IND vs ENG: ಆಂಗ್ಲರು ಆಲೌಟ್: ಟೀಮ್ ಇಂಡಿಯಾಗೆ ಭರ್ಜರಿ ಜಯ

India vs England, 2nd Test: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಮೂರು ಐದು ಪಂದ್ಯಗಳ ಸರಣಿಯನ್ನು 1-1 ಅಂತರದಿಂದ ಸಮಗೊಳಿಸಿದೆ. ಇದಕ್ಕೂ ಮುನ್ನ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿತ್ತು.

IND vs ENG: ಆಂಗ್ಲರು ಆಲೌಟ್: ಟೀಮ್ ಇಂಡಿಯಾಗೆ ಭರ್ಜರಿ ಜಯ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Feb 05, 2024 | 2:16 PM

ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಪರ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಬಿರುಸಿನ ಬ್ಯಾಟಿಂಗ್​ನೊಂದಿಗೆ ಇಂಗ್ಲೆಂಡ್ ಬೌಲರ್​ಗಳ ಬೆಂಡೆತ್ತಿದ ಯಶಸ್ವಿ ಜೈಸ್ವಾಲ್ 290 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 19 ಫೋರ್​ಗಳೊಂದಿಗೆ 209 ರನ್ ಬಾರಿಸಿದ್ದರು. ಈ ಭರ್ಜರಿ ದ್ವಿಶತಕದ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 396 ರನ್ ಕಲೆಹಾಕಿತು.

ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ ಅವರ ಮಾರಕ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಕೇವಲ 253 ರನ್​ಗಳಿಗೆ ಆಲೌಟ್ ಆಯಿತು. ಭಾರತದ ಪರ ಬುಮ್ರಾ 45 ರನ್ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದರು.

ದ್ವಿತೀಯ ಇನಿಂಗ್ಸ್​:

ಮೊದಲ ಇನಿಂಗ್ಸ್​​ನಲ್ಲಿನ 143 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಶುಭ್​ಮನ್ ಗಿಲ್ (104) ಭರ್ಜರಿ ಶತಕ ಬಾರಿಸಿ ಮಿಂಚಿದರು. ಈ ಶತಕದ ಹೊರತಾಗಿಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಭಾರತ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 255 ರನ್​ಗಳಿಗೆ ಆಲೌಟ್ ಆಯಿತು.

ಬಿಗ್ ಟಾರ್ಗೆಟ್​:

ಮೊದಲ ಇನಿಂಗ್ಸ್​ನಲ್ಲಿ 143 ರನ್​ಗಳ ಹಿನ್ನಡೆ ಹೊಂದಿದ್ದ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಒಟ್ಟು 399 ರನ್​ಗಳ ಟಾರ್ಗೆಟ್ ಪಡೆಯಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಝಾಕ್ ಕ್ರಾಲಿ (73) ಉತ್ತಮ ಆರಂಭ ಒದಗಿಸಿದ್ದರು. ಆದರೆ 4ನೇ ದಿನದಾಟದ ಮೊದಲ ಸೆಷನ್​ನಲ್ಲೇ 5 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯದೊಂದಿಗೆ ಸಂಕಷ್ಟಕ್ಕೆ ಸಿಲುಕಿದ ಇಂಗ್ಲೆಂಡ್ ವಿರುದ್ಧ ಭಾರತೀಯ ಬೌಲರ್​ಗಳು ಪರಾಕ್ರಮ ಮೆರೆದರು.

ಪರಿಣಾಮ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 292 ರನ್​ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯವನ್ನು 106 ರನ್​ಗಳಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ ಹಾಗೂ ರವಿಚಂದ್ರನ್ ಅಶ್ವಿನ್ ತಲಾ 3 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಉಭಯ ತಂಡಗಳು ಸಮಬಲ:

ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದೆ. ಇದಕ್ಕೂ ಮುನ್ನ ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿತ್ತು. ಇದೀಗ ವಿಶಾಖಪಟ್ಟಣಂನಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸರಣಿಯನ್ನು ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ.

ಇನ್ನು ಈ ಸರಣಿಯ ಮೂರನೇ ಪಂದ್ಯವು ಫೆಬ್ರವರಿ 15 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್ , ಶುಭಮನ್ ಗಿಲ್ , ಶ್ರೇಯಸ್ ಅಯ್ಯರ್ , ರಜತ್ ಪಾಟಿದಾರ್ , ಶ್ರೀಕರ್ ಭರತ್ (ವಿಕೆಟ್ ಕೀಪರ್) , ರವಿಚಂದ್ರನ್ ಅಶ್ವಿನ್ , ಅಕ್ಷರ್ ಪಟೇಲ್ , ಕುಲದೀಪ್ ಯಾದವ್ , ಜಸ್ಪ್ರೀತ್ ಬುಮ್ರಾ , ಮುಖೇಶ್ ಕುಮಾರ್.

ಇದನ್ನೂ ಓದಿ: Rohit Sharma: ವಿರಾಟ್ ಕೊಹ್ಲಿಯನ್ನೇ ಹಿಂದಿಕ್ಕಿದ ರೋಹಿತ್ ಶರ್ಮಾ

ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ , ಬೆನ್ ಡಕೆಟ್ , ಒಲ್ಲಿ ಪೋಪ್ , ಜೋ ರೂಟ್ , ಜಾನಿ ಬೈರ್‌ಸ್ಟೋ , ಬೆನ್ ಸ್ಟೋಕ್ಸ್ (ನಾಯಕ) , ಬೆನ್ ಫೋಕ್ಸ್ (ವಿಕೆಟ್ ಕೀಪರ್) , ರೆಹಾನ್ ಅಹ್ಮದ್ , ಟಾಮ್ ಹಾರ್ಟ್ಲಿ , ಶೋಯೆಬ್ ಬಶೀರ್ , ಜೇಮ್ಸ್ ಅ್ಯಂಡರ್ಸನ್.

Published On - 2:13 pm, Mon, 5 February 24

ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ