IND vs ENG: ಸರಣಿ ನಿರ್ಧಾರಕ ಪಂದ್ಯ ಎಷ್ಟು ಗಂಟೆಗೆ ಆರಂಭ; ಉಚಿತವಾಗಿ ವೀಕ್ಷಿಸುವುದು ಹೇಗೆ?

India vs England 3rd ODI: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯ ಜುಲೈ 18 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 3:30 ಕ್ಕೆ ಆರಂಭವಾಗುವ ಈ ರೋಮಾಂಚಕ ಕದನವನ್ನು ಸೋನಿ ಸ್ಪೋರ್ಟ್ಸ್ ಮತ್ತು ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ನೇರ ವೀಕ್ಷಿಸಬಹುದು. ಸರಣಿ ಗೆಲುವಿಗೆ ಉಭಯ ತಂಡಗಳು ಸಜ್ಜಾಗಿವೆ. ಪಂದ್ಯದ ಸಂಪೂರ್ಣ ವಿವರ, ತಂಡಗಳ ಪಟ್ಟಿ ಇಲ್ಲಿದೆ.

IND vs ENG: ಸರಣಿ ನಿರ್ಧಾರಕ ಪಂದ್ಯ ಎಷ್ಟು ಗಂಟೆಗೆ ಆರಂಭ; ಉಚಿತವಾಗಿ ವೀಕ್ಷಿಸುವುದು ಹೇಗೆ?
Ind Vs Eng

Updated on: Jul 18, 2026 | 9:52 PM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ನಿರ್ಣಾಯಕ ಪಂದ್ಯ ಭಾನುವಾರ (ಜುಲೈ 19) ಲಂಡನ್‌ನ ಐತಿಹಾಸಿಕ ಲಾರ್ಡ್ಸ್ (Lord’s) ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಎರಡೂ ತಂಡಗಳು ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿವೆ. ಹೀಗಾಗಿ ಸರಣಿಯ ಈ ಹೈವೋಲ್ಟೇಜ್ ಕದನ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ನಡೆಯಲಿದೆ ಎಂಬುದನ್ನು ನಾವು ನಿಮಗೆ ತಿಳಿಸಲಿದ್ದೇವೆ. ಸರಣಿಯ ಮೊದಲ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:30ಕ್ಕೆ ಆರಂಭವಾಗಿತ್ತು. ಆದರೆ ಎರಡನೇ ಏಕದಿನ ಪಂದ್ಯ ಇನ್ನು ತಡವಾಗಿ ಆರಂಭವಾಗಿತ್ತು. ಅಂದರೆ ಪಂದ್ಯ ಭಾರತೀಯ ಕಾಲಮಾನ ಸಂಜೆ 5:30 ಕ್ಕೆ ಆರಂಭವಾಗಿತ್ತು. ಇದೀಗ ಮೂರನೇ ಏಕದಿನ ಪಂದ್ಯ ಬದಲಾದ ಸಮಯದಲ್ಲಿ ಶುರುವಾಗಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಜುಲೈ 18 ರಂದು ನಡೆಯಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಲಾರ್ಡ್ಸ್‌ನಲ್ಲಿ ನಡೆಯಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಡಿಜಿಟಲ್ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವ ಸೌಲಭ್ಯವನ್ನು ನೀಡುತ್ತದೆ.

IND vs ENG: ಲಾರ್ಡ್ಸ್‌ನಲ್ಲಿ ಶತಕಗಳ ಬರ! ಟೀಂ ಇಂಡಿಯಾಕ್ಕೆ ಗೆಲುವೊಂದೇ ಗುರಿಯಲ್ಲ

ಉಭಯ ತಂಡಗಳು

ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹರ್ಷ್ ದುಬೆ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಶ್ದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.

ಇಂಗ್ಲೆಂಡ್‌ ತಂಡ: ಹ್ಯಾರಿ ಬ್ರೂಕ್, ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಜೇಮ್ಸ್ ಕೋಲ್ಸ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಸಾಕಿಬ್ ಮಹಮೂದ್, ಆದಿಲ್ ರಶೀದ್, ಜೋ ರೂಟ್, ಜೋಶ್ ಟಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us