟ್ಗೆ ಸೀಮಿತವಾಗಿದ್ದ ರೋಹಿತ್ ಶರ್ಮಾ ಇದೀಗ ಟೆಸ್ಟ್ನಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಕಳೆದ ಪಂದ್ಯದಲ್ಲಿ 107 ಎಸೆತಗಳಲ್ಲಿ ಕೇವಲ 36 ರನ್ ಬಾರಿಸಿ ತಮ್ಮ ರಕ್ಷಣಾತ್ಮಕ ಆಟವನ್ನು ಪ್ರದರ್ಶಿಸಿದ್ದ ಹಿಟ್ಮ್ಯಾನ್ ಲಾರ್ಡ್ಸ್ ಮೈದಾನದಲ್ಲಿ 145 ಎಸೆತಗಳಲ್ಲಿ 83 ರನ್ ಸಿಡಿಸಿ ಘರ್ಜಿಸಿರುವುದು ವಿಶೇಷ.
ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್: ಟೀಮ್ ಇಂಡಿಯಾ- ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್
ಇಂಗ್ಲೆಂಡ್ – ರೋರಿ ಬರ್ನ್ಸ್, ಡೊಮ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್, ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್, ಮೊಯೀನ್ ಅಲಿ, ಸ್ಯಾಮ್ ಕರನ್, ಓಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಅಂಡರ್ಸನ್
ಇದನ್ನೂ ಓದಿ: Ola electric scooter: ಓಲಾ ಸ್ಕೂಟರ್ನಲ್ಲಿ ರಿವರ್ಸ್ ಗೇರ್ ಇರಲಿದೆಯಾ? ಇಲ್ಲಿದೆ ಮಾಹಿತಿ
ಇದನ್ನೂ ಓದಿ: ಇಂಟರ್‌ನೆಟ್ ಸೇವೆಗೆ ಟಾಟಾ ಸಜ್ಜು: ನೆಟ್ವರ್ಕ್ ಇಲ್ಲದೆಯೂ ಸಿಗಲಿದೆ ಅಂತರ್ಜಾಲ ಸೇವೆ
ಇದನ್ನೂ ಓದಿ: Health Tips : ಇದು ನಿಮಗೆ ಗೊತ್ತೇ? ಬೆಳ್ಳುಳ್ಳಿ ಸಿಪ್ಪೆಯಿಂದ ಸಿಗುತ್ತೆ ಹಲವು ಪ್ರಯೋಜನಗಳು
ಇದನ್ನೂ ಓದಿ: Toyota Cars: ಜೋಳ ನೀಡಿ ಟೊಯೋಟಾ ಕಾರು ಖರೀದಿಸುವ ಅವಕಾಶ
