India vs England 3rd ODI Match Live Streaming: ನಾಳೆ ಫೈನಲ್; ಪಂದ್ಯ ಆರಂಭದ ಸಮಯ 5:30 ಅಲ್ಲ

India vs England 3rd ODI Match Live Streaming: ಭಾರತ ಮತ್ತು ಇಂಗ್ಲೆಂಡ್ ನಡುವಿನ 3 ಏಕದಿನ ಸರಣಿಯ ಕೊನೆಯ ಮತ್ತು ಅಂತಿಮ ಪಂದ್ಯ ಭಾನುವಾರ ನಡೆಯಲಿದೆ.

India vs England 3rd ODI Match Live Streaming: ನಾಳೆ ಫೈನಲ್; ಪಂದ್ಯ ಆರಂಭದ ಸಮಯ 5:30 ಅಲ್ಲ
India vs England
Follow us
TV9 Web
| Updated By: ಪೃಥ್ವಿಶಂಕರ

Updated on:Jul 16, 2022 | 3:01 PM

ಭಾನುವಾರ ಭಾರತ ಮತ್ತು ಇಂಗ್ಲೆಂಡ್ (India and England) ನಡುವೆ ಏಕದಿನ ಸರಣಿಯ ಅಂತಿಮ ಪಂದ್ಯ ನಡೆಯಲಿದೆ. ಇಬ್ಬರ ನಡುವಿನ 3 ಪಂದ್ಯಗಳ ಸರಣಿ 1-1ರಲ್ಲಿ ಸಮಬಲವಾಗಿದ್ದು, ಕೊನೆಯ ಪಂದ್ಯ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ. ಭಾರತ ಮೊದಲ ಪಂದ್ಯವನ್ನು 10 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಆದರೆ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ಪ್ರಬಲವಾಗಿ ಸೇಡು ತೀರಿಸಿಕೊಂಡಿತು ಮತ್ತು 100 ರನ್‌ಗಳ ಗೆಲುವು ದಾಖಲಿಸುವ ಮೂಲಕ ಸರಣಿಯನ್ನು ಆಸಕ್ತಿದಾಯಕವಾಗಿಸಿತು. ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ ಈಗ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ, ಆದರೆ ಈ ಗೆಲುವಿಗೆ ಭಾರತದ ಅಗ್ರ ಕ್ರಮಾಂಕವು ಹಿಂದಿನ ಪಂದ್ಯದಲ್ಲಿನ ಕಳಪೆ ಪ್ರದರ್ಶನವನ್ನು ಮರೆತು ಅಬ್ಬರಿಸಬೇಕಿದೆ.

ಮೊದಲ ಏಕದಿನ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ 19 ರನ್ ನೀಡಿ 6 ವಿಕೆಟ್ ಕಬಳಿಸಿದರೆ, ಎರಡನೇ ಪಂದ್ಯದಲ್ಲಿ 2 ವಿಕೆಟ್ ಪಡೆದರು. ಆದರೆ ಎರಡನೇ ODI ಪಂದ್ಯದಲ್ಲಿ, ರೀಸ್ ಟೋಪ್ಲಿ 24ಕ್ಕೆ 6 ವಿಕೆಟ್ ಪಡೆದರು. ಮ್ಯಾಂಚೆಸ್ಟರ್‌ನ ಈ ಪಿಚ್ ಬಗ್ಗೆ ಮಾತನಾಡುವುದಾದರೆ, ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಮಾಡಲು ಆದ್ಯತೆ ನೀಡುತ್ತದೆ. ಈ ಮೈದಾನದಲ್ಲಿ ಅತಿ ಹೆಚ್ಚು ಏಕದಿನ ಸ್ಕೋರ್ ಗಳಿಸಿದ ದಾಖಲೆ ಇಂಗ್ಲೆಂಡ್ ಹೆಸರಿನಲ್ಲಿದೆ. ಇಂಗ್ಲೆಂಡ್ ಇಲ್ಲಿ 396 ರನ್ ಗಳಿಸಿತ್ತು. ಈ ಮೈದಾನದಲ್ಲಿ ಭಾರತದ ಗರಿಷ್ಠ ಏಕದಿನ ಸ್ಕೋರ್ 336 ರನ್ ಆಗಿದೆ.

ಪಂದ್ಯದ ಬಗೆಗಿನ ಹೆಚ್ಚಿನ ಮಾಹಿತಿ ಇಲ್ಲಿದೆ

ಇದನ್ನೂ ಓದಿ
Image
NZ vs IRE: ಒಂದು ಟವಲ್​ನಿಂದ ಮಿಸ್ಸಾಯ್ತು ವಿಕೆಟ್; ಔಟ್ ನೀಡಿ ಬಳಿಕ ನಾಟೌಟ್ ಎಂದ ಅಂಪೈರ್! ವಿಡಿಯೋ ನೋಡಿ
Image
Mohammed Shami: ಇಂಜುರಿ, ವೈಯಕ್ತಿಕ ಸಮಸ್ಯೆ, ಕಳಪೆ ಪ್ರದರ್ಶನಗಳ ನಡುವೆ ಬೌಲಿಂಗ್​ನಲ್ಲಿ ಅದ್ಭುತ ದಾಖಲೆ ಬರೆದ ಶಮಿ
Image
IND vs ENG: ಭಾರತೀಯರೇ ತೆಗಳುತ್ತಿರುವಾಗ ಕೊಹ್ಲಿ ಬೆನ್ನಿಗೆ ನಿಂತ ಪಾಕ್ ನಾಯಕ ಬಾಬರ್; ಹೇಳಿದ್ದೇನು ಗೊತ್ತಾ?

ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಭಾನುವಾರ ಜುಲೈ 17 ರಂದು ನಡೆಯಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಏಕದಿನ ಪಂದ್ಯ ಯಾವ ಸಮಯಕ್ಕೆ ಆರಂಭವಾಗಲಿದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ 3 ನೇ ODI ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದ ನೇರ ಪ್ರಸಾರವನ್ನು ಸೋನಿ ನೆಟ್‌ವರ್ಕ್‌ನ ಚಾನೆಲ್‌ನಲ್ಲಿ ನೋಡಬಹುದು.

ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ODI ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?

ಸೋನಿ ಟೆನ್ 3 ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ODI ನ ಲೈವ್ ಸ್ಟ್ರೀಮಿಂಗ್ ಅನ್ನು ಹಿಂದಿಯಲ್ಲಿ ವೀಕ್ಷಿಸಬಹುದು. ಜೊತೆಗೆ ಸೋನಿ ಸಿಕ್ಸ್‌ನಲ್ಲಿ ಇಂಗ್ಲಿಷ್‌ನಲ್ಲಿ ವೀಕ್ಷಿಸಬಹುದಾಗಿದೆ.

Published On - 3:01 pm, Sat, 16 July 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್