ಭಾನುವಾರ ಭಾರತ ಮತ್ತು ಇಂಗ್ಲೆಂಡ್ (India and England) ನಡುವೆ ಏಕದಿನ ಸರಣಿಯ ಅಂತಿಮ ಪಂದ್ಯ ನಡೆಯಲಿದೆ. ಇಬ್ಬರ ನಡುವಿನ 3 ಪಂದ್ಯಗಳ ಸರಣಿ 1-1ರಲ್ಲಿ ಸಮಬಲವಾಗಿದ್ದು, ಕೊನೆಯ ಪಂದ್ಯ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ. ಭಾರತ ಮೊದಲ ಪಂದ್ಯವನ್ನು 10 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಆದರೆ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ಪ್ರಬಲವಾಗಿ ಸೇಡು ತೀರಿಸಿಕೊಂಡಿತು ಮತ್ತು 100 ರನ್‌ಗಳ ಗೆಲುವು ದಾಖಲಿಸುವ ಮೂಲಕ ಸರಣಿಯನ್ನು ಆಸಕ್ತಿದಾಯಕವಾಗಿಸಿತು. ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ ಈಗ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ, ಆದರೆ ಈ ಗೆಲುವಿಗೆ ಭಾರತದ ಅಗ್ರ ಕ್ರಮಾಂಕವು ಹಿಂದಿನ ಪಂದ್ಯದಲ್ಲಿನ ಕಳಪೆ ಪ್ರದರ್ಶನವನ್ನು ಮರೆತು ಅಬ್ಬರಿಸಬೇಕಿದೆ.
ಮೊದಲ ಏಕದಿನ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ 19 ರನ್ ನೀಡಿ 6 ವಿಕೆಟ್ ಕಬಳಿಸಿದರೆ, ಎರಡನೇ ಪಂದ್ಯದಲ್ಲಿ 2 ವಿಕೆಟ್ ಪಡೆದರು. ಆದರೆ ಎರಡನೇ ODI ಪಂದ್ಯದಲ್ಲಿ, ರೀಸ್ ಟೋಪ್ಲಿ 24ಕ್ಕೆ 6 ವಿಕೆಟ್ ಪಡೆದರು. ಮ್ಯಾಂಚೆಸ್ಟರ್‌ನ ಈ ಪಿಚ್ ಬಗ್ಗೆ ಮಾತನಾಡುವುದಾದರೆ, ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಮಾಡಲು ಆದ್ಯತೆ ನೀಡುತ್ತದೆ. ಈ ಮೈದಾನದಲ್ಲಿ ಅತಿ ಹೆಚ್ಚು ಏಕದಿನ ಸ್ಕೋರ್ ಗಳಿಸಿದ ದಾಖಲೆ ಇಂಗ್ಲೆಂಡ್ ಹೆಸರಿನಲ್ಲಿದೆ. ಇಂಗ್ಲೆಂಡ್ ಇಲ್ಲಿ 396 ರನ್ ಗಳಿಸಿತ್ತು. ಈ ಮೈದಾನದಲ್ಲಿ ಭಾರತದ ಗರಿಷ್ಠ ಏಕದಿನ ಸ್ಕೋರ್ 336 ರನ್ ಆಗಿದೆ.
ಪಂದ್ಯದ ಬಗೆಗಿನ ಹೆಚ್ಚಿನ ಮಾಹಿತಿ ಇಲ್ಲಿದೆ
ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಭಾನುವಾರ ಜುಲೈ 17 ರಂದು ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಏಕದಿನ ಪಂದ್ಯ ಯಾವ ಸಮಯಕ್ಕೆ ಆರಂಭವಾಗಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 3 ನೇ ODI ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದ ನೇರ ಪ್ರಸಾರವನ್ನು ಸೋನಿ ನೆಟ್‌ವರ್ಕ್‌ನ ಚಾನೆಲ್‌ನಲ್ಲಿ ನೋಡಬಹುದು.
ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ODI ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?
ಸೋನಿ ಟೆನ್ 3 ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ODI ನ ಲೈವ್ ಸ್ಟ್ರೀಮಿಂಗ್ ಅನ್ನು ಹಿಂದಿಯಲ್ಲಿ ವೀಕ್ಷಿಸಬಹುದು. ಜೊತೆಗೆ ಸೋನಿ ಸಿಕ್ಸ್‌ನಲ್ಲಿ ಇಂಗ್ಲಿಷ್‌ನಲ್ಲಿ ವೀಕ್ಷಿಸಬಹುದಾಗಿದೆ.
Published On - 3:01 pm, Sat, 16 July 22